ಕ್ರೈಮ್ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ. 28. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕರೋರ್ವರ ಮೃತದೇಹ ಕಾಸರಗೋಡು ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾನ್ಯ ಜ್ಞಾನೋದಯ ಅನುದಾನಿತ ಶಾಲೆಯ ಶಿಕ್ಷಕ, ಮಟ್ಟನ್ನೂರಿನ ಟಿ.ವಿ. ಪ್ರದೀಪ್ ಕುಮಾರ್(51) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದುರ್ವಾಸನೆ ಉಂಟಾದ ಹಿನ್ನಲೆಯಲ್ಲಿ ಪರಿ ಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಾವಿಯಲ್ಲಿ ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಕೊನೆಗೆ ತನಿಖೆ ನಡೆಸಿದಾಗ ಅದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕ […]

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.28. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ➤ತುಮಕೂರಲ್ಲಿ ಕಾಮುಕ ಶಿಕ್ಷಕನ ಬಂಧನ

(ನ್ಯೂಸ್ ಕಡಬ) newskadaba.com. ತುಮಕೂರು, ಮಾ. 28. ಜಿಲ್ಲೆಯ ಶಾಲೆಯೊಂದರ ಶಿಕ್ಷಕನೊಬ್ಬ  ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ಪೋಷಕರು‌ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆರೋಪ ಕೇಳಿಬರುತ್ತಿದ್ದಂತೆ ಕಾಮುಕ ಶಿಕ್ಷಕ ಮಂಜುನಾಥ್ ಹಾಗೂ ಮುಖ್ಯ ಶಿಕ್ಷಕ ನಟರಾಜ್​ರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬೋರನಗುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. 4 ಮತ್ತು 5ನೇ ತರಗತಿ ವಿದ್ಯಾರ್ಥಿನಿಯರ ಅಂಗಾಂಗ

ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ➤ತುಮಕೂರಲ್ಲಿ ಕಾಮುಕ ಶಿಕ್ಷಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.28. ಬೈಕ್‌ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.      

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.28. ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿಯಾಗಿರುವ, ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಸೀಂ(29) ತಲೆ ಮರೆಸಿಕೊಂಡಿದ್ದು, ಈತನ ಪತ್ತೆ ಹಚ್ಚುಲು ಸಹಕರಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆ ಹೊರಡಿಸಿದೆ. ಆರೋಪಿ ಅಸೀಂ ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದ ಎನ್ನಲಾಗಿದೆ. ಈ ವೇಳೆ ಜೈಲಿನಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಮಂಗಳೂರಿನ ಪೋಕ್ಸೊ ನ್ಯಾಯಾಲಯವು ಅಸೀಮ್ ವಿರುದ್ಧ ವಾರೆಂಟ್ ಜಾರಿ ಮಾಡಿದೆ.    

ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಶಾಲಾ ಬಸ್ ಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಮಾ.27. ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್​ಗೆ ಬೆಂಕಿ ತಗುಲಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ನಡೆದಿದೆ. ಶಾಲಾ ಬಸ್​ನಲ್ಲಿ ಸುಮಾರು 30 ವಿದ್ಯಾರ್ಥಿಗಳಿದ್ದರು. ಘಟನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾರೀ ಅನಾಹುತದಿಂದ ಪಾರಾಗಿದ್ದಾರೆ.

ಚಲಿಸುತ್ತಿದ್ದ ಶಾಲಾ ಬಸ್ ಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಮಡಿಕೇರಿ, ಮಾ.27. ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ. ಬಲ್ಯಂಡ ಬೀನಾ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಬಲ್ಯಂಡ ಬೀನಾ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ

(ನ್ಯೂಸ್ ಕಡಬ)newskadaba.com ಯಾದಗಿರಿ, ಮಾ.27. ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ನಡೆದಿದೆ. ಸೈದಾಪುರ ಪಟ್ಟಣದ ಖ್ಯಾತ ಬಟ್ಟೆ ಉದ್ಯಮಿ ರಾಘವೇಂದ್ರ(39) ಮತ್ತು ಅವರ ಪತ್ನಿ ಶಿಲ್ಪಾ(35) ಎಂದು ಗುರುತಿಸಲಾಗಿದೆ. 3 ಮಹಡಿಯ ಮನೆಯ ಕೆಳಮಹಡಿಯಲ್ಲಿ ಮೃತ ದಂಪತಿ ವಾಸಿಸುತ್ತಿದ್ದರು. ಮೇಲಿನ 2 ಮಹಡಿಗಳಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಸುಮಾರು 3 ಕೋಟಿ ರೂ. ಮೌಲ್ಯದ ಬಟ್ಟೆಗಳು ಇದ್ದವು. ವ್ಯಾಪಾರ ಮುಗಿಸಿ ದಂಪತಿ ಮೇಲಿನ ಮಹಡಿಯಲ್ಲಿಯೇ ಮಲಗಿದ್ದರಂತೆ.

ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮೊಳಕಾಲ್ಮುರು, ಮಾ.27, ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು. ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.    

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top