ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು […]

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜಾರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ ಬಂಧನಕ್ಕೆ ರಾಜ್ಯ ಪೊಲೀಸರ ವಿಶೇಷ ತಂಡವೊಂದು ಕಾರ್ಯಾಚರಣೆ ನಡೆಸಿ, ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸ್ಯಾಂಟ್ರೋ ರವಿಯ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿತ್ತು. ಬಳಿಕ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.  

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ ➤ ‘ಮಠ’ ಖ್ಯಾತಿಯ ಗುರುಪ್ರಸಾದ್ ಅಂದರ್!

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 13.  ನಿರ್ದೇಶಕ ಗುರುಪ್ರಸಾದ್​ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದೆ. ವಂಚನೆ ಹಾಗು ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ಚೆಕ್ ಬೌನ್ಸ್ ಪ್ರಕರಣ ➤ ‘ಮಠ’ ಖ್ಯಾತಿಯ ಗುರುಪ್ರಸಾದ್ ಅಂದರ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.13. ಕರ್ನಾಟಕದ ಗಡಿಯಿಂದ ಸುಮಾರು ಐದು ಕಿ.ಮೀ. ದೂರದಲ್ಲಿರುವ ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಕಾಟು ಕುಕ್ಕೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಇಲ್ಲಿರುವ ಫಾರ್ಮ್‌ಗಳಲ್ಲಿ 200ಕ್ಕೂ ಅಧಿಕ ಸೋಂಕು ಬಾಧಿತ ಹಂದಿಗಳು ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಸುಮಾರು 500 ಕ್ಕೂ ಹೆಚ್ಚು  ಹಂದಿಗಳ ಮಾರಾಣ ಹೋಮ ಮಾಡಲಾಗುತ್ತಿದೆ. ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ

(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಅಪ್ಪನಿಗೆ ಚಾಕು ತೋರಿಸಿ, ಹೆದರಿಸಿ ಮಗ 1.14 ಕೋಟಿ ರೂಪಾಯಿ ಪೀಕಿದ ಘಟನೆ ಬಾಂದ್ರಾದಲ್ಲಿ ವರದಿಯಾಗಿದೆ. ಬಾಂದ್ರಾದ ಪಾರಿಜತ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ರಾಹುಲ್ ದೌಂಡ್ಕರ್(24) ಎಂಬಾತ ತನ್ನ ಪೋಷಕರಿಗೆ ಬೆದರಿಕೆ ಹಾಕಿ 1 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ್ದಾನೆ. 66 ವರ್ಷದ ಮಾರುತಿ ದೌಂಡ್ಕರ್ ಎಂಬವರು ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೋಷಕರ ದೂರಿನ ಮೇರೆಗೆ ಮುಂಬೈ ಪೊಲೀಸರು ರಾಹುಲ್ನನ್ನು ಬಂಧಿಸಿದ್ದಾರೆ. ಆರೋಪಿಗೆ ಪೊಲೀಸರು

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್         

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ್ ಕುಮಾರ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಈತ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಗಾಂಜಾ ಸಾಗಾಟಕ್ಕೆ

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13.  ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮತ್ತು ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸರಪಾಡಿ ಗ್ರಾಮದ ವಚ್ಚಾರ್ ನಿವಾಸಿಯಾಗಿರುವ ರಾಜೀವ ಹಾಗೂ ಅವರ ಮಗ ಸಂತೋಷ್ ಅಂಚರ್ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್       

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13 ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ​ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಎಂಬ ವ್ಯಕ್ತಿಗೆ ಗುರು ಪ್ರಸಾದ್ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗದ ಮಠ ಚಿತ್ರದ ನಿರ್ದೇಶಕರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ವಾರಂಟ್ ಪಡೆದ ಗಿರಿನಗರ ಪೊಲೀಸರು ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರು ಪ್ರಸಾದ್ ಅವರನ್ನು

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಕ್ಟರ್ ಮಗುಚಿ ಚಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.13. ಟ್ರಾಕ್ಟರೊಂದು ಮಗುಚಿ ಬಿದ್ದ ಪರಿಣಾಮ ಚಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಚಾಲಕನನ್ನು ನೇಪಾಳದ ರುನ್ಕಾವ್ ನಿವಾಸಿ ಸುರೇಶ್ ಪೊನ್ ಎಂದು ಗುರುತಿಸಲಾಗಿದೆ.   ಕಾಸರಗೋಡಿನ ಪೈವಳಿಕೆ- ಚೇವಾರ್ ರಸ್ತೆಯಲ್ಲಿರುವ ಕಟ್ಟದಮನೆ ಸೇತುವೆ ಬಳಿ ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಟ್ರ್ಯಾಕ್ಚರ್ ಮಗುಚಿ ಬಿದ್ದಾಗ ಸುರೇಶ್ ಅವರು ಅದರಡೆಯಲ್ಲಿ ಸಿಲುಕಿದ್ದು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಈತ

ಟ್ರಾಕ್ಟರ್ ಮಗುಚಿ ಚಾಲಕ ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top