ಕ್ರೈಮ್ ನ್ಯೂಸ್

ಕಾರ್ ಢಿಕ್ಕಿಯಾಗಿ ಬಂಪರ್ ನೊಳಗೆ ನಾಯಿ ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.03. ಕಾರ್​ಗೆ ಡಿಕ್ಕಿಯಾದ ನಾಯಿಯೊಂದು ಬಂಪರ್​ನೊಳಗೆ ಪತ್ತೆಯಾದ ವಿಚಿತ್ರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಡಿಕ್ಕಿಯಾದ ಬಳಿಕ ಬಂಪರ್​​ನೊಳಗೆ ಕುಳಿತ ನಾಯಿ ಸುಮಾರು 70 ಕಿಲೋ ಮೀಟರ್ ಪ್ರಯಾಣಿಸಿದೆ. ಆದ್ರೆ ಇದ್ಯಾವ ವಿಷಯ ಕಾರ್​ ಚಾಲಕನಿಗೆ ಗೊತ್ತಾಗಿಲ್ಲ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರಿಗೆ ಸೇರಿದ ಕಾರ್​​ ಬಂಪರ್​ನೊಳಗೆ ನಾಯಿ ಸೇರಿಕೊಂಡಿತ್ತು. ಸುಬ್ರಹ್ಮಣ್ಯ ಟಿ.ಎಸ್. ಕುಟುಂಬ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ […]

ಕಾರ್ ಢಿಕ್ಕಿಯಾಗಿ ಬಂಪರ್ ನೊಳಗೆ ನಾಯಿ ಪ್ರತ್ಯಕ್ಷ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ದೆಯ ಮೃತದೇಹ ಪತ್ತೆಯಾಗಿದೆ. ಸುಮಾರು 60-70 ವರ್ಷದ ಮಹಿಳೆಯ ಶವ ಇದಾಗಿದೆ ಎಂದು ಅಂದಾಜಿಸಲಾಗಿದೆ. ಸೀರೆ ಉಟ್ಟಿರುವ ಮಹಿಳೆ ಸಮುದ್ರಕ್ಕೆ ಬಿದ್ದಿರುವ ಸಂಶಯ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.  

ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ಹುಬ್ಬಳ್ಳಿ ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ ಅಂದರ್!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಫೆ.3. ನಗರದಲ್ಲಿಇಂದು  17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆರೋಪಿ ಹನುಮಂತ ಉಪ್ಪಾರ ಮೂರು ಮಕ್ಕಳ ತಂದೆಯಾಗಿದ್ದು, ಹಣದ ಆಮಿಷವೊಡ್ಡಿ ಬಾಲಕಿಯನ್ನು ಮದುವೆಯಾಗಿದ್ದಾನೆ ಎನ್ನಲಾಗಿದೆ. ಬೆಳಗಾವಿಯ ರಾಮದುರ್ಗ ತಾಲೂಕಿನ ಇಡಕಲ್ ಪಾದೆಪ್ಪ ದೇವಸ್ಥಾನದಲ್ಲಿ ವಿವಾಹ ನೆರವೇರಿದೆ. ಈ ಸಂಬಂಧ ಮಕ್ಕಳ ಕಲ್ಯಾಣ ಅಧಿಕಾರಿಯೊಬ್ಬರು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಉಪ್ಪಾರ ಅವರ ಮೊದಲ

➤ಹುಬ್ಬಳ್ಳಿ ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ ಅಂದರ್! Read More »

ಕ್ರೈಮ್ ನ್ಯೂಸ್

ಮಕ್ಕಳಿಬ್ಬರಿಗೆ ಢಿಕ್ಕಿಯಾಗಿ ನೂರಾರು ಮೀಟರ್ ಎಳೆದೊಯ್ದ ರೈಲು ➤ ಓರ್ವ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಜರ್ಮನಿ, ಫೆ.03. ಮಕ್ಕಳಿಬ್ಬರಿಗೆ ರೈಲು ಢಿಕ್ಕಿ ಹೊಡೆದು ಸುಮಾರು ನೂರಕ್ಕೂ ಹೆಚ್ಚು ಮೀಟರ್‌ವರೆಗೆ ಎಳೆದೊಯ್ದ ಹೃದಯ ವಿದ್ರಾವಕ ಘಟನೆ ಜರ್ಮನಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮಗು ಮೃತಪಟ್ಟಿದ್ದು, ಮತ್ತೊಬ್ಬ ಮಗು ಗಂಭೀರ ಗಾಯಗೊಂಡಿದೆ. ನಿಲ್ದಾಣಗಳೆರಡರ ನಡುವೆ ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲು ಮಕ್ಕಳಿಬ್ಬರಿಗೆ ಢಿಕ್ಕಿಯಾಗಿದೆ. ಆದರೆ ಮಕ್ಕಳು ಹಳಿ ಮೇಲೆ ಹೋಗಿದ್ದರೇ ಅಥವಾ ಢಿಕ್ಕಿ ಹೊಡೆಯಲು ಇತರ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಘಟನಾ ಸ್ಥಳದಲ್ಲಿ

ಮಕ್ಕಳಿಬ್ಬರಿಗೆ ಢಿಕ್ಕಿಯಾಗಿ ನೂರಾರು ಮೀಟರ್ ಎಳೆದೊಯ್ದ ರೈಲು ➤ ಓರ್ವ ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೇಕರಿ ಕೆಲಸಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು. ಫೆ.2. ಮಂಗಳೂರು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರಿನಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾತ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪೊಳಲಿ ನಿವಾಸಿ ಪುರಂದರ(50) ಎಂದು ಗುರುತಿಸಲಾಗಿದೆ. ಮೈಯೆಲ್ಲ ಸುಟ್ಟ ಪುರಂದರ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರು ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

➤ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೇಕರಿ ಕೆಲಸಗಾರ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಕುಡಿದು ಅಪ್ರಾಪ್ತ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಸಕಲೇಶಪುರ, ಫೆ.03. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಿದ್ದ ಬಾಲಕಿ ಮನೆಯಲ್ಲಿ ಪೋಷಕರು ಬೈದರೆಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಸಮೀಪ ನಡೆದಿದೆ . ಈಕೆ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು . ಶಾಲೆಗೆ ಚಕ್ಕರ್ ಹೊಡೆದು, ಬಾಲಕಿಯ ಸ್ನೇಹಿತರಾದ ಶೀಲಾ, ಭೂಮಿಕಾ ಅಜಯ್ ಎಂಬುವರ ಜೊತೆ ಹೆತ್ತೂರು ಸಮೀಪದ ಪ್ರವಾಸಿ ತಾಣಕ್ಕೆ ಬೈಕಿನಲ್ಲಿ ಹೋಗಿದ್ದಾರೆ. ಮನೆಗೆ ಬಂದಾಗ ಪೋಷಕರು ಈ ಬಗ್ಗೆ ಶಾಲೆಗೆ ಹೋಗದೆ ಪ್ರವಾಸಕ್ಕೆ ಹೋಗಿದ್ದಕ್ಕೆ ಬಾಲಕಿಗೆ ಬೈದಿದ್ದಾರೆ.

ವಿಷ ಕುಡಿದು ಅಪ್ರಾಪ್ತ ಬಾಲಕಿ ಮೃತ್ಯು Read More »

ಕ್ರೈಮ್ ನ್ಯೂಸ್

➤ ಬೆಂಗಳೂರು ಟ್ರಾಫಿಕ್ ಜಾಮ್ ಗೆ ಮಗು ಬಲಿ

(ನ್ಯೂಸ್ ಕಡಬ) newskadaba.com, ಬೆಂಗಳೂರು. ಫೆ.3. ಬೆಂಗಳೂರು ಸಿಲಿಕಾನ್ ಸಿಟಿಯ ಬಹುದೊಡ್ಡ ಸಮಸ್ಯೆಯಾಗಿರುವ ಟ್ರಾಫೀಕ್ ನಿಂದಾಗಿ 1ವರ್ಷದ ಮಗುವೊಂದು ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ಟ್ರಾಫಿಕ್ ಜಾಮ್ ನಿಂದಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಒಂದು ವರ್ಷದ ಮಗು ದುರಂತ ಸಾವಿಗೀಡಾಗಿದೆ. ಮಗುವನ್ನು ತುರ್ತು ಚಿಕಿತ್ಸೆಗೆಂದು ಹಾಸನದಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆತರಲಾಗುತ್ತಿತ್ತು. ಹಾಸನದಿಂದ ಕೇವಲ ಒಂದು ಗಂಟೆಯಲ್ಲೇ ಜೀರೋ ಟ್ರಾಫಿಕ್ ನಲ್ಲಿ ಮಗು ನೆಲಮಂಗಲ ತಲುಪಿತ್ತು. ಆದರೆ ನೆಲಮಂಗಲದಿಂದ ಗೊರಗುಂಟೆಪಾಳ್ಯ ರಸ್ತೆಯಲ್ಲಿ ಆಂಬ್ಯುಲೆನ್ಸ್

➤ ಬೆಂಗಳೂರು ಟ್ರಾಫಿಕ್ ಜಾಮ್ ಗೆ ಮಗು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಫೆ.03. ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ ಎಮದು ವರದಿ ತಿಳಿಸಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.03. ಬಿ.ಸಿ ರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎನ್ನಲಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಸುಲಿಗೆಕೋರರನ್ನು ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಮತ್ತು ಸೈಯದ್ ಅಲ್ಲಾಫ್ (19) ಎಂಬುವವರನ್ನು ಬಂಧಿಸಿ ವಿವಿಧ ಕಂಪನಿಯ ಮೂರು ಮೊಬೈಲ್ ಜಪ್ತಿ ಮಾಡಿದ್ದಾರೆ. ನಗರದ ರೇವಣಸಿದ್ದೇಶ್ವರ ಕಾಲೋನಿಯ ಶರಣಬಸಪ್ಪ ಉಪ್ಪಿನ್ ಎಂಬುವರು ರಘೋಜಿ ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಮೇಲೆ ಬಂದ ಇಬ್ಬರು ಅಪರಿಚಿತರು ಇವರ ಬಳಿ ಇದ್ದ 10

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top