ಕ್ರೈಮ್ ನ್ಯೂಸ್

ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ಮೀರತ್‌, ಜು. 05. ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ. ಪ್ರವೀಣ್ ಕುಮಾರ್ ಹಾಗೂ ಅವರೊಂದಿಗಿದ್ದ ಪುತ್ರ ಅಪಾಯದಿಂದ ಪಾರಾಗಿದ್ದಾರೆ. ಇವರು ಉತ್ತರ ಪ್ರದೇಶದ ಮೀರತ್‌ ನಲ್ಲಿರುವ ತಮ್ಮ ಮನೆಗೆ ಮರಳುವ ವೇಳೆ ವೇಗವಾಗಿ ಬಂದ ಟ್ರಕ್‌ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ರವರು ಭಾರತದ […]

ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ಅಪಘಾತ Read More »

ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 05. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ಬುಧವಾರದಂದು ನಡೆದಿದೆ. ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ತುಂಬೆ ಎಂಬಲ್ಲಿ ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೇ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದ್ದು, ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. 2022ರಲ್ಲಿ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡಿನ ರಾಜೀವ್ ಗಾಂಧಿ ನಗರದ ಅಬ್ದುಲ್ ನಿಸಾರ್ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಆರೋಪಿಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ವಾರಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ಜುಲೈ 4ರಂದು ಕಾಸರಗೋಡು ಕುಂಬಳೆಯಲ್ಲಿ ಸಂಪ್ಯ

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಹಣ ಪಡೆದು ಬಳಿಕ ವಂಚಿಸಿರುವ ಕುರಿತು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ನಿಹಾರಿಕಾ (nihari-kaaa) ಎಂದು ಪರಿಚಯಿಸಿಕೊಂಡಿದ್ದು, ಬೇಕರಿಯಲ್ಲಿ ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಅಸಾಧ್ಯವಾಗಿರುವುರಿಂದ 3800 ರೂ. ವರ್ಗಾಯಿಸುವಂತೆ ಕ್ಯೂಆರ್‌ ಕೋಡ್ ಕಳುಹಿಸಿದ್ದ. ಅದನ್ನು ನಂಬಿದ ಫಿರ್ಯಾದಿದಾರರು ಹಣ ಪಾವತಿಸಿದ್ದರು. ಬಳಿಕ ತಾನು

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 05. ಮನೆ ಸಂಪರ್ಕದ ಮೋರಿ ದಾಟುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಇವರು, ಮಂಗಳವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜು.04. ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಸಕ್ರೆಬೈಲು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ತನ್ನ ಸಂಬಂಧಿಗಳ ಜೊತೆಗೆ ಶಿವಮೊಗ್ಗಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಇವರು ಸಂಚರಿಸುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 04. ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮುಂಬೈ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಜು. 04. ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರದಂದು ಸಂಜೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿ, ಆತ ಓಡಲು ಪ್ರಾರಂಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ. ಘಟನೆಯಿಂದ ಕೃಷ್ಣನ ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೈಂದೂರು, ಜು. 04. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮೆಸ್ಕಾಂ ಲೈನ್ ಮ್ಯಾನ್ ಓರ್ವರನ್ನು ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತರನ್ನು ರಮೇಶ್ ಬಡಿಗೇರ ಎಂದು ಗುರುತಿಸಲಾಗಿದೆ. ಕುಸುಮಾ ಎಂಬವರು ಲೈನ್ ಮ್ಯಾನ್ ರಮೇಶ್ ಅವರೊಂದಿಗೆ ಮರ ಕಡಿಯಲು ಲೈನ್ ನಿಷ್ಕ್ರಿಯಗೊಳಿಸುವಂತೆ ಮನವಿ ಮಾಡಿದ್ದು, ಈ ಸಂದರ್ಭ ರಮೇಶ್ 2,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ. ಈ ವೇಳೆ ಡಿವೈಎಸ್ ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಜಯರಾಮ್ ಗೌಡ

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಕಿಲ್ಲೆ ಮೈದಾನದ ಪುರಭವನದ ಬಳಿ ಸಂಭವಿಸಿದೆ. ಬಂಧಿತನನ್ನು ಕೆಯ್ಯೂರು ಕಟ್ಟತ್ತಾರು ನಿವಾಸಿ ಮಹಮ್ಮದ್ ಅಶ್ರಫ್(31) ಎಂದು ಗುರುತಿಸಲಾಗಿದೆ. ಈತ ಕಿಲ್ಲೆ ಮೈದಾನದ ಪುರಭವನದ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿರುವ ಕುರಿತು ಬಂದ ಮಾಹಿತಿಯಂತೆ ಪುತ್ತೂರು ನಗರ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಆರೋಪಿಯನ್ನು ವಿಚಾರಿಸಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top