ಕ್ರೈಮ್ ನ್ಯೂಸ್

ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.12. ನಗರದ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದೆ. ಕೆಐಎಸ್ಎ‌ಫ್‌ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಆತನನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.11. ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ

ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.11. ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com. ಕೇರಳ,ಮೇ. 10. ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಮೇಲೆ ಪ್ರಕರಣದ ಆರೋಪಿಯೊಬ್ಬ ಚಿಕಿತ್ಸೆಗೆ ಬಳಸುವ ಸರ್ಜಿಕಲ್​ ಬ್ಲೇಡ್​ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ದಲ್ಲಿ ಇಂದು ನಡೆದಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದ ವೇಳೆ ದಾಳಿ ನಡೆಸಿದ ಆತ ಯುವ ವೈದ್ಯೆಯನ್ನು ಸರ್ಜಿಕಲ್​ ಬ್ಲೇಡ್​ನಿಂದ ಹತ್ಯೆ ಮಾಡಿದ ಆಘಾತಕಾರಿ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೊಟ್ಟಾಯಂ ಮೂಲದ ಡಾ.ವಂದನಾ ದಾಸ್ ಮೃತರು. ಸಂದೀಪ್ ಕೊಲೆಗೈದ ಆರೋಪಿ.

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.09. ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ 16 ವರ್ಷದ ಬಾಲಕನನ್ನು ಇನ್ನೊಬ್ಬ ಬಾಲಕ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜಂತಾ ಕಾಲೋನಿಯಲ್ಲಿ ಬಾಲಕನ ಹೊಟ್ಟೆಗೆ ಇರಿದ ಬಗ್ಗೆ ಪೊಲೀಸ್ ಠಾಣೆಗೆ ಕರೆ ಬಂದಿತ್ತು. ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು. ಗಾಯಾಳು ಬಾಲಕನಿಗೆ ಪೋಷಕರು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಸುಮಾರು ಮುಂಜಾನೆ 3.19 ರ ವೇಳೆಗೆ ಸಾವು ಘೋಷಿಸಿದರು ಎಂದು ಹಿರಿಯ

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು

 (ನ್ಯೂಸ್ ಕಡಬ) newskadaba.com. ಸುಬ್ರಹ್ಮಣ್ಯ, ಮೇ.9. ಸುಬ್ರಹ್ಮಣ್ಯ ಸಮೀಪದ  ಕೇನ್ಯ ಕಣ್ಕಲ್ ಎಂಬ ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ನಡೆದಿದೆ.  ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ವಾಸವಿದ್ದೂ, ಊರಿನಲ್ಲಿ ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಬಳ್ಪಕ್ಕೆ ಬಂದಿದ್ದರು ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಯುತ್ತಿದ್ದೂ, ಇಬ್ಬರ ಮೃತದೇಹಗಳೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ➤ ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.9. ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ➤ ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಮೇ.09.  ಮದುವೆಯಾಗಿ 15 ವರ್ಷಗಳಾದರೂ ಮಗುವಾಗಿಲ್ಲ ಎಂದು 33 ವರ್ಷದ ಮಹಿಳೆಗೆ ಅತ್ತೆ ವಿಷ ಆಹಾರ ನೀಡಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. ಸಾಲಿ ಬೇಗಂ ಎಂದು ಗುರುತಿಸಲಾದ ಮಹಿಳೆ ಮೃತರು ಎಂದು ಗುರುತಿಸಲಾಗಿದೆ. ಈಕೆಯ ಅತ್ತೆ, ಮಗುವಾಗದಿದ್ದಕ್ಕಾಗಿ ಅವಳ ಜೊತೆ ಜಗಳವಾಡಿ ವಿಷ ಆಹಾರ ನೀಡಿ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮೃತಳ ಸಹೋದರ ಗೌಸ್ ಮೊಹಮ್ಮದ್ ತನ್ನ ದೂರಿನಲ್ಲಿ, ಬೇಗಂ 15 ವರ್ಷಗಳ ಹಿಂದೆ ಫಿರೋಜ್ ಅಹ್ಮದ್ ಎಂಬಾತನನ್ನು

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ ➤ ಇಬ್ಬರು ನಕ್ಸಲೀಯರ ಹತ್ಯೆ

(ನ್ಯೂಸ್ ಕಡಬ) newskadaba.com. ಛತ್ತೀಸ್‌ಗಢ,  ಮೇ.8. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಾಹಿತಿ ನೀಡಿರುವ ಸುಕ್ಮಾ ಪೊಲೀಸರು, ‘ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದರು. ಇನ್ನು ಮೇ 1

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ ➤ ಇಬ್ಬರು ನಕ್ಸಲೀಯರ ಹತ್ಯೆ Read More »

ಕ್ರೈಮ್ ನ್ಯೂಸ್

ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com.ಅಮೆರಿಕ, ಮೇ.8.  ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ

ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top