ಕ್ರೈಮ್ ನ್ಯೂಸ್

ರೈಸ್ ಮಿಲ್ ನಲ್ಲಿ ವಿದ್ಯುತ್ ಅವಘಡ ➤ ಯುವಕ‌ ಸಾವು!

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.8. ಆಕಾಶ್​ ರೈಸ್​ ಮಿಲ್​ನಲ್ಲಿ ವಿದ್ಯುತ್​ ಪ್ರವಹಿಸಿ ಕಾರ್ಮಿಕ ಸಂದೀಪ್​​​(32) ಎಂಬಾತ ಸಾವನ್ನಪ್ಪಿರುವ ಘಟನೆ ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದ ರೈಸ್ ಮಿಲ್​ನಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದ ನಿವಾಸಿಯಾದ ಸಂದೀಪ್ ನೀರಿಗಾಗಿ ವಿದ್ಯುತ್​ ಪಂಪ್​ಸೆಟ್​ ಆನ್​ ಮಾಡಲು ಹೋದಾಗ ವಿದ್ಯುತ್​ ಪ್ರವಹಿಸಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್​ನಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್​ನನ್ನು ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಕಾರ್ಮಿಕ ಸಂದೀಪ್​​ ಸಾವನವ್ನಪ್ಪಿದ್ದಾನೆ. […]

ರೈಸ್ ಮಿಲ್ ನಲ್ಲಿ ವಿದ್ಯುತ್ ಅವಘಡ ➤ ಯುವಕ‌ ಸಾವು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ.8. ಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಪೆಟ್ರೋಲ್ ಬಂಕ್‌ ಯಂತ್ರೋಪಕರಣಗಳನ್ನು ತಪಾಸಣೆ ಮಾಡಿ ಪ್ರಮಾಣ ಪತ್ರ ನೀಡಲು ಚಿಕ್ಕಬಳ್ಳಾಪುರ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎಸ್. ಮಾಲಾ ಕಿರಣ್ 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳು  ಕಾರ್ಯಾಚರಣೆ ನಡೆಸಿ ಎಸ್. ಮಾಲಾ ಕಿರಣ್ ರನ್ನು ರೆಡ್ ಹ್ಯಾಂಡಾಗಿ ಟ್ರಾಪ್ ಮಾಡಿ ಬಂಧಿಸಿದ್ರು. ಚಿಕ್ಕಬಳ್ಳಾಪುರದ ಬಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಮಾಲಿಕರಾದ ಭಾಸ್ಕರ್ ರವರ

ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ ➤ ಆರೋಪಿಗಾಗಿ 7 ತಂಡಗಳಿಂದ ಶೋಧ

(ನ್ಯೂಸ್ ಕಡಬ) newskadaba.com ಮಂಗಳೂರು ,ಫೆ.8.  ಹಂಪನಕಟ್ಟೆಯಲ್ಲಿರುವ ಜುವೆಲ್ಯರಿ ಅಂಗಡಿಯೊಂದರ ಸಿಬ್ಬಂದಿ ರಾಘವೇಂದ್ರ ಆಚಾರ್ಯ (55) ಅವರನ್ನು  ಕೆಲ ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಕೊಲೆ ಮಾಡಿರುವ ಆರೋಪಿಯ ಚಹರೆ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಆತ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದರಿಂದ ಪತ್ತೆ ಹಚ್ಚುವುದು ಕಷ್ಟವಾಗಿದ್ದು, ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಇನ್ನು ಆರೋಪಿಯು ಜುವೆಲ್ಯರಿಯಿಂದ ಹೊರಗೆ ಬಂದ ಬಳಿಕ ಎರಡೆರಡು ರಿಕ್ಷಾಗಳಲ್ಲಿ ಹೋಗುವ ಮೂಲಕ

ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ ➤ ಆರೋಪಿಗಾಗಿ 7 ತಂಡಗಳಿಂದ ಶೋಧ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಅವಘಡ ಮನೆಯಲ್ಲಿ ಮಹಿಳೆ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ  ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದ ಮನೆಯೊಂದರಲ್ಲಿ ನಡೆದಿದೆ.  ಅಡುಗೆ ಮಾಡುವಾಗ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ ನಡೆದಿದೆ. ಮೇರಿ (55) ಮೃತ ಮಹಿಳೆ.  ಮೇರಿ ಅವರ ಮೈದುನನ ತಿಂಗಳ ಕಾರ್ಯ ಇತ್ತು,  ಹೀಗಾಗಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಏಕಾಏಕಿ ಗ್ಯಾಸ್ ಸ್ಟವ್‌ನಲ್ಲಿ ಬೆಂಕಿ ಪ್ರಮಾಣ ಹೆಚ್ಚಾಗಿದೆ. ಈ ವೇಳೆ ಪಕ್ಕದಲ್ಲೇ ಇಟ್ಟಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲಾ ವ್ಯಾಪಿಸಿದೆ.

ಬೆಂಕಿ ಅವಘಡ ಮನೆಯಲ್ಲಿ ಮಹಿಳೆ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ವೇತನ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಂಜಾನ್ (40) ಮತ್ತು ರಸೆಲ್ (24) ಬಂಧಿತ ವ್ಯಕ್ತಿಯಾಗಿದ್ದಾರೆ. ಕೆಲದಿನಗಳ ಹಿಂದೆ ಸೀಗೇಹಳ್ಳಿ ಹೆಚ್.ಪಿ.ಪೆಟ್ರೋಲ್ ಬಂಕ್ ಹಿಂಭಾಗದ ಕಾರ್ಮಿಕರ ಶೆಟ್ ನಲ್ಲಿ ಪಶ್ಚಿಮ ಬಂಗಾಳ ಮೂಲಕ ಎಂ.ಡಿ.ರಸೂಲ್ ಹವಾಲ್ದಾರ್ (30) ಆತ್ಮಹತ್ಯೆ ಮಾಡಿಕೊಂಡಿದ್ದ. ಆರೋಪಿಗಳು ಈ ವಿಚಾರವನ್ನು ಯಾರಿಗೂ

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟರ್ಕಿ ಹಾಗೂ ಸಿರಿಯಾದಲ್ಲಿ ನಡೆದ ಭೂಕಂಪನ ಅವಶೇಷಗಳಡಿ ಮಗುವಿಗೆ ಜನ್ಮ ನೀಡಿದ ಮಹಿಳೆ ➤ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು

(ನ್ಯೂಸ್ ಕಡಬ) newskadaba.com. ಟರ್ಕಿ, ಫೆ.8.  ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ, ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಭಾರತದಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಟರ್ಕಿ ತಲುಪಿವೆ. ಅವಶೇಷಗಳಡಿ ಇನ್ನೂ ಸಾವಿರಾರು ಜನರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಟರ್ಕಿ ಹಾಗೂ ಸಿರಿಯಾದಲ್ಲಿ ನಡೆದ ಭೂಕಂಪನ ಅವಶೇಷಗಳಡಿ ಮಗುವಿಗೆ ಜನ್ಮ ನೀಡಿದ ಮಹಿಳೆ ➤ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ಪತ್ನಿಯನ್ನು ಕೊಡಲಿಯಿಂದ ಕೊಚ್ಚಿಕೊಂದ ಪಾಪಿ ಪತಿ

(ನ್ಯೂಸ್ ಕಡಬ) newskadaba.com. ಗದಗ,  ಫೆ.7. ಪತ್ನಿಯ ನಡತೆಯ ಮೇಲೆ ಅನುಮಾನಗೊಂಡ ಪತಿ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟೆ ಗ್ರಾಮದಲ್ಲಿ ನಡೆದಿದೆ.ವಿದ್ಯಾಮೌನೇಶ್ ಆಡಿನ(24) ಕೊಲೆಯಾದ ಮಹಿಳೆ. ಮೃತ ಮಹಿಳೆಯ ಗಂಡ ಆಗಾಗ ತನ್ನ ಪತ್ನಿಯ ನಡತೆಯ ಮೇಲೆ ಅನುಮಾನ ಪಡುತ್ತಿದ್ದು, ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು, ಜಗಳ ವಿಕೋಪಕ್ಕೆ ತಿರುಗಿ ಪತಿ ಮೌನೇಶ್(29) ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ

➤ಪತ್ನಿಯನ್ನು ಕೊಡಲಿಯಿಂದ ಕೊಚ್ಚಿಕೊಂದ ಪಾಪಿ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಧಾರವಾಡ, ಫೆ.07. ನಗ್ನ  ಸ್ಥಿತಿಯಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ಪತ್ತೆಯಾಗಿರೋ ಘಟನೆ ಕೃಷಿ  ವಿವಿ ಹಾಸ್ಟೇಲ್ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ರೋಹಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿಯನ್ನು ವಿಜಯನಗರ ನಿವಾಸಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ರೋಹಿತ್ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಯಂಬತ್ತೂರು, ಫೆ. 07. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂದು ಗುರುತಿಸಲಾಗಿದೆ. ಈತ ಕೊಯಂಬತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಗೆ ಹತ್ತಿದ್ದು, ಈ ವೇಳೆ ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದು, ಆಗ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ದೇವಸ್ಥಾನ ಕಳ್ಳತನ ಮಾಡಿ ಓಡಿ ಹೋಗುವಾಗ ಅಪಘಾತದಲ್ಲಿ ಸಿಕ್ಕಿಬಿದ್ದ ಕಳ್ಳರು

(ನ್ಯೂಸ್ ಕಡಬ)newskadaba.com ಕಾರವಾರ,ಫೆ.07. ದೇವಸ್ಥಾನದಲ್ಲಿ ಕಳ್ಳತನ ಮಾಡಿ ಬಳಿಕ ತಪ್ಪಿಸಿಕೊಳ್ಳಲು ಹೋಗಿ ಅಪಘಾತವಾಗಿ ಕಳ್ಳರು  ಸಿಕ್ಕಿಬಿದ್ದಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಎಕ್ಕೆಗೋಳಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆಎಂದು ವರದಿಯಾಗಿದೆ. . ಶಿವಮೊಗ್ಗ ಮೂಲದ ಇರ್ಫಾನ್ ಹಾಗೂ ಆರೀಫ್ ಬಂಧನಕ್ಕೊಳಗಾದ ಕಳ್ಳರು. ದೇವಸ್ಥಾನದ ಬೀಗ ಮುರಿದು 55 ಸಾವಿರ ರೂ. ಹಣ ಮತ್ತು ದೇವರ ಪರಿಕರಗಳನ್ನು ಕಳ್ಳರು ಕಳ್ಳತನ ಮಾಡಿದರು . ಜನರು ಅಟ್ಟಿಸಿಕೊಂಡು ಬಂದಾಗ ತಪ್ಪಿಸಿಕೊಂಡು ಹೋಗಿದ್ದ ಕಳ್ಳರ ಬೈಕ್ ನಿಯಂತ್ರಣ

 ದೇವಸ್ಥಾನ ಕಳ್ಳತನ ಮಾಡಿ ಓಡಿ ಹೋಗುವಾಗ ಅಪಘಾತದಲ್ಲಿ ಸಿಕ್ಕಿಬಿದ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top