ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ➤ ಮಂಗಳೂರು ವಿವಿಯ ಸಹ ಪ್ರಾಧ್ಯಾಪಕ ಖುಲಾಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ವಿದ್ಯಾರ್ಥಿನಿಯೋರ್ವಳ ಮನೆಗೆ ಆಗಾಗ ಹೋಗುತ್ತಿದ್ದು ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರು ವಿವಿಯ ಪ್ರಾಧ್ಯಾಪಕರೊಬ್ಬರನ್ನು ಕರ್ನಾಟಕ ಹೈಕೋರ್ಟ್‌ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಮಂಗಳೂರು ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ವೇದವ ಅವರು ವಿದ್ಯಾರ್ಥಿನಿಯೊಬ್ಬಳ ಜತೆ ನಿಕಟ ಸಂಬಂಧ ಹೊಂದಿದ್ದು, ಆಗಾಗ ಆಕೆಯ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ. 2013ರ ಆಗಸ್ಟ್‌ 2ರಂದು ವಿದ್ಯಾರ್ಥಿನಿ ಒಬ್ಬಳೇ ಮನೆಯಲ್ಲಿದ್ದ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತದಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ➤ ಮಂಗಳೂರು ವಿವಿಯ ಸಹ ಪ್ರಾಧ್ಯಾಪಕ ಖುಲಾಸೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 09. ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಒಟ್ಟು 3,11,550 ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್ ಬಾಕ್ಸ್ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ,

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.  

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಾಂಜಾ, ಎಂ.ಡಿ.ಎಂ.ಎ ಸಹಿತ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.08. ಗಾಂಜಾ ಮತ್ತು ಎಂ.ಡಿ.ಎಂ.ಎ ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೂರು ಗ್ರಾಂ ಗಾಂಜಾ ಸಹಿತ ಕೋಟೆಕ್ಕಾರ್ ಬೀರಿಯ ನಿಖಿಲ್ ಶೆಟ್ಟಿ(23) ಮತ್ತು ರಾಹುಲ್(24) ನನ್ನ ಮಂಜೇಶ್ವರ ಕುಂಜತ್ತೂರು ಪದವಿನಿಂದ ಬಂಧಿಸಲಾಗಿದೆ. ಇವರು ಮಾರಾಟಕ್ಕೆಂದು ಗಾಂಜಾ ಸಹಿತ ತಲಪಿದ್ದು , ಮಾಹಿತಿಯಂತೆ ಇಬ್ಬರನ್ನು ಬಂಧಿಸಿದ್ದಾರೆ. ಮಾದಕ ವಸ್ತು ಸಹೀರ್ತಾ ಅಫ್ರಿದ್(32) ಮತ್ತು ತಹಿಮ್(21) ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.  

ಗಾಂಜಾ, ಎಂ.ಡಿ.ಎಂ.ಎ ಸಹಿತ ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಡೆದಿದೆ. ಕೊಲೆಯಾದವರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್‌ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಪಡುಬಿದ್ರಿ, ಮಾ.07. ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ದಂಪತಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಹೊರಟಿದ್ದರು ಎಂದು ತಿಳಿದುಬಂದಿದೆ.  

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮಾ. 07. ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಮುಲ್ಕಿ ಸೇತುವೆ ಬಳಿ ಮಂಗಳವಾರದಂದು ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ ಅಕ್ಬರ್ ಪಾಶ(61) ಹಾಗೂ ಪತ್ನಿ ಖತೀಜಾಬಿ(46) ಎಂದು ಗುರುತಿಸಲಾಗಿದೆ. ಇವರಿಬ್ಬರು ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಪಾಸ್ ಪೋರ್ಟ್ ಮಾಡಿಸಲೆಂದು ತೆರಳುತ್ತಿದ್ದ ವೇಳೆ ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಇದೇ ಸಂದರ್ಭ ಅದೇ

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.07. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿ ನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು, ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿದ್ದಲಿಂಗಯ್ಯ ಸ್ವಾಮಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.07. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯವ ಎನ್ಐಟಿಕೆ ಟೊಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳಿತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top