ಕ್ರೈಮ್ ನ್ಯೂಸ್

Death, deadbody, Waterfall

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ […]

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,  ಜು.28 ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತ್ನಿಯನ್ನ ಹತ್ಯೆಗೈದು ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮೂಲಕ ತೋರಿಸಿದ ಕ್ರೂರ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧದ ಶಂಕೆಯಿಂದ ಗಂಡ ಪ್ರವೀಣ್ ಜಿಗಳೂರು ಎಂಬಾತ ಪತ್ನಿಯೊಂದಿಗೆ ಜಗಳವಾಡಿ, ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಯ ಬಳಿಕ ಆ

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು  ಶುಕ್ರವಾರದಂದು ಅನಿರೀಕ್ಷಿತ  ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ

(ನ್ಯೂಸ್‌ ಕಡಬ) newskadaba.com ಜು. 21. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್ ಎಂದು ಪೊಲೀಸರು ಗುರುತಿಸಲಾಗಿದೆ. ವರದಿಯ ಪ್ರಕಾರ, ಬೆಳ್ತಂಗಡಿಯ 16 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯು, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಜು. 20. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣ ಭಸ್ಮವಾದ ಘಟನೆ ಬೆಳ್ತಂಗಡಿ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು–ಕುಕ್ಕಾಜೆ ಎಂಬಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ.     ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಜಾನುವಾರುಗಳಿಗೆ

ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಜು. 20. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠ ಸಮೀಪದ ಬಾವಿಯಲ್ಲಿ 20 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಇವರು ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದು ಬಾಡಿಗೆ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. ಮೃತನೊಂದಿಗೆ ವಾಸವಿದ್ದ ಆತನ ಅಣ್ಣ ಸೋಮನಾಥ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತನೇ ಪ್ರಮುಖ ಶಂಕಿತನೆಂದು

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡೆಪಾಲದಲ್ಲಿ ಮಹಿಳೆಯ ನಿಗೂಢ ಮೃತ್ಯು ಆತ್ಮಹತ್ಯೆಯೋ? ವ್ಯವಸ್ಥಿತ ಕೊಲೆಯೋ? ತನಿಖೆ ಆರಂಭಿಸಿದ ಸುಳ್ಯ ಪೊಲೀಸ್

(ನ್ಯೂಸ್‌ ಕಡಬ) newskadaba.com,  ಜು.20   :  ಸಂಪಾಜೆ ಕಡೆಪಾಲದಲ್ಲಿ 22 ವರ್ಷದ ವಿವಾಹಿತ ಮಹಿಳೆ ಫಾತಿಮತ್ ನಿಶಾನ ಜುಲೈ 18ರಂದು ರಾತ್ರಿ ತೀವ್ರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. 4 ವರ್ಷಗಳ ಹಿಂದೆ ಕಡೆಪಾಲದ ಅನ್ಸಾರ್ ಅವರೊಂದಿಗೆ ಮದುವೆಯಾಗಿದ್ದ ನಿಶಾನ ಅವರಿಗೆ 2.5 ವರ್ಷದ ಮಗುವಿದೆ. ಘಟನೆಯ ರಾತ್ರಿ ನಿಶಾನ ಅವರು ತಮ್ಮ ತಾಯಿ ಜುಬೈದಾ ಅವರಿಗೆ ಕರೆ ಮಾಡಿ ಗಂಡನ ಮನೆಯವರಿಂದ ಕಿರುಕುಳವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ತಕ್ಷಣ ತಾಯಿ ಮಗಳ ಮನೆಗೆ ಧಾವಿಸಿದಾಗ ನಿಶಾನ ಮೃತದೇಹ

ಕಡೆಪಾಲದಲ್ಲಿ ಮಹಿಳೆಯ ನಿಗೂಢ ಮೃತ್ಯು ಆತ್ಮಹತ್ಯೆಯೋ? ವ್ಯವಸ್ಥಿತ ಕೊಲೆಯೋ? ತನಿಖೆ ಆರಂಭಿಸಿದ ಸುಳ್ಯ ಪೊಲೀಸ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಜು. 18. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಬಿಎಂಡಬ್ಲ್ಯು ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಈ ಐಷಾರಾಮಿ ಕಾರು ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದಾಗ, ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ಇದನ್ನು

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ, ಜು. 17. ಜುಲೈ 16ರ ಗುರುವಾರದಂದು ಸಂಜೆ 4:30ಕ್ಕೆ ಕಡಬದಿಂದ ಪಂಜ ಮಾರ್ಗವಾಗಿ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ಸುಮಾರು ನಾಲ್ಕು ಪವನ್ ಚಿನ್ನದ ಕರಿಮಣಿ ಸರ ಕಳೆದುಹೋಗಿರುತ್ತದೆ.                                               ​   ಬಸ್ಸಿನಲ್ಲಿ ಅಥವಾ ಬಸ್ ನಿಲ್ದಾಣದ ಪರಿಸರದಲ್ಲಿ ಈ ಸರವು ಯಾರಿಗಾದರೂ ದೊರೆತಿದ್ದಲ್ಲಿ, ದಯವಿಟ್ಟು ಮಾನವೀಯತೆಯ ದೃಷ್ಟಿಯಿಂದ ಈ ಕೆಳಗಿನ 7349319974, 9164192010 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ವಿನಂತಿ. ಸರವನ್ನು ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನವನ್ನು

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top