ಕ್ರೈಮ್ ನ್ಯೂಸ್

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಕಿರುಕುಳ ಆರೋಪ ➤ ವೈದ್ಯೆ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ನೊಂದು ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿರುವುದು ವರದಿಯಾಗಿದೆ. ಉತ್ತರ ಪ್ರದೇಶ ಲಕ್ನೋ ಮೂಲದ ಡಾ.ಪ್ರಿಯಾಂಶಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ ಎಂದು ತಿಳಿದುಬಂದಿದೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಈ ಬಗ್ಗೆ ಮೃತರ ತಂದೆ ಸುಶೀಲ್ ತ್ರಿಪಾಠಿ ಪೊಲೀಸ್ ದೂರು ನೀಡಿದ್ದಾರೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ಸುಮಿತ್ ಎಂಬಾತ ಪ್ರಿಯಾಂಶಿಗೆ ಪ್ರೇಮ ನಿವೇದನೆ ಮಾಡುತ್ತಿದ್ದು, […]

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಕಿರುಕುಳ ಆರೋಪ ➤ ವೈದ್ಯೆ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಹತ್ತು ಜನರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.02. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಹತ್ತು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ಬಳಿ ನಡೆದ ಘಟನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ನಲ್ಲಿ ಕಾರುಗಳು ಡಿಕ್ಕಿ ರಭಸಕ್ಕೆ ಎರಡು ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ ಈಗ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಹತ್ತು ಜನರಿಗೆ ಗಂಭೀರ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.02. ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ಶರಣಪ್ಪ ಭಂಡಾರಿಯವರು ಖಚಿತ ಮಾಹಿತಿ ಮೇರೆಗೆ ಕೇರಳ-ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕಡಪುರಂ ,ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್‌ ಎಮ್(25) ಉದ್ಯಾವರ ,ಮಾಡ ನಿವಾಸಿ ಹೈದರ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೂಲ್ಕಿ, ಫೆ.02. ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ನಡೆದಿದೆ. ಮಧ್ಯ ಪ್ರದೇಶದ ಬಬುಲು (23) ಅಚಲ್ ಸಿಂಗ್ (30) ಮೃತ ದುರ್ದೈವಿಗಳು. ಕೇರಳ ನಿವಾಸಿ ಅನಿಶ್ (42) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಲಾರಿಯ ಚಕ್ರ ಪಂಕ್ಚರ್ ಆಗಿ ಪಡುಪಣಂಬೂರು ಹೆದ್ದಾರಿ ಬಳಿ ಕೆಟ್ಟು

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.01-ಟ್ರಾಕ್ಟರ್ ಪಲ್ಟಿಯಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಾಳಗಿ ತಾಲ್ಲೂಕಿನ ದೇವಿಕಲ್ ತಾಂಡಾ ಹತ್ತಿರ ನಿನ್ನೆ ನಡೆದಿದೆ. ಗೋವರ್ಧನ (22) ಮೃತಪಟ್ಟ ದುರ್ದೈವಿ. ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಕುಳಿತ್ತಿದ್ದ ಈತ ಟ್ರ್ಯಾಕ್ಟರ್ ಪಲ್ಟಿಯಾದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ   ➤ ತಾಯಿ‌- ಮಗಳು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ಕಾಂಕ್ರೀಟ್ ಲಾರಿ ನಿಯಂತ್ರಣ ತಪ್ಪಿ ಕಾರಿ‌ನ‌ ಮೇಲೆ ಪಲ್ಟಿಯಾದ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ ಸಮೀಪದ ಬ್ಯಾಲ ಮರದದೊಡ್ಡಿ ಬಳಿ ನಡೆದಿದೆ. ಗಾಯತ್ರಿಕುಮಾರ್ (47) ಸಮತಾ (16)ಮೃತರು.‌ಗಾಯತ್ರಿ ತಮ್ಮ ಮಗಳನ್ನು ಬನ್ನೇರುಘಟ್ಟ ಸಮೀಪದ ಬಸವನಪುರ ಬಳಿ ಇರುವ ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಲಾರಿಯು ತಿರುವಿನಲ್ಲಿ ಅತಿವೇಗವಾಗಿ ಬಂದು ನಿಯಂತ್ರಣ ತಪ್ಪಿ ಕಾರಿನ‌ ಮೇಲೆ ಬಿದ್ದಿದೆ. ಲಾರಿ

ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ   ➤ ತಾಯಿ‌- ಮಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಅಪಘಾತ   ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.02.  ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ನಡೆದಿದೆ. ಅಪಘಾತದಿಂದಾಗಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಪುತ್ತೂರು ದ್ವಾರಕ ಕನ್ ಸ್ಟ್ರಕ್ಷನ್ ನ ಶರಣ್ ಎಂಬವರು ಸೈಟ್ ಇನ್ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ.ದೇವಿಪ್ರಸಾದ್

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಅಪಘಾತ   ➤ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಪ್ರಕರಣ    ➤ ಬಂಧಿತ ವೈದ್ಯರು & ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.02. ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ. ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ

ಮಂಗಳೂರು: ಗಾಂಜಾ ದಂಧೆ ಪ್ರಕರಣ    ➤ ಬಂಧಿತ ವೈದ್ಯರು & ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.02. ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿ.ಸಿ ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ

ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

(ನ್ಯೂಸ್ ಕಡಬ) newskadaba.com,ಬೆಂಗಳೂರು. ಫೆ.1. ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರಿಸ್  ಎಲ್, ವ್ಯವಸ್ಥಾಪಕ ನಿರ್ದೇಶಕ ಬಿಬಿಎಂಪಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top