ಕ್ರೈಮ್ ನ್ಯೂಸ್

ತರಬೇತಿ ವಿಮಾನ ಪತನ ➤ ಇಬ್ಬರು ಪೈಲಟ್ ಗಳು ಮೃತ್ಯು

(ನ್ಯೂಸ್ ಕಡಬ) newskadaba.com ಭೋಪಾಲ್, ಮಾ. 19. ತರಬೇತಿ ವಿಮಾನವೊಂದು ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌‌ಗಳು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಹಿಮಾಚಲ ಪ್ರದೇಶದ ಕ್ಯಾಪ್ಟನ್ ಮೋಹಿತ್ ಠಾಕೂರ್ ಮತ್ತು ತರಬೇತಿ ಪಡೆಯುತ್ತಿದ್ದ ಪೈಲಟ್ ಗುಜರಾಥ್‌ನ ವಿ.ಮಹೇಶ್ವರಿ ಎಂದು ಗುರುತಿಸಲಾಗಿದೆ. ನ್ಯಾಷನಲ್ ಫ್ಲೈಯಿಂಗ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಗೆ ಸೇರಿದ ಡೈಮಂಡ್ ಡಿಎ-40 ತರಬೇತಿ ವಿಮಾನ ಮಹಾರಷ್ಟ್ರದ ಗೋಂದಿಯಾ ಜಿಲ್ಲೆಯ ಬಿರ್ಸಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದು, ಸುಮಾರು 40 ಕಿಲೋಮೀಟರ್ ದೂರದ ಬಾಲಾಘಾಟ್‌ನ […]

ತರಬೇತಿ ವಿಮಾನ ಪತನ ➤ ಇಬ್ಬರು ಪೈಲಟ್ ಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba com ಕಾಸರಗೋಡು, ಮಾ. 19. ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚಾಲಿಂಗಾಲ್ ನ ಸಂಶುದ್ದೀನ್ ಎಂಬವರ ಪುತ್ರಿ ಫಾತಿಮಾ (18) ಎಂದು ಗುರುತಿಸಲಾಗಿದೆ. ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು , ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಓವರ್ ಟೇಕ್ ಭರದಲ್ಲಿ ಡಿವೈಡರ್ ಮೇಲೇರಿದ ಬಸ್

(ನ್ಯೂಸ್ ಕಡಬ) newskadaba.com ಕಾಪು, ಮಾ. 19. ಎರಡು ಬಸ್ಸುಗಳ ನಡುವಿನ ಓವರ್ ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಲೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ಒಂದೇ ಹೆಸರಿನ ಎರಡು ಬಸ್ಸುಗಳು ಓವರ್ ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ. ಇನ್ನು ಈ ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೋಲಿಸರು

ಓವರ್ ಟೇಕ್ ಭರದಲ್ಲಿ ಡಿವೈಡರ್ ಮೇಲೇರಿದ ಬಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.18. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 36 ವರ್ಷದ ಮಹಿಳೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ  ನಡೆದಿದೆ. ನಗರದ ಇಸ್ಲಾಬಾಬಾದ್ ಕಾಲೋನಿಯ ಮಹೆಬೂಬ್ ಪಾಶಾ ತಂದೆ ಮದರಸಾಬ್ (40) ಎಂಬಾತನೆ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಬ್ರಹ್ಮಪುರ ಪೊಲೀಸ್ ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಿಫ್ಟ್ ಕೇಬಲ್ ತುಂಡಾಗಿ ಮೂವರು ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಮಾ. 18.  ಆಂಧ್ರಪ್ರದೇಶದ ವಿಜಯವಾಡ ಶಾಖೋತ್ಪನ ವಿದ್ಯುತ್ ಸ್ಥಾವರ (ವಿಟಿಪಿಎಸ್) ನಲ್ಲಿ ಎಲಿವೇಟರ್ ಕೇಬಲ್ ತುಂಡಾಗಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವಿಟಿಪಿಎಸ್ ಸಿಬ್ಬಂದಿ ಹಾಗೂ ಕಾರ್ಮಿಕರು ಧಾವಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇನ್ನು ಅಪಘಾತ ಸಂಭವಿಸಿದಾಗ 8 ಜನರು ಲಿಫ್ಟ್‌ನಲ್ಲಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಲಿಫ್ಟ್ ಕೇಬಲ್ ತುಂಡಾಗಿ ಮೂವರು ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಲ್ವಾಮ ಗುಂಡಿನ ಚಕಮಕಿ ➤ ಉಗ್ರರು ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಶ್ರೀನಗರದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿಯ ಬಳಿಕ ಉಗ್ರರು ಪರಾರಿಯಾದ ಘಟನೆ ನಡೆದಿದೆ. ಪುಲ್ವಾಮಾದ ಮಿಟ್ರಿಗಾಮ್ ಗ್ರಾಮದಲ್ಲಿ ಉಗ್ರರ ಉಪಸ್ಥಿಯ ಬಗ್ಗೆ ನಿರ್ದಿಷ್ಟವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಹುಡುಕಾಟ ತೀವ್ರಗೊಂಡಂತೆ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಗುಂಡು ಹಾರಿಸಿದ್ದರು. ಈ ವೇಳೆ   ಭಯೋತ್ಪಾದಕರು ಕತ್ತಲೆಯ ಲಾಭವನ್ನು ಪಡೆದುಕೊಂಡು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪುಲ್ವಾಮ ಗುಂಡಿನ ಚಕಮಕಿ ➤ ಉಗ್ರರು ಪರಾರಿ Read More »

ಕ್ರೈಮ್ ನ್ಯೂಸ್

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸುಳ್ಯ: ಮಾದಕ ವಸ್ತು ಮಾರಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದ ಪೊಲೀಸರ ತಂಡವು ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಸುಳ್ಯ ಠಾಣೆಗೆ ಕರೆತಂದು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಮಾದಕ ವಸ್ತು ಮಾರಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ನೇಹಿತರೊಂದಿಗೆ ಈಜಲು ಹೋಗಿ ದಾರುಣ ಅಂತ್ಯ ಕಂಡ ಬಾಲಕ ➤ ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ. 18. ಲಗ್ಗೆರಿ ನಿವಾಸಿಯಾದ ದರ್ಶನ್ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ದಾರುಣ ಅಂತ್ಯ ಕಂಡ ಘಟನೆ  ಬೆಂಗಳೂರು ಉತ್ತರ ತಾಲೂಕು ಲಕ್ಷ್ಮೀಪುರ ಕೆರೆಯಲ್ಲಿ ನಡೆದಿದೆ. ತಾಯಿಯ ತಂದೆಗೆ ಹುಷಾರಿಲ್ಲದ ಕಾರಣ ಮನೆಯವರೆಲ್ಲರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರೆಸಾವೆಗೆ ಹೋಗಿರುವ ವೇಳೆ ಮನೆಯಲ್ಲಿ ಉಳಿದಿದ್ದ ಮಗ ದರ್ಶನ್  ಸ್ನೇಹಿತರೊಂದಿಗೆ ಈಜಲು ತೆರಳಿದ್ದಾನೆ. ಈ ವೇಳೆ ದರ್ಶನ್​ ಈಜು ಬಾರದೆ ನೀರಿನಾಳಕ್ಕೆ ಮುಳುಗಿ ಸಾವನ್ನಪ್ಪಿದ್ದಾನೆ. ಕೆರೆಯೊಳಗೆ ಸುಮಾರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ

ಸ್ನೇಹಿತರೊಂದಿಗೆ ಈಜಲು ಹೋಗಿ ದಾರುಣ ಅಂತ್ಯ ಕಂಡ ಬಾಲಕ ➤ ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 18. ಯುವಕನೋರ್ವನ ಮೃತದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top