ಕ್ರೈಮ್ ನ್ಯೂಸ್

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !      

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ. ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ […]

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಮಾ. 10. ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕಮ್ಮಾಜೆ ನೇಕಾರ ಕಾಲನಿ ಬಳಿ ನಡೆದಿದೆ. ಉಜಿರೆ ಕಡೆಯಿಂದ ಹಳೆಯಂಗಡಿ ಕಡೆಗೆ ಓಮ್ನಿ ಕಾರು ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಕಮ್ಮಾಜೆ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ, ಅಲ್ಲೇ ಇದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ, ಮಗು ಸಹಿತ ನಾಲ್ವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಎಮ್ಮೆ ತಿವಿದು ಯುವಕನೋರ್ವ ಮೃತ್ಯು !

(ನ್ಯೂಸ್ ಕಡಬ)newskadaba.com  ಪುತ್ತೂರು, ಮಾ.10. ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.  ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಸಾದಿಕ್ ಗೆ ಎಮ್ಮೆ ತಿವಿದಿದೆ. ಪುತ್ತೂರಿನಲ್ಲಿ ಕಸಾಯಿಖಾನೆಗೆ ತಂದ ಎಮ್ಮೆಯನ್ನು ಇಳಿಸುತ್ತಿದ್ದಾಗ ಅದು ಹಗ್ಗ ಮುರಿದು ಓಡಿ ಹೋಗಿದೆ. ಎಮ್ಮೆಯನ್ನು ಹಿಡಿಯಲು ಹೋದ ಸಾದಿಕ್​ಗೆ ಕೊಂಬಿನಿಂದ ತಿವಿದಿದೆ. ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡಿದ್ದ ಸಾದಿಕ್​ ನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ

ಪುತ್ತೂರು: ಎಮ್ಮೆ ತಿವಿದು ಯುವಕನೋರ್ವ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ ➤ ತಾಲಿಬಾನ್ ಗವರ್ನರ್ ಸೇರಿ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಬೂಲ್‌, ಮಾ. 10. ಅಫ್ಘಾನಿಸ್ತಾನದ ಮಜಾರ್‌-ಇ-ಷರೀಫ್ ಪ್ರದೇಶದಲ್ಲಿ ಬಾಂಬ್ ಸ್ಪೋಟ ಸಂಭವಿಸಿದ ಪರಿಣಾಮ ಪ್ರಾಂತೀಯ ಗವರ್ನರ್ ದಾವೂದ್‌ ಮುಜ್ಮಲ್‌ ಸಹಿತ ಮೂವರು ಮೃತಪಟ್ಟ ಘಟನೆ ವರದಿಯಾಗಿದೆ. ಸ್ಪೋಟದ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾಲಿಬಾನ್ ವಿರೋಧಿ ಉಗ್ರ ಸಂಘಟನೆ ಇಸ್ಲಾಮಿಕ್‌ ಸ್ಟೇಟ್ಸ್ ನ ಖೊರಾಸನ್‌ ಘಟಕವು ಸ್ಪೋಟ ನಡೆಸಿರಬಹುದು ಎಂದು ಶಂಕಿಸಲಾಗಿದೆ ಎಂದು ತಾಲಿಬಾನ್‌ ಮುಖ್ಯ ವಕ್ತಾರ ಜಬೀಬುಲ್ಲಾ ಮುಜಾಹಿದ್‌ ತಿಳಿಸಿರುವುದಾಗಿ ವರದಿಯಾಗಿದೆ.

ಬಾಂಬ್ ಸ್ಫೋಟ ➤ ತಾಲಿಬಾನ್ ಗವರ್ನರ್ ಸೇರಿ ಮೂವರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ  ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ವೀರಾಜಪೇಟೆ, ಮಾ. 09. ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣತಿ ಹೊಂದಿದ ಜ್ಯೋತಿಷ್ಯರೋರ್ವರು ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿರುವ ಕುರಿತು ನೊಂದ ಮಹಿಳೆಯು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. . ಆರೋಪಿಯನ್ನು ಕದನೂರು ಗ್ರಾಮದಲ್ಲಿ ಶ್ರೀ ಮಂಜುನಾಥ ಜ್ಯೋತಿಷ್ಯಾಲಯವನ್ನು ನಡೆಸುತ್ತಿರುವ ಹೆಚ್‌.ಎಂ. ಪ್ರಕಾಶ್ (53) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ  ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಚಿನ್ನ ಸಾಗಾಟ ➤ ಏರ್ ಇಂಡಿಯಾ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕೊಚ್ಚಿ, ಮಾ. 09. ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ವರದಿಯಾಗಿದೆ . ಬಂಧಿತ ಆರೋಪಿಯನ್ನು ವಯನಾಡು ಮೂಲದ ಶಫಿ ಎಂದು ಗುರುತಿಸಲಾಗಿದೆ. ಈತನಿಂದ 1,487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬಹ್ರೇನ್, ಕೋಯಿಕ್ಕೋಡ್ ಹಾಗೂ ಕೊಚ್ಚಿ ನಡುವಿನ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿದ್ದು, ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿರುವುದರ ಕುರಿತು ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು.

ಅಕ್ರಮ ಚಿನ್ನ ಸಾಗಾಟ ➤ ಏರ್ ಇಂಡಿಯಾ ಸಿಬ್ಬಂದಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 09. ಸೊಪ್ಪು ತಿಂದ ಎರಡು ಹಸು ಹಾಗೂ ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿದ ಘಟನೆ ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. ಕೃಷಿಕ ಸಂಜೀವ ಪೂಜಾರಿ ಎಂಬವರು ಮಾ. 08ರಂದು ಮಧ್ಯಾಹ್ನ ಕರಿ ಬಸ್ರಿ ತಳಿಯ ಸೊಪ್ಪನ್ನು ಜಾನುವಾರುಗಳಿಗೆ ಮಲಗಲು ಬೆಡ್ಡಿಂಗ್ ಗೆಂದು ಹಾಕಲಾಗಿತ್ತು. ಆದರೆ ಅದನ್ನೆಲ್ಲ ತಿಂದ ಹಸುಗಳು ನಂತರ ಅಸ್ವಸ್ಥಗೊಂಡಿದೆ. ಸಂಜೆ ನಂತರ ಹಸುಗಳು ಕೆಲವು

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲಡ್ಕ: ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 09. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್‌ ಬಳಿಯ ನಿವಾಸಿ ಚಂದ್ರಶೇಖರ್‌ ಗೌಡರ ಪುತ್ರಿ ವೈಷ್ಣವಿ ಎಂದು ಗುರುತಿಸಲಾಗಿದೆ. ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜಿಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್‌ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಲ್ಲಡ್ಕ: ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಅಲ್ಪ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಅತ್ತಾವರದ ಅಪಾರ್ಟ್ಮೆಂಟ್ ವೊಂದರಲ್ಲಿ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಲ್ಲಿರುವ ಫ್ಲ್ಯಾಟ್ ನಿಂದ ರಾತ್ರಿ ಸುಮಾರು 7:30ರ ವೇಳೆಗೆ ಹೊಗೆ ಬರುತ್ತಿದ್ದುದನ್ನು ಗಮನಿಸಿದ ಇತರ ಫ್ಲ್ಯಾಟ್ ನಿವಾಸಿಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದಂತಾಗಿದೆ.

ಮಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯರಿಬ್ಬರ ನಡುವೆ ಬೀದಿ ರಂಪಾಟ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಧಾರವಾಡ, ಮಾ. 09. ಯುವತಿಯರಿಬ್ಬರ ಮಧ್ಯೆ ಬೀದಿ ರಂಪಾಟ ನಡೆದ ಘಟನೆ ಧಾರವಾಡದ ಓಲ್ಡ್ ಡಿಎಸ್ಪಿ ಸರ್ಕಲ್ ಬಳಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯರಿಬ್ಬರು ಒಂದೇ ಕಾರಿನಲ್ಲಿ ಜೊತೆಯಾಗಿ ಬಂದಿದ್ದರು. ಮೊದಲು ಕಾರಿನಲ್ಲಿ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಬಳಿಕ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಕಾರಿನ ಒಳಗೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಇದಾದ ನಂತರ ಕಾರಿನಿಂದ ಕೆಳಗೆ ಇಳಿದು, ಪರಸ್ಪರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಅಲ್ಲದೆ,

ಯುವತಿಯರಿಬ್ಬರ ನಡುವೆ ಬೀದಿ ರಂಪಾಟ ➤ ವಿಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top