ಕ್ರೈಮ್ ನ್ಯೂಸ್

ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ

(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಮಾ. 17. 60 ವರ್ಷದ ವೃದ್ದನೋರ್ವ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ಬಳಿಕ ವಿಚಾರವನ್ನು ಯಾರೊಂದಿಗೂ ಹೇಳದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ವಿಚಿತ್ರ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ.   ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿ, ಮೊಮ್ಮಗಳನ್ನು ಕೊಡಲಿ ತರಲು […]

ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ. ಮಾ. 17. ನಾಪತ್ತೆಯಾಗಿದ್ದ ಬಾಲಕಿಯೋರ್ವಳು ಶವವಾಗಿ ಪತ್ತೆಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ರೇಖಾ ಸಂಗಪ್ಪ ಯಂಕಂಚಿ(11) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ, ಮೃತದೇಹವನ್ನು ಚೀಲದಲ್ಲಿ ಹಾಕಿ ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 17. ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಆರೋಪಿ ಸಹಿತ ಬೈಂದೂರು ಠಾಣಾ ಪೊಲೀಸರು ವಶಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆ ಹಿಡಿದು,

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ತಂದೆಯೇ ಕೊಂದ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಆಶಾ(32) ಎಂದು ಗುರುತಿಸಲಾಗಿದೆ. ತಂದೆ- ತಾಯಿ ಜೊತೆ ವಾಸವಿದ್ದ ಆಶಾ, ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ತಂದೆ-ತಾಯಿಗೆ ನಿತ್ಯವೂ ಕಿರುಕುಳ ನಿಡುತ್ತಿದ್ದಳು ಎನ್ನಲಾಗಿದೆ. ಮಗಳ ಈ ವರ್ತನೆಯಿಂದ ಬೇಸತ್ತ ತಂದೆ ರಾತ್ರಿ ಮಲಗಿದ್ದ ಮಗಳ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 17. ಇಲ್ಲಿನ  ಸರಕಾರಿ ಪ್ರೌಢ ಶಾಲೆಯಲ್ಲಿನ ಕೊಠಡಿಯಲ್ಲಿದ್ದ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ. ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ರೂ. ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಐಪಿಸಿ ಕಲಂ 380,454, 457ರಂತೆ ಪ್ರಕರಣ ದಾಖಲಿಸಲಾಗಿದೆ.

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 17. ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗಡೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೂಲಗಳ ಪ್ರಕಾರ, ಮೈಸೂರು-ಧಾರವಾಡ ಎಕ್ಸ್ಪ್ರೆಸ್ (ರೈಲು ಸಂಖ್ಯೆ 07357) ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪಿತ್ತು. ಎಸ್ 3 ಕೋಚ್ ನ ಸೀಟ್ ನಂ. 20ರ ಕೆಳಗೆ ಸಂಜೆ 4 ಗಂಟೆ ಸುಮಾರಿಗೆ ರೈಲ್ವೇ ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾಗ ಗುಲಾಬಿ ಬಣ್ಣದ ಸ್ಲೀವ್ ಲೆಸ್ ಫ್ರಾಕ್ ಧರಿಸಿದ್ದ

ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಮಾ. 17. ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಟ್ಟು ಎಂಟು ಮಂದಿ ಮೃತಪಟ್ಟು, 11 ಮಂದಿಯನ್ನು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟರ್ಕಿ ಭೂಕಂಪ ನೆಲೆಯಲ್ಲಿ ಪ್ರವಾಹ ➤ 14 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಟರ್ಕಿ, ಮಾ. 17. ಟರ್ಕಿ ಸಿರಿಯಾ ಗಡಿಯಲ್ಲಿ ಭೂಕಂಪ ಸಂಭವಿಸಿದ್ದ ಪ್ರದೇಶದಲ್ಲಿ ದಿಢೀರ್ ಪ್ರವಾಹ ನುಗ್ಗಿದ್ದರಿಂದ ಹಲವರು ಕೊಚ್ಚಿ ಹೋಗಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಟರ್ಕಿ ಸಿರಿಯಾ ಗಡಿಯ ಸನ್ಲಿಯುರ್ಫಾ ಒಂದರಲ್ಲಿಯೇ ಇಬ್ಬರು ಮಕ್ಕಳು ಸೇರಿ 12 ಮಂದಿ ಮೃತರಾದರು. ಪ್ರವಾಹ ಸಂತ್ರಸ್ತರ ರಕ್ಷಣೆಗೆ 10 ತಂಡಗಳನ್ನು ರಚಿಸಲಾಗಿದೆ. 5 ಮಂದಿ ಕಾಣೆಯಾಗಿದ್ದಾರೆ ಎನ್ನಲಾಗಿದೆ.  

ಟರ್ಕಿ ಭೂಕಂಪ ನೆಲೆಯಲ್ಲಿ ಪ್ರವಾಹ ➤ 14 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ         

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣದ ಬಳಿ ಡ್ರಮ್ ಒಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಪ್ರಕರಣವನ್ನು ಭೇಧಿಸಿದ ರೈಲ್ವೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದ ಮಹಿಳೆಯನ್ನು ಬಿಹಾರ ಮೂಲದ ತಮನ್ನಾ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಭಾಗವಹಿಸಿದ್ದು ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಮಾಲ್(21), ತನ್ವೀರ್(24) ಶಕೀಬ್(25) ಎಂಬವರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು

ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ          Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.17. ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡಲು ಉದ್ದೇಶದಿಂದ ಕಾರಿನಲ್ಲಿ ಸಾಗಾದ ಮಾಡುತ್ತಿದ್ದ ಸಂಧರ್ಭ ಸಂಪ್ಯ ಪೊಲೀಸ್ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಅಬೂಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಪರಾರಿಯಾದವನನ್ನು ಸುಳ್ಯದ ಸರ್ಪುದ್ದಿನ್ ಎಂದು ಗುರುತಿಸಲಾಗಿದೆ.

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top