ಕ್ರೈಮ್ ನ್ಯೂಸ್

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಕಡಬ, ಫೆ.24. ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ […]

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.24. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಗೆ ಜೀವಾವಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ ➤ ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಫೆ.24. ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣ ದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ. ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ.

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ ➤ ಗೃಹಿಣಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಪು, ಫೆ.24. ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪು ಪೊಲೀಸರು ಆಂಧ್ರಪ್ರದೇಶ ರಾಜ್ಯದ ಮದನಪಲ್ಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಆಂಧ್ರಪ್ರದೇಶದ ಸುನಿಲ್‌ (29) ಬಂಧಿತ ಆರೋಪಿ. ಕಾಪುವಿನ ಮಹಾಲಸಾ ಸ್ಟೋರ್ ಮಾಲಿಕರಾದ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಕರಿಂದ 6 ಲಕ್ಷ ಹಣ ದೋಚಿ ಪರಾರಿಯಾಗಿದ್ದ.

ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ➤ 55ಕ್ಕೂ ಅಧಿಕ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 55ಕ್ಕೂ ಅಧಿಕ ಭಿಕ್ಷುಕರನ್ನು ಸಿಸಿಬಿ ಮಹಿಳಾ ಸಂರಕ್ಷಣೆ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿವಿಧೆಡೆ 14 ತಂಡಗಳನ್ನು ರಚಿಸಿ ಭಿಕ್ಷಾಟನೆ ಮಾಡುವವರನ್ನು ರಕ್ಷಣೆ ಮಾಡಲಾಗಿದೆ.ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಸಿಬ್ಬಂದಿ ಮಹಿಳೆಯರು, ಮಕ್ಕಳು ಸೇರಿ 55 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪುನರ್ವಸತಿ ಕಲ್ಪಿಸಲಾಗಿದೆ.

ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ➤ 55ಕ್ಕೂ ಅಧಿಕ ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು

ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.23. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದೂರು ದಾಖಲಿಸಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ನಾನ್ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ 32 ವರ್ಷದ ವ್ಯಕ್ತಿಯೊಬ್ಬರು ಈ ಕೃತ್ಯ ಎಸಗಿರುವುದು ಎಂದು ತಿಳಿದು ಬಂದಿದೆ. ‘ಬಸ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನ ಬಗ್ಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ ➤ 42 ವಿದ್ಯಾರ್ಥಿಗಳ ಅಮಾನತು

(ನ್ಯೂಸ್ ಕಡಬ) newskadaba.com. ಮಂಗಳೂರು. ಫೆ.23. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ವಿದ್ಯಾರ್ಥಿಗಳು  ಮಾದಕ ವ್ಯಸನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು, ಈ ಒಂದು ತಿಂಗಳಲ್ಲಿ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇಂತಹ ಕ್ರಮಗಳಿಂದ ಸಮಾಜಕ್ಕೆ ಬಲವಾದ ಸಂದೇಶ ರವಾನೆಯಾಗುತ್ತದೆ ಹಾಗೂ ಮಾದಕ ವಸ್ತುಗಳ ಸೇವನೆಯ ವಿರುದ್ಧ ಜಾಗೃತಿ ಮೂಡಿಸುತ್ತದೆ. ಉಡುಪಿಯಲ್ಲಿ ಡ್ರಗ್ಸ್ ಹಾವಳಿಗೆ ಕೆಲವು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚೀಂದ್ರ ಉಡುಪಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ ➤ 42 ವಿದ್ಯಾರ್ಥಿಗಳ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾಡ್ಜ್‌‌ ನಲ್ಲಿ ಅನೈತಿಕ ವೇಶ್ಯಾವಟಿಕೆ ➤ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ

(ನ್ಯೂಸ್ ಕಡಬ)newskadaba.com ಮಣಿಪಾಲ, ಫೆ.23. ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹೋಟೆಲ್‌‌ನ ಮೇನೇಜರ್‌ ಸಂಪತ್‌ ಕುಮಾರ್‌ ಮತ್ತು ಕೆಲಸಕ್ಕೆ ಇರುವ ಸಂತೋಷ್‌ ಮತ್ತು ದಿನೇಶ್‌ ಇವರು ಹೆಂಗಸರನ್ನು ಅನೈತಿಕ ವೇಶ್ಯವಾಟಿಕೆ ಚಟುವಟಿಕೆ ಮಾಡುವಂತೆ ಈ ರೂಮಿನಲ್ಲಿ ಇರಿಸಿದ್ದಾರೆಂದು ವರದಿಯಾಗಿದೆ.

ಲಾಡ್ಜ್‌‌ ನಲ್ಲಿ ಅನೈತಿಕ ವೇಶ್ಯಾವಟಿಕೆ ➤ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com. ಆಲಂಕಾರು. ಫೆ.23.  ಕೆಲ ದಿನಗಳ ಹಿಂದೆ ಆಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು  ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಅಲಂಕಾರಿನ ನಿವಾಸಿ ಸೂರಪ್ಪ ಪೂಜಾರಿ (74) ಅವರ ಶವ  ಕುಮಾರಧಾರ ನದಿ ತೀರದಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲಂಕಾರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದ,  ಇವರು ಸಂಜೆಯಾದರೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಸಂಬಂಧಿಕರ ಮನೆ ಸೇರಿದಂತೆ ಎಲ್ಲಾ ಕಡೆ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ ಬುಧವಾರ ಬೆಳಗ್ಗೆ ಆಲಂಕಾರು ಪೇಟೆಯ ಸಿಸಿ

➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾನೂನು ಬಾಹಿರ ಶಸ್ತ್ರಾಸ್ತ್ರ ತರಬೇತಿ ➤ ಫ್ರೀಡಂ ಕಮ್ಯೂನಿಟಿ ಹಾಲ್‌ NIA ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.23. ಬೆಳ್ಳಾರೆ ಸಮೀಪದ ನೆಟ್ಟಾರ್ ನಿವಾಸಿ ಪ್ರವೀಣ್ ಅವರ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್‌ ಫ್ರಂಟ್‌ ಅಫ್‌ ಇಂಡಿಯಾದ(ಪಿಎಫ್‌ಐ) ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿದೆ. ಈ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಫ್ರೀಡಂ ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ಕಾನೂನು ಬಾಹಿರ ಶಸ್ತ್ರಾಸ್ತ್ರ ತರಬೇತಿ ➤ ಫ್ರೀಡಂ ಕಮ್ಯೂನಿಟಿ ಹಾಲ್‌ NIA ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top