ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ […]






