ಕ್ರೈಮ್ ನ್ಯೂಸ್

ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಪತಿ

(ನ್ಯೂಸ್ ಕಡಬ)newskadaba.com  ಚಾಮರಾಜನಗರ, ಫೆ.22. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ವಾಟ್ಸಾಪ್ ಸ್ಟೇಟಸ್ ಹಾಕಿ ಖತರ್ನಾಕ್ ಪತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದಿದೆ. ನಾಗಮಲೆಯ ಲಕ್ಷ್ಮಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಎರಭಯ್ಯನ ಹಳ್ಳಿಯ ಮುನಿರಾಜ್ ಎಂಬವರನ್ನು ಮದುವೆಯಾಗಿದ್ದಳು. ಬಳಿಕ ತನ್ನ ಗಂಡನನ್ನು ತೊರೆದು ಬೇರೊಬ್ಬನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು. ಇದರಿಂದ ಬೇಸತ್ತಿದ್ದ ಗಂಡ ಮುನಿರಾಜ್ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.  

ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಸತಿಗೃಹದಲ್ಲಿ ನೇಣು ಬಿಗಿದು ಪ್ರೊಫೆಸರ್‌ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪಾಲ, ಫೆ.23. ನೇಣು ಬಿಗಿದು ಪ್ರೊಫೆಸರ್‌ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಶರಥ ನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಉತ್ತರಪ್ರದೇಶದ ಅಹ್ಮದ್‌ ಮಿರ್ಜಾ (38) ನೇಣಿಗೆ ಶರಣಾದವರು. ಮೃತಪಟ್ಟು ನಾಲ್ಕು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್‌ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿದ್ದರು.    

ವಸತಿಗೃಹದಲ್ಲಿ ನೇಣು ಬಿಗಿದು ಪ್ರೊಫೆಸರ್‌ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ.23. ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಪೋಲೀಸರ ಕಸ್ಟಡಿ ಚಿತ್ರಹಿಂಸೆಯಿಂದಾಗಿ 36 ವರ್ಷದ ದೈನಂದಿನ ಕೂಲಿ ಕಾರ್ಮಿಕ ಖದೀರ್ ಖಾನ್ ಎಂಬ ವ್ಯಕ್ತಿ ಮೃತಪಟ್ಟಿದ್ದು, ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಮೆಡಕ್‌ ನಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಚೈನ್ ಸ್ನಾಚರ್ ಮತ್ತು ಖದೀರ್‌ನ ನಡುವೆ ಸಾಮ್ಯತೆ ಇದ್ದುದ್ದರಿಂದ ಜನವರಿ 29 ರಂದು ಖದೀರ್‌ನನ್ನು ತಪ್ಪಾಗಿ ಗುರುತಿಸಿ ಬಂಧಿಸಲಾಗಿತ್ತು.  

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com. ವಿಟ್ಲ. ಫೆ.23. ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ, ವೇಳೆ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿ ಬಿದ್ದಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.23. ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಗಾಯಗೂಂಡ ಘಟನೆ ವಿದ್ಯಾನಗರ ಪಾರೆ ಕಟ್ಟೆಯಲ್ಲಿ ನಡೆದಿದೆ. ವಿದ್ಯಾನಗರ ಠಾಣಾ ಪೊಲೀಸ್ ಬಿಜು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ರಾತ್ರಿ ಗಸ್ತು ಮುಗಿಸಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಜೀಪು ಅಗ್ನಿ ಗಾಯುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.  

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಬೈಕ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಸಮೀಪದ ನೆಲ್ಯಾಡಿ ತಿರುವಿನಲ್ಲಿ ಗುರುವಾರದಂದು ನಡೆದಿದೆ. ಗಾಯಾಳುವನ್ನು ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಬಲ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದೆ‌. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಪೆಂಟರ್ ಅಡ್ಡ ಗಟ್ಟಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಡೆದಿದೆ. ಮಂಗನಹಳ್ಳಿ ನಿವಾಸಿ ದಿನೇಶ್(46) ಹತ್ಯೆಯಾದವರು ಎಂದು ಹೇಳಲಾಗಿದೆ. ನಿರ್ಜನ ಪ್ರದೇಶದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಿನೇಶ್ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಖಾಲಿ ಜಾಗದಲ್ಲಿ ಲಾಂಗ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಫೆ.23. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಸಂಭವಿಸಿದೆ. ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಲ ಮಾಡಿ ಮಗಳ ಮದುವೆ ಮಾಡಿದ್ದು, ಹೀಗಾಗಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.23. ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರಿನಲ್ಲಿದ್ದ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ ಎಮದು ಗುರುತಿಸಲಾಗಿದೆ. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.    

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ !      ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23. ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೊರಂಗ್ರಪಾಡಿ, ಮಾತಾ ಶ್ರೀ ವಾಸುಕಿ ನಗರ 5 ನೇ ಕ್ರಾಸ್ ನ ಇಕ್ಬಾಲ್ ಶೇಕ್ (32) ಎಂದು ಗುರುತಿಸಲಾಗಿದೆ. ಮಣಿಪಾಲದ ಆರ್.ಟಿ.ಓ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತು ಹಾಗೂ ಗಾಂಜಾ ಮಾರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದು, ಆರೋಪಿಯ ವಶದಲ್ಲಿದ್ದ 136 ಗ್ರಾಂ ಗಾಂಜಾ ‌, 0.36 ಗ್ರಾಂ ಎಂ ಡಿ ಎಂ ಎ (ಪ್ಲಾಸ್ಟಿಕ್

ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ !      ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top