ಕ್ರೈಮ್ ನ್ಯೂಸ್

ಮಹಾರಾಷ್ಟ್ರ ಸರ್ಕಾರಿ ಬಸ್‌ ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ

(ನ್ಯೂಸ್ ಕಡಬ)newskadaba.com ಲಾತೂರ್‌, ಫೆ.03. ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ಅನಾಮಿಕರು ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ ಆಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಲಾತೂರು ಬಳಿಕ ಔರಾದ ಶಹಾಜಾನಿ ನಿಲ್ದಾಣದಿಂದ ನಿಲ್ಲಿಸಲಾಗಿದ್ದ ಬಸ್ಸು ಇದ್ದಕ್ಕಿದ್ದಂತೆ ನಾಪತ್ತೆ ಆಗಿತ್ತು. ಬಳಿಕ ಈ ಬಸ್ಸು 14 ಕಿ.ಮೀ. ದೂರದ ಕರ್ನಾಟಕದ ಕೇಸರ್‌ ಜವಳಗಾ ಗ್ರಾಮದ ಬಳಿ ಪತ್ತೆ ಆಗಿದೆ. ಯಾರೋ ಅಪರಿಚಿತ ವ್ಯಕ್ತಿ ಇದನ್ನು ಚಲಾಯಿಸಿಕೊಂಡು ಬಂದು, ಜವಳಗಾ ಗ್ರಾಮದಲ್ಲಿ ನಿಲ್ಲಿಸಿ ಹೋಗಿದ್ದಾನೆ. ಯಾರು ಇದನ್ನು ಮಾಡಿದ್ದು, ಏಕೆ […]

ಮಹಾರಾಷ್ಟ್ರ ಸರ್ಕಾರಿ ಬಸ್‌ ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.03. ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಯುವತಿ ಗಾಯಗೊಂಡ ಘಟನೆ ಪೆರಿಯದಲ್ಲಿ ನಡೆದಿದೆ. ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತರು. ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ (26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ವೈಶಾಖ್ ಪೆರಿಯದ ಇಂಟರ್ ಲಾಕ್ ಸಂಸ್ಥೆ ನಡೆಸುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.03. ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮುಂಡೂರಿನಲ್ಲಿ ನಡೆದಿದೆ. ಅಶ್ರಫ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಅಶ್ರಫ್ ಗಂಭೀರವಾಗಿ ಗಾಯಗೊಂಡ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಶ್ರಫ್ ಮತ್ತು ಸ್ಥಳೀಯ ಕೆಲವರ ಜೊತೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಅಶ್ರಫ್ ಗೆ ಗಂಭೀರವಾಗಿ ಗಾಯಗೊಂಡಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.03. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿರುವುದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್ ನಿವಾಸಿಯಾದ ಮನೋಜ್ ಎಂಬವರಿಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು, ಇಡೀ ಶ್ರೀರಾಮ ಜನ್ಮಭೂಮಿ ಸಂಕೀರ್ಣವನ್ನೇ ಸ್ಫೋಟಿಸುವುದಾಗಿ ಆತ ಹೇಳಿದ್ದಾನೆಂದು ಮನೋಜ್ ದೂರು ನೀಡಿದ್ದಾರೆ ಎಂದು ತಿಳಿದ್ದಾರೆ. ರಾಮಮಂದಿರ ಸ್ಫೋಟಿಸುವುದಾಗಿ ಕರೆ ಮಾಡಿದವನು ಹೇಳಿದ್ದ ಎಂದು ಮನೋಜ್ ಅವರು ನಮಗೆ ಮಾಹಿತಿ

ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಳಗಾವಿ ಫೆ.2. ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ ಗಂಗಪ್ಪ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ. ಆಶೀಫ್ ದೇಸಾಯಿ ಎಂಬುವವನು ಪ್ರೀತಿಸಿ ಕೈಕೊಟ್ಟಿರವ ಯುವಕ. ಕಳೆದ ಎರಡು ವರ್ಷದಿಂದ ಪ್ರೀತಿಯ ನಾಟಕವಾಡುತ್ತಿದ್ದ ಆಶೀಫ್, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಈ ಹಿನ್ನೆಲೆ ಮನನೊಂದಿದ್ದ ಯುವತಿ  ಕಳೆದ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ   

(ನ್ಯೂಸ್ ಕಡಬ)newskadaba.com ಕಣ್ಣೂರ್, ಫೆ.02. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರನ್ನು ವ್ಯಾಪಿಸಿದ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರೂ ಸಜೀವ ದಹನಗೊಂಡ ಘಟನೆ ದೇವರನಾಡು ಕೇರಳದ ಕಣ್ಣೂರಿನಲ್ಲಿ ನಡೆದಿದೆ.   ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ.  ಹೀಗೆ ಕಾರಿನಲ್ಲಿ ಸಿಲುಕಿ ಸಜೀವ ದಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುವ ವೇಳೆ  ಕಾರಿನಲ್ಲಿ  ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಕಾರಿನ ಮುಂಭಾಗದ ಸೀಟಿನಲ್ಲಿ ಗರ್ಭಿಣಿ  ರೀಷಾ ಹಾಗೂ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿಂಧನೂರು, ಫೆ.02. ಸಿಂಧನೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರು ಹಾಗೂ 18 ಬೈಕ್‌ಗಳನ್ನು ವಿಶೇಷ ಪೋಲಿಸ್ ತನಿಖಾ ತಂಡ ವಶಪಡಿಸಿಕೊಂಡಿದೆ. ನಗರದಲ್ಲಿ ಬೈಕ್‌ಗಳ ಕಳ್ಳತನ ಹೆಚ್ಚಾಗಿದ್ದು ಇದರಿಂದ ಬೈಕ್‌ಗಳ ಮಾಲೀಕರು ಭಯ ಬೀತರಾಗಿದ್ಧರು ಬೈಕ್‌ಗಳ ಕಳ್ಳತನಕ್ಕೆ ಕಡಿವಾಣ ಹಾಕಲು ಡಿವೈಎಸ್ಪಿ ವೆಂಕಟಪ್ಪ ನಾಯಕ ಮಾರ್ಗ ದರ್ಶನದಲ್ಲಿ ದುರಗಪ್ಪ ಪಿ.ಐ.ನೇತೃತ್ವದಲ್ಲಿ ಸಿಬ್ಬಂದಿಗಳಾದ ಆದಯ್ಯ ಸಂಗನಗೌಡ, ರಾಮಪ್ಪ, ಅನಿಲ ಕುಮಾರ, ವಿಜಯಕುಮಾರ, ಸಿದ್ದಪ್ಪ, ಭಾಷಾ, ಆನಂದ ಕುಮಾರ ಅಜೀಮ ಪಾಷಾ,

ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬಟ್ಟೆ ತೊಳೆಯಲು ಕಾಲುವೆಗಿಳಿದ ಇಬ್ಬರು ಜಲಸಮಾಧಿ

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.02. ಕೃಷ್ಣಾ ಮೇಲ್ದಂಡೆ ಯೋಜನೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಓರ್ವ ಬಾಲಕ ಸೇರಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ರಸೂಲ್ ಮಾಲದಾರ (26) ಹಾಗೂ ಸಮೀವುಲ್ಲಾ ಗೊಳಸಂಗಿ (10) ಮೃತ ದುರ್ದೈವಿಗಳು. ಮುದ್ದೇಬಿಹಾಳ ಪಟ್ಟಣದ ಚಿಕನ್‌ ಸೆಂಟರ್‌ವೊಂದರಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಬಟ್ಟೆ ತೊಳೆಯಲೆಂದು ಹಡಗಲೇರಿ ಬಳಿಯ ನಾಲೆಗೆ ಹೋಗಿದ್ದರು. ಇದು ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಯಾಗಿದ್ದು, ನೀರು ತುಂಬಿ ಹರಿಯುತ್ತಿತ್ತು. ಬಟ್ಟೆ

ಬಟ್ಟೆ ತೊಳೆಯಲು ಕಾಲುವೆಗಿಳಿದ ಇಬ್ಬರು ಜಲಸಮಾಧಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.02. ಪೆರ್ಲ ಸಮೀಪದ ಏಳ್ಕಾನ ಶೇಣಿ ಎಂಬಲ್ಲಿ ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ವಯನಾಡ್ ಮೂಲದ ಆಂಟೋ ಸೆಬಾಸ್ಟಿಯನ್ ಎಂಬಾತ ನಾಪತ್ತೆಯಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಒಂದೂವರೆ ತಿಂಗಳ ಹಿಂದೆ ಈ ದಂಪತಿ ರಬ್ಬರ್ ಟ್ಯಾಪಿಂಗ್ ವೃತ್ತಿಗಾಗಿ ಆಗಮಿಸಿದ್ದರು. ಇವರು ವಾಸಿಸುತ್ತಿದ್ದ ಮನೆ ಸಮೀಪದ ಶೆಡ್ ನಲ್ಲಿ ಇತರ ಕಾರ್ಮಿಕರಾದ ವೆಳ್ಳರಿಕುಂಡುವಿನ ರಿಜೋ ಹಾಗೂ ಪಶ್ಚಿಮ

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..!

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.02. ಕುಖ್ಯಾತ ಮನೆಗಳ್ಳರ ತಂಡವನ್ನು ಬಂಧಿಸುವಲ್ಲಿ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲಿಗೆ ಪೊಲೀಸರು ಆರೋಪಿಗಳನ್ನು ಒಂದು ಪ್ರಕರಣದಲ್ಲಿ ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ತಮ್ಮ ಹಳೆಯ ಪ್ರಕರಣಗಳನ್ನು ಬಾಯಿ ಬಿಟ್ಟಿದ್ದಾರೆ. ವಿಚಾರಣೆ ವೇಳೆ ಬರೋಬ್ಬರಿ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲಿಗೆ ಒಂಟಿ ಮನೆಗಳನ್ನು ಸರ್ವೇ ಮಾಡುತ್ತಿದ್ದ ಈ ಗ್ಯಾಂಗ್ ಸಂಚು ಹಾಕಿ ಕಳ್ಳತನ ಮಾಡಿತ್ತು. ಮಹಾರಾಷ್ಟ್ರದ ಥಾಣಾ ಮೂಲದ ಗ್ಯಾಂಗ್ ಇದಾಗಿದ್ದು, ಕಳ್ಳತನ ಮಾಡಲು ತಂಡದ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top