ಕ್ರೈಮ್ ನ್ಯೂಸ್

ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ತಾಲೂಕಿನ ನರಿಮೊಗರು ಗ್ರಾಮದ ಪುರುಷಕಟ್ಟೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಇಲ್ಲಿನ ಇಂದ್ರನಗರ, ಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಮತ್ತು ಪ್ರವೀಣ್ ಆಚಾರ್ಯ ಇಬ್ಬರೂ ಈ ಹಿಂದೆ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಬಳಿಕ ಪ್ರವೀಣ್ ಆಚಾರ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಇದೀಗ ರಾಜಕೀಯ ವಿಚಾರಕ್ಕೆ […]

ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21.ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಎಂದು ಗುರುತಿಸಲಾಗಿದೆ. ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರದಂದು ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಇದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಬಿಳಿಯೂರು ಗ್ರಾಮದ ಬಿಳಿಯೂರು ಕ್ರಾಸ್ ನ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಹಮ್ಮದ್ ಸರ್ಫರಾಜ್ (26) ಎಂದು ಗುರುತಿಸಲಾಗಿದೆ‌. ಜೂ. 19ರಂದು ಉಪ್ಪಿನಂಗಡಿ ಪೊಲೀಸರು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಸರ್ಫರಾಜ್ ಎಂಬಾತ, ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 20. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಬಸ್ಸು ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ‌ ಕ್ರಾಸ್ ನಲ್ಲಿ ನಡೆದಿದೆ. ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್ ಎಂಬವರು ವಿದೇಶದಿಂದ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅಕ್ರಮ ಜಾನುವಾರು ಸಾಗಾಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 20. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮುಳಿಮಜಲು ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಅಕ್ರಮ ಜಾನುವಾರು ಸಾಗಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಗೂಢ ಶಂಕೆ ➤ ದಂಪತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ತೆಲಂಗಾಣ, ಜೂ. 20. ದಂಪತಿಯನ್ನು ಮರಕ್ಕೆ ನೇತು ಹಾಕಿ ಗ್ರಾಮಸ್ಥರು ಬೆತ್ತದಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ತೆಲಂಗಾಣ ರಾಜ್ದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ದಂಪತಿಯನ್ನು ಶ್ಯಾಮಮ್ಮ ಮತ್ತು ಯಾದಯ್ಯ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಂಗಾರೆಡ್ಡಿ ಜಿಲ್ಲೆಯ ಕೊಲ್ಕೂರು ಗ್ರಾಮದಲ್ಲಿ ನಿಗೂಢ ಕಲೆಗಳನ್ನು ಅಭ್ಯಾಸ ಮಾಡುತ್ತಿದ್ದಾರೆಂಬ ಶಂಕೆಯಿಂದ ಗ್ರಾಮದ ಜನರು ದಂಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ, ವಿಚಾರಣೆ ನಡೆಸಿ

ನಿಗೂಢ ಶಂಕೆ ➤ ದಂಪತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ ಢಿಕ್ಕಿ ➤ ಗಂಭೀರ ಗಾಯಗೊಂಡ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.20. ಪಾದಚಾರಿಯೋರ್ವರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ. ನೆಲ್ಯಾಡಿ ಸಮೀಪದ ದೋಂತಿಲ ನಿವಾಸಿ ಜಬ್ಬಾರ್ ಎಂಬವರು ಸೋಮವಾರ ರಾತ್ರಿ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡ ಜಬ್ಬಾರ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  

ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ ಢಿಕ್ಕಿ ➤ ಗಂಭೀರ ಗಾಯಗೊಂಡ ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಅಪ್ರಾಪ್ತ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಿಕ್ಷಾ ಚಾಲಕ ಸಾದಿಕ್ ಮತ್ತು ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂತ್ರಸ್ತೆ ಬಾಲಕಿಯು ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ತನ್ನ ತಾಯಿಯ ಸ್ವಸಹಾಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಸವಾರನನ್ನು ನೈತಾಡಿಯ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top