ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಕಳ್ಳರ ಕೈಚಳಕ, ನಗ-ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜೂ. 23. ಮನೆಗೆ ನುಗ್ಗಿದ ಕಳ್ಳರು ಸುಮಾರು 60 ಪವನ್ ಚಿನ್ನಾಭರಣ ಮತ್ತು 50 ಸಾವಿರ ರೂ.ನಗದು ಕಳವು ಮಾಡಿರುವ ಕುರಿತು ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ನ ಹಮೀದ್ ರವರ ಕುಟುಂಬ ಸಮೇತ ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಏರ್ವಾಡಿಗೆ ತೆರಳಿದ್ದು, ಗುರುವಾರದಂದು ಸಂಜೆ ಮರಳಿ ಬಂದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಪಾಟನ್ನು ಮುರಿದು […]

ಮನೆಗೆ ನುಗ್ಗಿ ಕಳ್ಳರ ಕೈಚಳಕ, ನಗ-ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ವ್ಯಕ್ತಿಯೊಬ್ಬರು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯಪದವು ಕಜೆಮೂಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮೃತರನ್ನು ನೆಟ್ಟಣಿಗೆ ಗ್ರಾಮದ ಆದೂರು ಬೀರಮೂಲೆ ನಿವಾಸಿ ನಾರಾಯಣ ನಾಯ್ಕ(75) ಎಂದು ಗುರುತಿಸಲಾಗಿದೆ ಇವರು ಸುಳ್ಯಪದವು ಕಜೆಮೂಲೆ ವೆಂಕಟೇಶ್ವರ ಭಟ್ ಎಂಬವರ ತೋಟದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮನೆಯಿಂದ ಹೋದ ಅವರು ನಾಪತ್ತೆಯಾಗಿದ್ದ ಕುರಿತು ಅವರ ಮನೆ ಮಂದಿ ದೂರು ನೀಡಿದ್ದರು. ಜೂ. 22ರಂದು ವೆಂಕಟೇಶ್ವರ ಭಟ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಇನ್ ಸ್ಟಾಗ್ರಾಮ್ ಖಾತೆಗೆ ಬಂದ ಪಾರ್ಟ್ ಟೈಮ್ ಉದ್ಯೋಗದ ಮೆಸೇಜ್ ನಂಬಿ ವ್ಯಕ್ತಿಯೊಬ್ಬರು 1,73,190 ರೂ. ಕಳೆದುಕೊಂಡಿರುವ ವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರದಾರನ ಹೆಂಡತಿಯ ಇನ್ಸ್ಟಾಗ್ರಾಮ್ ಖಾತೆಗೆ ಅಪರಿಚಿತನೊಬ್ಬ ಪಾರ್ಟ್‌ಟೈಮ್ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಇದನ್ನು ವಿಚಾರಿಸಿದಾಗ ಅಪರಚಿತ ವ್ಯಕ್ತಿ ವಾಟ್ಸ್‌ ಆಪ್ ಮೂಲಕ ಮೆಸೇಜ್ ಮಾಡುವಂತೆ ಸೂಚಿಸಿದ್ದ. ಅದರಂತೆ ತಾನು ಮೆಸೇಜ್ ಕಳುಹಿಸಿದಾಗ ಆತ ಟೆಲಿಗ್ರಾಮ್ ವೆಬ್‌ಸೈಟ್ ಲಿಂಕ್ ಕಳುಹಿಸಿ

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜೂ. 23. ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ತೋಟದ ಕೆಲಸ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದ ಈತ, ಇಂದು ಬೆಳಗ್ಗೆ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯ್ದು ಒಂದೆಡೆ ಸಾಗಿಸುತ್ತಿದ್ದ ಸಂದರ್ಭ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ.

ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಇಳಂತಿಲ ಗ್ರಾಮದ ಬನ್ನೆಂಗಳ ನಿವಾಸಿ, ಸೆಲ್ವದಾರ್ ಫೆರ್ನಾಂಡೀಸ್ (63) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ನಿತಿನ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿ ಯಾವುದೋ ಕಾರ್ಯ ನಿಮಿತ್ತ ಉಪ್ಪಿನಂಗಡಿಯ ಎಚ್.ಎಂ ಹಾಲ್ ಬಳಿ ತನ್ನ

ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..!

(ನ್ಯೂಸ್ ಕಡಬ) newskadaba.com ಕಡಬ, ಜೂ. 23. ಚಿನ್ನದ ಅಂಗಡಿಯ ಉದ್ಘಾಟನೆಯ ದಿನವೇ ಗುಂಡ್ಯದ ಕೆಂಪು ಹೊಳೆ ಸಮೀಪ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಮರ್ಧಾಳದಲ್ಲಿ ಉದ್ಘಾಟನೆಗೆ ಸಜ್ಜಾಗಿದ್ದ ಐಶ್ವರ್ಯ ಗೋಲ್ಡ್ ಮಾಲಕ ಕಡಬ ನಿವಾಸಿ ದಯಾನಂದ ಆಚಾರ್ಯ ಎಂಬವರ ಪುತ್ರ ನಾಗಪ್ರಸಾದ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕವಾಗಿ ಹಲವು ಅನುಮಾನಗಳಿದ್ದ ಕಾರಣ ಪೊಲೀಸರು ಕೂಡ ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿದ್ದರು. ಇದೀಗ

ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಅಪರಿಚಿತ ಮಹಿಳೆಯ ಮೃತದೇಹವೊಂದು ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಪುರಸಭಾ ಸದಸ್ಯ ಮೊಹಮ್ಮದ್ ಇಕ್ಬಾಲ್ ರವರು ಬಂಟ್ವಾಳ ಪೇಟೆ ಕಡೆ ಹೋಗುವಾಗ ಕೂಟೇಲು ಸೇತುವೆ ಸಮೀಪದಲ್ಲಿ ಮಹಿಳೆಯ ಚಪ್ಪಲಿ ಕಂಡು ಬಂದಿದೆ. ಇದರಿಂದಾಗಿ ಅವರು ಸ್ವಲ್ಪ ಮುಂದಕ್ಕೆ ಹೋಗಿ ನೋಡಿದಾಗ ಮಹಿಳೆಯ ಮೃತದೇಹ ಕಂಡು ಬಂದಿದೆ ಎನ್ನಲಾಗಿದೆ. ಕೂಡಲೇ ಅವರು ಈ ಕುರಿತು ಬಂಟ್ವಾಳ ನಗರ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಕಂಟೇನರ್ ಹಾಗೂ ಕಾರಿನ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ಕಂಟೇನರ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ. ಹೆದ್ದಾರಿಯ ಗುಂಡ್ಯದಲ್ಲಿ ನಡೆದಿದೆ. ಧರ್ಮಸ್ಥಳದಿಂದ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಕಂಟೇನರ್ ನಡುವೆ ಗುಂಡ್ಯ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುಂಡ್ಯ: ಕಂಟೇನರ್ ಹಾಗೂ ಕಾರಿನ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 22. ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅತ್ಯಾಚಾರವೆಸಗಿದಾತನನ್ನು ಸಪನ್ ಮಂಡಲ್(52) ಎಂದು ಗುರುತಿಸಲಾಗಿದೆ. ಈತ ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿದ್ದ ಸಪನ್ ಮಂಡಲ್ ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸ್ಕೂಟರ್ ಹತ್ತಿಸಿಕೊಂಡು, ನಂತರ ಜಮೀನಿಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) com ಉಳ್ಳಾಲ, ಜೂ. 22. ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯ ನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿತಿನ್ ಪೂಜಾರಿ ಎಂದು ಗುರುತಿಸಲಾಗಿದೆ. ನೆರೆಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ತಾಯಿ ಬಂದು ಮನೆಯ ಬಾಗಿಲು ಬಡಿದಾಗ ತೆರೆಯದೇ ಇದ್ದುದರಿಂದ ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣುಬಿಗಿದ ವಿಚಾರ ಬೆಳಕಿಗೆ ಬಂದಿದೆ. ಮೃತದೇಹದ ಪಕ್ಕ ಡೆತ್ ನೋಟ್ ಪತ್ತೆಯಾಗಿದ್ದು,

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top