ಕ್ರೈಮ್ ನ್ಯೂಸ್

ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯನ್ನು ಅಂಜುಂಖಾನ್ (41) ಎಂದು ಗುರುತಿಸಲಾಗಿದೆ. ಈತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಿಂದ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.  

ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಬ್ದುಲ್ ಜಾಫರ್‌ ಸಾಬ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ  ➤  ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.06. ಸವದತ್ತಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸಂಗೀತಾ ಪರಶುರಾಮ ಲಮಾಣಿ, ಮಹಾದೇವ ಗಂಗಪ್ಪ ಮಾದರ, ಸಚಿನ್ ಗೌಡಪ್ಪ ಲಮಾಣಿ, ನಾಗೇಶ ರಾಮಪ್ಪ ಲಮಾಣಿ, ವಿಠ್ಠಲ್ ಗುರಪ್ಪ ಕಾರಬಾರಿ ಎಂದು ಗುರುತಿಸಲಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಜಾತ್ರೆಯ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆಂದು

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ  ➤  ಐವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.06. ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ನಡೆದಿದೆ. ವಿಟ್ಲ ಕಾಂತಡ್ಕ ಶಾಲೆಯ ಸಮೀಪದ‌ ನಿವಾಸಿ ರಹೀಮ್ ಶಾನ್ ಅವರ ಮನೆಯಲ್ಲಿ ಅವರ ಕುಟುಂಬದ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು.‌ ಮನೆಗೆ ಬರುವಾಗ ಸರಿ ಸುಮಾರು 12 ಗಂಟೆಯಾಗಿದೆ. ಮನೆಗ ಬಂದು ನೋಡಿದಾಗ ಹಿಂಬದಿಯ ಬಾಗಿಲು ತೆರೆದಿರುವುದು ಕಂಡು ಬಂದಿದೆ.  ಮನೆಗೆ ನುಗ್ಗಿದ ಕಳ್ಳರು ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೇನಹಳ್ಳಿ ನಿವಾಸಿ ರಮೇಶ್ (28) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ರಮೇಶ್ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುವಾಗ ಮಾರ್ಗ ಮಧ್ಯೆ ನಾಗೇನಹಳ್ಳಿ ಕ್ರಾಸ್ ಬಳಿ ಈ

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!

(ನ್ಯೂಸ್ ಕಡಬ)newskadaba.com ಘಾಜಿಯಾಬಾದ್‌, ಫೆ.06. ಹೆಂಡತಿ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ತರಕಾರಿ ವ್ಯಾಪಾರಿ, ಶವವು ಕೊಳೆತ ವಾಸನೆ ಬಾರದಂತೆ 30 ಕೆ.ಜಿ ಉಪ್ಪು ಹಾಕಿ ಶವವನ್ನು ಹೂತಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ಫಾಜಲ್ಫಾರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಂದ ನಂತರ, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತರಕಾರಿ ತೋಟದಲ್ಲಿ ಗುಂಡಿಯೊಂದನ್ನು ತೋಡಿ ಹೆಣವನ್ನು ಹೂಳಿದ್ದಾನೆ. ಶವದ ಮೇಲೆ

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಕೊಲೆ ಮಾಡಿ ಅಂಗಡಿಯಿಂದ ಚಿನ್ನಾಭರಣ ದರೋಡೆ ಮಾಡಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸ್ ತನಿಖೆಯ ವೇಳೆ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ದುಷ್ಕರ್ಮಿ ಆಟೋದಲ್ಲಿ ಪರಾರಿಯಾಗಿರುವುದು ಸೆರೆಯಾಗಿತ್ತು. ಇದೀಗ ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿ

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.06. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ವರದಿಯಾಗಿದೆ. ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ ಎನ್ನಲಾಗಿದೆ. ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು

ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಚೂರಿಯಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಾಪು, ಫೆ.06. ಚೂರಿಯಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಪಾಂಗಾಳದಲ್ಲಿ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿ ಎನ್ನಲಾಗಿದೆ. ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿ ಅವರ ಮೇಲೆ ಚೂರಿಯಿಂದ ಇರಿಯಲಾಗಿದೆ . ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಪು: ಚೂರಿಯಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ರಿಯಾದ್ ನಲ್ಲಿ ಮೃತಪಟ್ಟಿದ್ದಾರೆ. ಕೇರಳದ ತ್ರಿಶೂರ್ ಮೂಲದ ಅನಸ್ ಮತ್ತು ಶೈನಿ ಅವರ ಮಗಳು ಆಮೀನಾ ಮೃತರು ಎಂದು ತಿಳಿದುಬಂದಿದೆ. ಇವರು ರಿಯಾದ್ ನ ನೂರ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಆಮೀನಾ ಮೃತದೇಹವನ್ನು ರಿಯಾದ್ ನಲ್ಲೇ ದಹನ ಕಾರ್ಯ ನಡೆದಿದೆ ಎಂದು ವರದಿ ತಿಳಿಸಿದೆ.

ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top