ಕ್ರೈಮ್ ನ್ಯೂಸ್

ಮಂಗಳೂರು: ಕಾರ್ಮಿಕರ ಶೆಡ್ ಬಳಿ ಮಣ್ಣು ಕುಸಿತ ➤ 9 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಮಣ್ಣು ಕುಸಿದ ಪರಿಣಾಮ 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರದಂದು ತಡರಾತ್ರಿ ಮಂಗಳೂರಿನಲ್ಲಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿಯಿದ್ದ ಮಣ್ಣು ಕುಸಿದು ಬಿದ್ದು, ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಕಾರ್ಮಿಕರ ಶೆಡ್ ಬಳಿ ಮಣ್ಣು ಕುಸಿತ ➤ 9 ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆ ➤ ಸತತ 3ನೇ ಪ್ರಕರಣ- ಬೆಚ್ಚಿಬಿದ್ದ ಬೆಂಗಳೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ಇಲ್ಲಿನ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಪ್ಲಾಸ್ಟಿಕ್‌ ಡ್ರಮ್ ​ವೊಂದರಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದ್ದು ನಗರದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೀವ್ರ ಶೋಧಕಾರ್ಯ ಮುಂದುವರಿಸಿದ್ದಾರೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣದ ಬಳಿ ಡ್ರಮ್ ಹಾಗೂ ಚೀಲದಲ್ಲಿ ಮಹಿಳೆ ಶವಗಳು ಪತ್ತೆಯಾಗಿತ್ತು, ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅದೇ ರೀತಿಯ ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಸೋಮವಾರದಂದು

ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆ ➤ ಸತತ 3ನೇ ಪ್ರಕರಣ- ಬೆಚ್ಚಿಬಿದ್ದ ಬೆಂಗಳೂರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಮೋಸ ➤ ಮೈಮೇಲೆ ಬಿಸಿ ಎಣ್ಣೆ ಎರಚಿದ ಪ್ರೇಯಸಿ- ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಕೊಯಮತ್ತೂರು, ಮಾ. 14. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಿಯಕರನ ಮೈ ಮೇಲೆ ಪ್ರೇಯಸಿಯು ಕುದಿಯುವ ಎಣ್ಣೆ ಎರಚಿದ ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಕಾರ್ತಿ (27) ಎಂದು ಗುರುತಿಸಲಾಗಿದೆ. ಮೀನಾ ದೇವಿ ಎಂಬಾಕೆ ಕೃತ್ಯ ಎಸಗಿದಾಕೆ. ಕಾರ್ತಿ ಹಾಗೂ ಮೀನಾ ಸಂಬಂಧಿಗಳಾಗಿದ್ದು, ಹಲವು ಸಮಯದಿಂದ ಪ್ರೀತಿಸುತ್ತಿದ್ದರು. ಅಲ್ಲದೇ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಆತ, ಕೆಲ ದಿನಗಳ ಹಿಂದೆ ಬೇರೆ ಯುವತಿಯೊಂದಿಗೆ ವಿವಾಹ

ಮದುವೆಯಾಗುವುದಾಗಿ ನಂಬಿಸಿ ಮೋಸ ➤ ಮೈಮೇಲೆ ಬಿಸಿ ಎಣ್ಣೆ ಎರಚಿದ ಪ್ರೇಯಸಿ- ಯುವಕ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿರುವ‌ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ. ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ಸಂದೇಶದೊಂದಿಗೆ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ

ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 14. ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ನಡೆದಿದೆ. ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿದ್ದು, ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ. ಇನ್ನು ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಗ್ರಾಹಕರ ವಿಳಾಸಕ್ಕೆ ತಲುಪಿಸದೇ 6 ಐಫೋನ್ ಗಳ ಜೊತೆ ಪರಾರಿಯಾದ ಡೆಲಿವರಿ ಬಾಯ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14.  ಆರು ಐಫೋನ್ ಗಳ ಜೊತೆ ಡೆಲಿವರಿ ಬಾಯ್ಸ್ ಪರಾರಿಯಾಗಿರುವ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ. 05ರಂದು ತಸ್ಲೀಂ ಆರಿಫ್ ಎಂಬವರು ನೀಡಿದ ಐಫೋನ್ ಗಳನ್ನು ಡಂಜೋ ಡೆಲಿವಿ ಸೇವೆ ನೀಡುವ ಅರುಣ್ ಪಾಟೀಲ್ ಹಾಗೂ ನಯನ್.ಜೆ ಎಂಬವರು ಗ್ರಾಹಕರ ವಿಳಾಸಕ್ಕೆ ತಲುಪಿಸದೇ ಪರಾರಿಯಾಘಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕರಿತು ತನಿಖೆ ನಡೆಸುವಂತೆ ದೂರು ದಾಖಲಿಸಲಾಗಿದೆ.

ಗ್ರಾಹಕರ ವಿಳಾಸಕ್ಕೆ ತಲುಪಿಸದೇ 6 ಐಫೋನ್ ಗಳ ಜೊತೆ ಪರಾರಿಯಾದ ಡೆಲಿವರಿ ಬಾಯ್ಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 14. ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈತ ಜಮೀನೊಂದರಲ್ಲಿ ತೆರೆದಿಟ್ಟ ಕೊಳವೆ ಬಾವಿಗೆ ಬಿದ್ದಿದ್ದು, ಈ ವಿಚಾರ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆಯೇ ಎನ್‌ ಡಿಆರ್‌ ಎಫ್‌ ರಕ್ಷಣಾ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಆ್ಯಂಬುಲೆನ್ಸ್, ಆಕ್ಸಿಜನ್‌, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್‌ ನೆರವನ್ನು ನೀಡಿದ್ದಾರೆ. ಆದರೂ ದುರದೃಷ್ಟವಶಾತ್ ಬಾಲಕ

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 14. ಹತ್ತು ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪನತ್ತಡಿ ಸಮೀಪದ ಚಾಮುಂಡಿ ಕುನ್ನು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಭಾಕರ ಎಂಬವರ ಪುತ್ರ 5ನೇ ತರಗತಿ ವಿದ್ಯಾರ್ಥಿ ಅರ್ಜುನ್ (10) ಎಂದು ಗುರುತಿಸಲಾಗಿದೆ. ದಿಢೀರ್ ನಾಪತ್ತೆಯಾಗಿದ್ದ ಬಾಲಕನನ್ನು ಮನೆಯವರು ಹಾಗೂ ಪರಿಸರ ವಾಸಿಗಳು ಶೋಧ ನಡೆಸಿದಾಗ ಆವರಣ ಇಲ್ಲದ ಬಾವಿಯಲ್ಲಿ ಬಿದ್ದಿರುವುದು ಕಂಡು ಬಂದಿದ್ದು, ಕೂಡಲೇ ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದನು

ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ  ➤ ಸವಾರ ಮೃತ್ಯು..!   

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ. 14. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಮೃತ ಸವಾರನನ್ನು ಮುಹಮ್ಮದ್ ಹನೀಫ್(35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು, ಗಾಯಾಳುವನ್ನು ಬಂಟ್ವಾಳ ತಾಲೂಕಿನ ಮುಹಮ್ಮದ್ ಖಾಸಿಂ ಎಂದು ಗುರುತಿಸಲಾಗಿದೆ. ಮೃತ ಸವಾರ ಮುಹಮ್ಮದ್ ಹನೀಫ್ ಎಂಬವರು ಲೇಡಿಹಿಲ್ ವೃತ್ತದ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು, ಬಳಿಕ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ  ➤ ಸವಾರ ಮೃತ್ಯು..!    Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top