ಕ್ರೈಮ್ ನ್ಯೂಸ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ […]

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೈಕ್ ಅಪಘಾತದಿಂದಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾಣಿ ಬುಡೋಳಿಯಲ್ಲಿ ನಡೆದಿದೆ. ಮೃತರನ್ನು ಬುಡೋಳಿ ಪಾಟ್ರಕೋಡು ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಗೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ಅವರ ಪತ್ನಿಗೆ ಹೆರಿಗೆಯಾಗಿತ್ತು. ಮಗುವನ್ನು ನೋಡಲೆಂದು ಫಾರೂಕ್ ದೇರಳಕಟ್ಟೆಯ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದೇರಳಕಟ್ಟೆ ಆಸ್ಪತ್ರೆಯ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ

ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ವಿಷಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ವ್ಯಕ್ತಿಯೋರ್ವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡ್ಕಿದು ಗ್ರಾಮದ ಬಂಗೇರಕೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ವೀರಪ್ಪ ಗೌಡ ಎಂದು ಗುರುತಿಸಲಾಗಿದೆ‌. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಪಕ್ಕದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರ ಪುತ್ರ ಮುರಳೀಧರ ಕುಮಾರ್ ಬಿ.ರವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ವಿಷಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 18. ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಲ್ಮರದ ಮುದ್ದೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡವರನ್ನು ಮುದ್ದೋಡಿ ನಿವಾಸಿ ವಿಜಯ ರೈ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಗಮನಕ್ಕೆ ಬಂದ ತಕ್ಷಣವೇ ಮನೆ ಮಂದಿ ವಿಜಯ ರೈ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ವಿಜಯ ರೈ ಮೃತಪಟ್ಟಿದ್ದರು.

ಪುತ್ತೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com   ಹೊನ್ನಾವರ, ಮಾ.18. ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ. 17. ಶಾಲೆಯಿಂದ ಹಿಂತಿರುಗುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಆರೋಪಿ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಪುನೀತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯಿಂದ ಹಿಂದಿರುಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ರಾಮದೇವರಬೆಟ್ಟ ರಸ್ತೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಆಟೋರಿಕ್ಷಾ ಚಾಲಕ ಪುನೀತ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ರಾಮದೇವರ ಬೆಟ್ಟ

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕಿ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಎಂದು ಗುರುತಿಸಲಾಗಿದೆ. ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಡವಿ ಬಿದ್ದಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಅವರ ಪತಿ

ಕಡಬ: ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕಿ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 17. ಇಲ್ಲಿನ ಪೃಥ್ವಿ ವಾಣಿಜ್ಯ ಮಳಿಗೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿದಂತಾಗಿದೆ. ವಾಣಿಜ್ಯ ಮಳಿಗೆಯ ವಿದ್ಯುತ್ ಮೀಟರ್ ಬೋರ್ಡ್ ಗಳಿರುವ ಎರಡು ಕೇಂದ್ರಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆನ್ನಲಾಗಿದೆ.  

ಉಪ್ಪಿನಂಗಡಿ: ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ದಂತ ವೈದ್ಯನ ವಿರುದ್ದ ನರ್ಸ್ ಓರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಗೆ ಮಂಗಳೂರಿನ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಫೈನಲ್ ಡಿಗ್ರಿ ಓದುತ್ತಿದ್ದ ಕೇರಳ ಮೂಲದ ದಂತ ವೈದ್ಯ ನ ಪರಿಚಯವಾಗಿತ್ತು. ಬಳಿಕ ಆತ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದು, ಆಕೆ ಗರ್ಭವತಿಯಾದಾಗ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top