ಕ್ರೈಮ್ ನ್ಯೂಸ್

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌ (30) ಎಂದು ಗುರುತಿಸಲಾಗಿದೆ. ಈತ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಇದಕ್ಕೆ ನಿರಾಕರಿಸಿದ ಬಾಲಕಿಯನ್ನು ಆತ ಒತ್ತಾಯದಿಂದ ಪುಸಲಾಯಿಸಿ […]

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ..!

(ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಮಾ. 21. ಲಂಚ ಪಡೆಯುವಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ ಪಡೆಯುವಾಗ ರಾಣೆಬೆನ್ನೂರು ನಗರ ಪೊಲೀಸ್‌ ಠಾಣೆ ಸಬ್ ಇನ್ಸ್ಪೆಕ್ಟರ್ ಸುನಿಲ್ ತೇಲಿ ಅವರನ್ನು ದಾವಣಗೆರೆ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಸುನಿಲ್ ತೇಲಿಯವರ ವಾಹನ ಚಾಲಕ ಸಚಿನ್ ಅವರನ್ನೂ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.  

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ: ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 21. ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಹಾಗೂ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪಾದಚಾರಿ ಅಬ್ದುಲ್ ಮಜೀದ್ ಹಾಗೂ ದ್ವಿಚಕ್ರ ವಾಹನ ಸವಾರ ವಿರಾಜಪೇಟೆ ಸೋಮಣ್ಣ ಎಂದು ಗುರುತಿಸಲಾಗಿದೆ‌. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಕೆನಡಾ, ಮಾ. 21. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಗಗನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈತನ ಪೇಟವನ್ನು ಕಿತ್ತು  ಕೂದಲು ಹಿಡಿದು ಕಾಲುದಾರಿಯ ಉದ್ದಕ್ಕೂ ದುಷ್ಕರ್ಮಿಗಳ ಗುಂಪು ಎಳೆದಾಡಿ, ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಸರ್ಕಾರಿ ನೌಕರ

(ನ್ಯೂಸ್ ಕಡಬ) newskadaba.com ಭೋಪಾಲ್, ಮಾ. 21. ನೃತ್ಯ ಮಾಡುತ್ತಾ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಮೃತರನ್ನು ಮಧ್ಯಪ್ರದೇಶ ಅಂಚೆ ವೃತ್ತದ ಸಹಾಯಕ ನಿರ್ದೇಶಕ ಟೆಕ್ನಿಕಲ್ ಸುರೇಂದ್ರ ಕುಮಾರ್ ದೀಕ್ಷಿತ್ (55) ಎಂದು ಗುರುತಿಸಲಾಗಿದೆ. ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿಯನ್ನು ಅಂಚೆ ಇಲಾಖೆಯು ಮಾರ್ಚ್ 20 ರಂದು ಮಧ್ಯಪ್ರದೇಶದ ರಾಜದಾನಿ ಭೋಪಾಲ್ ನಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುರೇಂದ್ರ ಕುಮಾರ್ ದೀಕ್ಷಿತ್ ಅವರು ತಮ್ಮ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ವೇಳೆ

ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಸರ್ಕಾರಿ ನೌಕರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ 

(ನ್ಯೂಸ್ ಕಡಬ) newskadaba.com ಬಾಂಗ್ಲದೇಶ, ಮಾ. 21. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ. ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಪರಿಣಾಮ 17 ಜನರು ಮೃತಪಟ್ಟಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ನಂಬಿಸಿ, ಹಲವರಿಂದ ಕೋಟ್ಯಂತರ ರೂ. ಹಣವನ್ನು ಹೂಡಿಕೆ ಮಾಡಿಸಿ, ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಹಣ ಲಾಭ ಗಳಿಸಬಹುದು

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್-ಲೈನ್ ಉದ್ಯೋಗ ಕೊಡಿಸುವ ಆಮಿಷ ➤ 2.52 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಆನ್ ಲೈನ್ ಉದ್ಯೋಗದ ಆಮಿಷ ಒಡ್ಡಿ ಮಹಿಳೆಯೋರ್ವರಿಗೆ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉದ್ಯೋಗದ ಹುಡುಕಾಟದಲ್ಲಿದ್ದ ಮಾಧವಿ ಎಂಬವರಿಗೆ ಮಾರ್ಚ್ 15ರಂದು ವಾಟ್ಸಪ್ ನಲ್ಲಿ ಅಪರಿಚಿತ ನೊರ್ವ ಆನ್ಲೈನ್ ನಲ್ಲಿ ಪಾರ್ಟ್ ಟೈಮ್ ಕೆಲಸ ಕೊಡಿಸುವುದಾಗಿ ನಂಬಿಸಿ, ಮಾರ್ಚ್ 15ರಿಂದ ಮಾರ್ಚ್ 20ರವರೆಗೆ 2,52,600 ರೂ. ಗಳನ್ನು ಆರೋಪಿಯ ವಿವಿಧ ಖಾತೆಗಳಿಗೆ ಜಮೆ ಮಾಡಿಸಿಕೊಂಡಿದ್ದಾನೆ. ಆದರೆ ಬಳಿಕ ಉದ್ಯೋಗ ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಸೆನ್

ಆನ್-ಲೈನ್ ಉದ್ಯೋಗ ಕೊಡಿಸುವ ಆಮಿಷ ➤ 2.52 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಅಕ್ರಮ ಸಂಬಂಧದ ಹಿನ್ನೆಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಕೊಲೆಯಾದವರನ್ನು ಸಾರಾಯಿ ಪಾಳ್ಯದ ಆಫ್ಜಲ್ ಲೇಔಟ್ ನ ತಬ್ಸಿಮ್ ಬೇಬಿ (32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿರುವ ಆಕೆಯ ಎರಡೂವರೆ ವರ್ಷದ ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಕೃತ್ಯ ನಡೆಸಿದ ಆರೋಪಿ ಪತಿ ಕೋಲ್ಕತ್ತಾ

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 21. ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ವರದಿಯಾಗಿದೆ. ಮೃತ ಪೌರ ಕಾರ್ಮಿಕರನ್ನು ಸತ್ಯಪ್ಪ(45) ಹಾಗೂ ಮೈಲಪ್ಪ(42) ಎಂದು ಗುರುತಿಸಲಾಗಿದೆ. ಇವರು ಪಿಡಿಒ ಆದೇಶದ ಮೇರೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೇ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದು, ಈ ವೇಳೆ ವಿಷ ಗಾಳಿ ಸೇವಿಸಿ ಕಾರ್ಮಿಕರಿಬ್ಬರು ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು

ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top