ಕ್ರೈಮ್ ನ್ಯೂಸ್

crime, arrest, suspected

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ […]

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಾಲೂರು, ಜ.12.  ನೀರಿನ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಾಲೂರಿನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಲಕ್ಕೂರು ಗ್ರಾಮದ ಜಾವೀದ್ (23) ಎಂದು ಗುರುತಿಸಲಾಗಿದೆ. ಕುಡಿತದ ದಾಸನಾಗಿದ್ದ ಈತನನ್ನು  ನಾಲ್ಕು ತಿಂಗಳ ಹಿಂದೆ ಚಟದಿಂದ ಬಿಡಿಸಲು ನವಚೈತನ್ಯ ಫೌಂಡೇಶನ್ ಗೆ ಪೋಷಕರು ಸೇರಿಸಿದ್ದರು ಎಂದಿ ತಿಳಿದುಬಂದಿದೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 12. ಅಡುಗೆ ಸಿಲಿಂಡರ್ ಸೋರಿಕೆಯಾದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟ ಭೀಕರ ಘಟನೆ ಚಂಡೀಗಢದ ಪಾಣಿಪತ್‌ನಲ್ಲಿ ವರದಿಯಾಗಿದೆ. ಮೃತರನ್ನು ಅಬ್ದುಲ್ (45), ಅವರ ಪತ್ನಿ(40) ಮತ್ತು 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಹಾಗೂ 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ. ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ದುರ್ಘಟನೆ  ಸಂಭವಿಸಿದೆ ಎನ್ನಲಾಗಿದೆ.

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಗರದಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶೀಯ ಹಾಗೂ ವಿದೇಶಿ ಪಕ್ಷಿ ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ. ಸಾಕು ಪ್ರಾಣಿಗಳ ಮಾರಾಟಗಾರರಿಗೆ ಕಡ್ಡಾಯವಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ನಗರದ ಬಹುತೇಕ ಸಾಕು ಪ್ರಾಣಿ ಮಾರಾಟಗಾರರು ನೋಂದಣಿ ಮಾಡಿಕೊಂಡಿಲ್ಲ. ಈ ಬಗ್ಗೆ ಸಾಕಷ್ಟು ಸಂಸ್ಥೆಗಳು ಪಶುಸಂಗೋಪನೆ ಇಲಾಖೆ ಹಾಗೂ ಬಿಬಿಎಂಪಿ ಪಶುಪಾಲನಾ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪಶುಪಾಲನಾ ವಿಭಾಗ, ಪಶುಸಂಗೋಪನೆ

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಪೇದೆಯನ್ನು ಹೆಗಡೆ ನಗರದ ನಿವಾಸಿ ನವೀನ್‌ ಕುಮಾರ್‌ (25) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರ ಮನೆ ಮುಂದೆ ಎಡಗೈ ಕುಯ್ದುಕೊಂಡು ನಿತ್ರಾಣನಾಗಿ ನವೀನ್‌ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದರು ಎನ್ನಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಕಾನ್‌ಸ್ಟೇಬಲ್‌

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ ಯಾದಗಿರಿಯ ಶ್ರೀಗಳು ವಿಧಿವಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಜ. 12.  ಹಿರೇಮಠದ  ಪೀಠಾಧಿಪತಿ  ಷ. ಬ್ರ. ಶ್ರೀ  ವೀರಮಹಾಂತ ಶಿವಾಚಾರ್ಯರು (48) ತೀವ್ರ ಹೃದಯಘಾತದಿಂದ ಲಿಂಗೈಕ್ಯರಾಗಿದ್ದಾರೆ ಎನ್ನಲಾಗಿದೆ.   ಶ್ರೀಗಳಿಗೆ ಬೆಂಗಳೂರು ರೈಲು ನಿಲ್ದಾಣದಲ್ಲಿ ತೀವ್ರ ಹೃದಯಾಘಾತ ಆದಾಗ, ಅವರಿಗೆ ನೀಡಿದ ಪ್ರಾಥಮಿಕ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.  25ನೇ ವರ್ಷದ  ಪಟ್ಟಾಧಿಕಾರ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಗಣ್ಯರಿಗೆ ಆಹ್ವಾನ ನೀಡಲು ಶ್ರೀಗಳು ಬೆಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿ  ಬಿ. ವೈ. ವಿಜಯೇಂದ್ರ ಸೇರಿದಂತೆ ಮತ್ತಿತರ

ಹೃದಯಾಘಾತದಿಂದ ಯಾದಗಿರಿಯ ಶ್ರೀಗಳು ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಸ್ಕತ್, ಜ.12. ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಮಸ್ಕತ್ ನಲ್ಲಿ ವರದಿಯಾಗಿದೆ. ಕೇರಳ ಮೂಲದ ಯುವಕ ಮೃತಪಟ್ಟವರು ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತಗೊಂಡು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಬ್ಯಾಡ್ಮಿಂಟನ್ ಆಟದ ವೇಳೆ‌ ನಡೆದ ಹೃದಯಾಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.  

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ತಾಯಿ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಎಫ್‌ಐಆರ್‌ನಲ್ಲಿ ನಾಗಾರ್ಜುನ ಕಂಪನಿ ಸೇರಿ ಒಟ್ಟು 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆಗೆ ಹಾಜರಾಗುವಂತೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ಮತ್ತು ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ)ಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ನಾಗಾರ್ಜುನ ಕಂಪನಿ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಪ್ರತ್ಯೇಕ ಘಟನೆಗಳಿಂದಾಗಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಕಾನೂನು ವಿದ್ಯಾರ್ಥಿ ರಿಜ್ವಾನ್ (25) ಮತ್ತು ಡಿಫಾರ್ಮಸಿ ವಿದ್ಯಾರ್ಥಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ರಿಜ್ವಾನ್ ಕೆ.ಜಿ.ಹಳ್ಳಿಯ ಪಿ ಮತ್ತು ಟಿ ಕಾಲೋನಿ ನಿವಾಸಿಯಾಗಿದ್ದರೆ, ಶ್ರೀನಾಥ್ ಕೋಲಾರದ ಶ್ರೀನಿವಾಸಪುರದವರಾಗಿದ್ದು, ಕೆಆರ್ ಪುರಂನ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿದ್ದರೆಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದೆ ರಿಜ್ವಾನ್ ಮದುವೆಯಾಗಿತ್ತು ಎನ್ನಲಾಗಿದೆ. ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top