ಕ್ರೈಮ್ ನ್ಯೂಸ್

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 09. ಬೈಕ್ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ನೆಲ್ಯಾಡಿ ಗ್ರಾಮದ ಪಡಡ್ಕ ಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಹಾರಪತ್ಯೆ ನಿವಾಸಿ ಸಾವೇರ್ ಡಿಸೋಜಾ ಎಂದು ಗುರುತಿಸಲಾಗಿದೆ. ಇವರು ನೆಲ್ಯಾಡಿ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಡ್ಡಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಸಾವೇರ್ ಡಿಸೋಜಾ ರವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) com ಒಡಿಶಾ, ಜೂ. 09. ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್ಪ್ರೆಸ್‌ನ ಬೋಗಿಯೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಭಯಭೀತರಾದ ಘಟನೆ ಒಡಿಶಾದಲ್ಲಿ ನಡೆದಿದೆ. ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿ ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು, ಭಯಭೀತರಾಗಿದ್ದರು. ಘಟನೆಯಲ್ಲಿ ಯಾವುದೇ

ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 09. ಹಳೆ ಸಾಮಗ್ರಿಗಳನ್ನು ಕಳವುಗೈದು ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ವ್ಯಾನ್ ಚಾಲಕನೋರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ತಲಪಾಡಿ ಕೆ .ಸಿ ರೋಡ್ ನ ಅಶ್ರಫ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಂದ್ಯೋಡು ಪೇಟೆಯಲ್ಲಿನ ಅಂಗಡಿಯೊಂದನ್ನು ತೆರವುಗೊಳಿಸಲಾಗಿದ್ದು, ಈ ಅಂಗಡಿಯ ಶಟರ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಪಿಕಪ್ ವ್ಯಾನ್ ನಲ್ಲಿ ತುಂಬಿಸಿ ಸಾಗಾಟ ಮಾಡಿದ್ದು, ಇದರಿಂದ ಸಂಶಯಗೊಂಡ ಪರಿಸರದವರು ಮಾಲಕನಿಗೆ

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 09. ಬೈಕ್ ಹಾಗೂ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.   ಮೃತ ವ್ಯಕ್ತಿಯನ್ನು ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ದ.ಕ. ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ.  ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಇವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರದಂದು ತನ್ನ ಮನೆಯ ಮಹಡಿಗೆ

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಮನೆಯಲ್ಲಿರಲು ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್‌ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅಬೂಬಕರ್‌ ಸಿದ್ದೀಖ್‌ ಎಂದು ಗುರುತಿಸಲಾಗಿದೆ. ಆರೋಪಿ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್‌ ನವಾಫ್‌ ಎಂದು ಗುರುತಿಸಲಾಗಿದೆ. ಈತ ರಾತ್ರಿ 11ರ ವೇಳೆಗೆ ಪರಿಚಿತರೇ ಆಗಿರುವ ಅಬೂಬಕರ್‌ ಸಿದ್ದೀಖ್‌ ರವರಿಗೆ ಕರೆ ಮಾಡಿ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ. ಅದರಂತೆ ನಡೆದುಕೊಂಡು ಹೋದ ಅಬೂಬಕರ್‌ ರವರು ಅಜ್ಜಿನಡ್ಕ

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadba.com ಪಡುಬಿದ್ರಿ, ಜೂ. 08. ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ನಡೆದಿದೆ. ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ

(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ Read More »

ಕ್ರೈಮ್ ನ್ಯೂಸ್

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಯುವತಿಯೋರ್ವಳು ಗೃಹ ಪ್ರವೇಶಗೈದ ಐದೇ ದಿನಕ್ಕೆ ಮನೆ ಕೋಣೆಯೊಳಗೆ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವತಿಯನ್ನು ಫರಂಗಿಪೇಟೆ ಮೂಲದ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ (25)ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ರಾತ್ರಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾಳೆ ಎನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top