ಕ್ರೈಮ್ ನ್ಯೂಸ್

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎದುರುಗಡೆಯಿಂದ ಬರುತ್ತಿದ್ದ ಮಾರುತಿ 800 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ಇವರೆಲ್ಲರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪುತ್ತೂರು […]

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ. ಆರೋಪಿ ಎಂದು ಹೇಳಲಾಗಿರುವ ಸಂತೋಷ್ ಆತನ ಸ್ನೇಹಿತ ಶಿವರಾಜ್ ಕುಲಾಲ್ ಎಂಬಾತನನ್ನು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.

ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿಯೂಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com. ಪಾಟ್ನಾ, ಮೇ.19. ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು. ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಬಿಸಿಯೂಟದಲ್ಲಿ ಹಲ್ಲಿ ಪತ್ತೆ; 36 ವಿದ್ಯಾರ್ಥಿಗಳು ಅಸ್ವಸ್ಥ Read More »

ಕ್ರೈಮ್ ನ್ಯೂಸ್

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.18. ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ರವರು ಆಕಸ್ಮಿಕವಾಗಿ  ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಅವರು ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ಬೇಕಾದ ನೀರು ಸರಬರಾಜು ಮಾಡಲು ಅಳವಡಿಸಿದ್ದ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ

(ನ್ಯೂಸ್ ಕಡಬ)newskadaba.com ಕಟೀಲು, ಮೇ.18. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನುು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನ ಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ದಾಖಲೆ ರಹಿತ 18 ಲಕ್ಷ ರೂ. ಸಹಿತ ಓರ್ವನ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.18. ದಾಖಲೆಗಳಿಲ್ಲದ ಸುಮಾರು 18 ಲಕ್ಷ ರೂ. ಸಹಿತ ಓರ್ವನನ್ನು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕಾಞ೦ಗಾಡ್ ನ ಕೆ. ಕೆ ಇರ್ಷಾದ್ (33) ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ನೀಲೇಶ್ವರ ಮಾರ್ಕೆಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈತನ ಸ್ಕೂಟರ್ ನಲ್ಲಿ ಸಾಗಿಸುತ್ತಿದ್ದ ಹಣ ವನ್ನು ವಶಪಡಿಸಿಕೊಳ್ಳಲಾಗಿದೆ. ಸೀಟಿನಡಿಯಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದನು. 500 ರೂ.ಮುಖಬೆಲೆಯ 18.5 ಲಕ್ಷ ರೂ. ವಶಪಡಿಸಿ

ಕಾಸರಗೋಡು: ದಾಖಲೆ ರಹಿತ 18 ಲಕ್ಷ ರೂ. ಸಹಿತ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಬ್ಯಾಂಕರ್ ನನ್ನು ಕದ್ದ ರೈಫಲ್ ನಿಂದ ಗುಂಡಿಕ್ಕಿ ಕೊಂದ ಉಗಂಡಾ ಪೊಲೀಸ್

(ನ್ಯೂಸ್ ಕಡಬ)newskadaba.com ಉಗಂಡಾ, ಮೇ.17. ಭಾರತೀಯ ಮೂಲದ ಬ್ಯಾಂಕರ್ ನನ್ನು ತಾನು ಕದ್ದ ತಂದ ಎಕೆ-47 ಅಸಾಲ್ಟ್ ರೈಫಲ್‌ ನಿಂದ ಕರ್ತವ್ಯದಲ್ಲಿಲ್ಲದ ಪೊಲೀಸ್ ಓರ್ವ ಗುಂಡಿಕ್ಕಿ ಕೊಂದ ಭೀಕರ ಘಟನೆ ಉಗಾಂಡಾದ ರಾಜಧಾನಿ ಕಂಪಲಾದಲ್ಲಿ ನಡೆದಿದೆ. ಮೃತರನ್ನು39 ವರ್ಷದ ಉತ್ತಮ್ ಭಂಡಾರಿ ಎಂದು ಗುರುತಿಸಲಾಗಿದೆ ಪೊಲೀಸ್ ಪೇದೆ 30 ವರ್ಷದ ಇವಾನ್ ವಾಬ್ವೈರ್ ಬಂಧಿತ ಆರೋಪಿಯಾಗಿದ್ದಾನೆ.  

ಭಾರತೀಯ ಬ್ಯಾಂಕರ್ ನನ್ನು ಕದ್ದ ರೈಫಲ್ ನಿಂದ ಗುಂಡಿಕ್ಕಿ ಕೊಂದ ಉಗಂಡಾ ಪೊಲೀಸ್ Read More »

ಕ್ರೈಮ್ ನ್ಯೂಸ್

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ದ್ವಿಚಕ್ರ ವಾಹನದಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ ಎನ್ನಲಾಗಿದೆ. ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾಧರಿಸಿ ಆರೋಪಿಯ ಬಂಧನ ನಡೆದಿದೆ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಲೈಕ್ಸ್‌, ವೀವ್ಸ್‌‌ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್➤ 20ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಮೇ.15. ಕ್ಯಾಲಿಫೋರ್ನಿಯಾದಲ್ಲಿ ಯೂಟ್ಯೂಬ್‌ ನಲ್ಲಿ ಲೈಕ್ಸ್‌, ವೀವ್ಸ್‌ ಗಾಗಿ ಯುವಕನೊಬ್ಬ ಮಾಡಿದ ಸಾಹಸದಿಂದ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಯೂಟ್ಯೂಬ್‌ ನಲ್ಲಿ ಸಬ್‌ ಸ್ಕೈಬರ್ಸ್‌ ನ್ನು ಹೊಂದಿರುವ ಕ್ಯಾಲಿಫೋರ್ನಿಯಾದ ಲೊಂಪೊಕ್‌ನ ಟ್ರೆವರ್ ಡೇನಿಯಲ್ ಜಾಕೋಬ್ (29) ಎಂಬಾತ ಹೆಚ್ಚು ಲೈಕ್ಸ್‌ ಹಾಗೂ ವೀವ್ಸ್‌ ತನ್ನ ವಿಮಾನವನ್ನು ಉದ್ದೇಶಪೂರ್ವಕವಾಗಿ ಪತನ ಮಾಡಲು ಹೊರಟಿದ್ದಾರೆ. ಇನ್ನು ತನ್ನ ವಿಮಾನವನ್ನು ಪತನ ಮಾಡಿದ್ದು, ಪ್ಯಾರಾಚೂಟ್ ನಲ್ಲಿ ಕೆಮರಾಗಳನ್ನು ಹಿಡಿದುಕೊಂಡು ಗಾಳಿಯಲ್ಲಿ ಜಾಕೋಬ್ ಹಾರಿದ್ದಾನೆ. ವಿಮಾನ

ಲೈಕ್ಸ್‌, ವೀವ್ಸ್‌‌ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್➤ 20ವರ್ಷ ಜೈಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top