ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಅಮಾನುಷ ಹಲ್ಲೆ ಹಾಗೂ ಹತ್ಯೆ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಸಮಾಜದ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾದ ಅಕ್ಬರ್ ಅಲಿ ಪೊನ್ನೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. […]

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ

(ನ್ಯೂಸ್ ಕಡಬ) newskadaba.com ಜು. 16. ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ನಡೆದಿದೆ. ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!!

(ನ್ಯೂಸ್ ಕಡಬ) newskadaba.com ಜು. 15. 7ನೇ ತರಗತಿಯ 13 ವರ್ಷದ ವಿದ್ಯಾರ್ಥಿಯೊಬ್ಬ ಮನೆಯ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಸಂದ್ರ ನಿವಾಸಿಯಾದ ಈ ಬಾಲಕ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮಂಗಳವಾರದಂದು ಸಂಜೆ ಶಾಲೆಯಿಂದ ಮರಳಿದ ವಿದ್ಯಾರ್ಥಿ, ಮನೆಯ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಆತನನ್ನು ನಾಯಂಡನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಿಕ್ಸರ್ ತಿನ್ನುವಾಗ ಕಡಲೆಕಾಯಿ ಗಂಟಲಿಗೆ ಸಿಲುಕಿ ಮೂರು ವರ್ಷದ ಮಗು ಮೃತ್ಯು!!

(ನ್ಯೂಸ್ ಕಡಬ) newskadaba.com ಜು. 15. ಮನೆಯಲ್ಲಿ ಮಿಕ್ಸರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ನಡೆದಿದೆ. ಬಾಲಕ ಮಿಕ್ಸರ್ ತಿನ್ನುತ್ತಿದ್ದಾಗ ಆಕಸ್ಮಿಕವಾಗಿ ಕಡಲೆಕಾಯಿ ಗಂಟಲಿಗೆ ಸಿಲುಕಿದ್ದು, ತಕ್ಷಣವೇ ಆತನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್

ಮಿಕ್ಸರ್ ತಿನ್ನುವಾಗ ಕಡಲೆಕಾಯಿ ಗಂಟಲಿಗೆ ಸಿಲುಕಿ ಮೂರು ವರ್ಷದ ಮಗು ಮೃತ್ಯು!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೋಟಗಳಿಗೆ ನಿರಂತರ ಕಾಡಾನೆಗಳ ದಾಳಿ – ರೈತರು ಹೈರಾಣು

(ನ್ಯೂಸ್ ಕಡಬ) newskadaba.com ಜು. 15. ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ರೈತರ ತೋಟಗಳಿಗೆ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರಿದಿದ್ದು, ಜುಲೈ 13ರಂದು ತಡರಾತ್ರಿ ವ್ಯಾಪಕ ಪ್ರಮಾಣದ ಕೃಷಿ ನಾಶ ಸಂಭವಿಸಿದೆ. ಗ್ರಾಮದ ಗುಂಡ್ಲ ನಿವಾಸಿಗಳಾದ ರವೀಂದ್ರ ಕೇಪಣ್ಣ ಮತ್ತು ಅವರ ಕಿರಿಯ ಸಹೋದರ ಸುಬ್ಬಪ್ಪ ಎಂಬವರ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು, ಅಲ್ಲಿ ಬೆಳೆದಿದ್ದ ಬಾಳೆ ಹಾಗೂ ಅಡಿಕೆ ಮರಗಳು ಸೇರಿದಂತೆ ಇನ್ನಿತರ ಪ್ರಮುಖ ಬೆಳೆಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆ. ಸುಳ್ಯ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ

ತೋಟಗಳಿಗೆ ನಿರಂತರ ಕಾಡಾನೆಗಳ ದಾಳಿ – ರೈತರು ಹೈರಾಣು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗನವಾಡಿಯಲ್ಲಿ ಆಟದ ವೇಳೆ ಅನಾಹುತ – ಬಾಲಕಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜು. 15. ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯೋರ್ವಳಿಗೆ ಹಾವು ಕಚ್ಚಿದ ಘಟನೆ ಬೆಳ್ತಂಗಡಿಯ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ವರದಿಯ ಪ್ರಕಾರ, ಫಾತಿಮತ್ ಸ’ಅದಿಯಾ ಎಂಬ ಬಾಲಕಿಯೋರ್ವಳು ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ, ಕೊಠಡಿಯಲ್ಲಿದ್ದ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ. ತಕ್ಷಣ ಬಾಲಕಿ ಜೋರಾಗಿ ಕೂಗಲಾರಂಭಿಸಿದ್ದು, ಬಾಲಕಿಯನ್ನು ತಕ್ಷಣ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ಒಳಪಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ

ಅಂಗನವಾಡಿಯಲ್ಲಿ ಆಟದ ವೇಳೆ ಅನಾಹುತ – ಬಾಲಕಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನೇಣುಬಿಗಿದು ಯುವಕ ಆತ್ಮಹತ್ಯೆ!!

(ನ್ಯೂಸ್ ಕಡಬ) newsksdaba.com ಉಪ್ಪಿನಂಗಡಿ, ಜು. 15. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪೆರಿಯಡ್ಕದ ಬೊಳ್ಳಾವು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಯೋಗೀಶ್ ಯಾನೆ ಸಂಕೇತ್ ಎಂದು ಗುರುತಿಸಲಾಗಿದೆ. ಕೂಲಿಕಾರ್ಮಿಕನಾಗಿದ್ದ ಈತ ಜುಲೈ 13ರಂದು ರಾತ್ರಿ ವೇಳೆ ಮನೆಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದು, ವಿಷಯ ತಿಳಿದ ಮನೆಯವರು ತಕ್ಷಣವೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆಸ್ಪತ್ರೆ ತಲುಪುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ

ಉಪ್ಪಿನಂಗಡಿ: ನೇಣುಬಿಗಿದು ಯುವಕ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ನಕಲಿ ನೋಟಿಸ್ ನಂಬಿ ಎಪಿಕೆ ಆಪ್ ಡೌನ್ ಲೋಡ್ ಕಾರ್ಕಳದ ವ್ಯಕ್ತಿಯ 6.83 ಲಕ್ಷ ಸೈಬರ್ ಖದೀಮರ ಪಾಲು!

(ನ್ಯೂಸ್ ಕಡಬ) newskadaba.com ಜು. 15. ಮೊಬೈಲ್‌ ಗೆ ಬಂದ ಸಂಚಾರ ನಿಯಮ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ನಂಬಿ ಆಪ್ ಡೌನ್‌ಲೋಡ್ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ ₹6,83,599 ಹಣ ಕಳೆದುಕೊಂಡಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ ಉಡುಪಿ ಜಿಲ್ಲೆಯ ಕಾರ್ಕಳದ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ಅಜೆಕಾರು ನಿವಾಸಿ ರತ್ನಾಕರ ಅಮೀನ್ ಎಂಬವರ ವಾಟ್ಸಾಪ್‌’ಗೆ ಜುಲೈ 5 ರಂದು ‘ಪರಿವಾಹನ್’ ಹೆಸರಿನ ಖಾತೆಯಿಂದ ಸಂದೇಶ ಬಂದಿತ್ತು. ಅದರಲ್ಲಿ

ನಕಲಿ ನೋಟಿಸ್ ನಂಬಿ ಎಪಿಕೆ ಆಪ್ ಡೌನ್ ಲೋಡ್ ಕಾರ್ಕಳದ ವ್ಯಕ್ತಿಯ 6.83 ಲಕ್ಷ ಸೈಬರ್ ಖದೀಮರ ಪಾಲು! Read More »

ಕರಾವಳಿ, ಕ್ರೈಮ್ ನ್ಯೂಸ್

14 ವರ್ಷಗಳ ಬಳಿಕ ಒಂದೇ ಕುಟುಂಬದ ಮೇಲೆ ಮತ್ತೊಮ್ಮೆ ಆನೆ ದಾಳಿ!!

(ನ್ಯೂಸ್ ಕಡಬ) newskadaba.com ಜು. 15. ಹಾವಿನ ದ್ವೇಷ ಹನ್ನೆರಡು ವರ್ಷ ಎನ್ನುವ ಗಾದೆಯ ನಡುವೆ, ಆನೆಯೊಂದು ತನ್ನ ಹಳೆಯ ಹಗೆಯನ್ನು ಮರೆಯದೆ ಬರೋಬ್ಬರಿ 14 ವರ್ಷಗಳ ಬಳಿಕ ಕುಟುಂಬವೊಂದನ್ನು ಹುಡುಕಿಕೊಂಡು ಬಂದು ದಾಳಿ ನಡೆಸಿರುವ ದಿಗಿಲು ಹುಟ್ಟಿಸುವ ಘಟನೆ ನೇಪಾಳದಲ್ಲಿ ನಡೆದಿದೆ. ಒಂದೇ ಕುಟುಂಬದ ನಾಲ್ವರನ್ನು ಈ ಕಾಡಾನೆ ಬಲಿ ಪಡೆದಿದೆ. ಘಟನೆಯ ಹಿನ್ನೆಲೆ: ನೇಪಾಳದ ಚಿತ್ವನ್ ರಾಷ್ಟ್ರೀಯ ಉದ್ಯಾನವನದ ಸಮೀಪದ ಮಡಿ ಪಟ್ಟಣದಲ್ಲಿ ಶನಿಚರ ಬೋಟೆ ಎಂಬುವವರ ಕುಟುಂಬ ವಾಸವಾಗಿತ್ತು. ಡಿಸೆಂಬರ್ 2012 ರಲ್ಲಿ

14 ವರ್ಷಗಳ ಬಳಿಕ ಒಂದೇ ಕುಟುಂಬದ ಮೇಲೆ ಮತ್ತೊಮ್ಮೆ ಆನೆ ದಾಳಿ!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 14. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ನೆಪದಲ್ಲಿ ಅವರೊಂದಿಗೆ ಬಾಂಗ್ಲಾದೇಶದ ಪ್ರಜೆಗಳನ್ನೂ ಮಂಗಳೂರಿಗೆ ಅಕ್ರಮವಾಗಿ ಕರೆತಂದ ಆರೋಪದಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಎಂದು ಗುರುತಿಸಲಾಗಿದೆ.   ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸುಲ್ ಇಸ್ಲಾಂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top