ಕ್ರೈಮ್ ನ್ಯೂಸ್

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು  

(ನ್ಯೂಸ್ ಕಡಬ) newskadaba.com  ಹಾಸನ, ಜ.11. ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ವಾಸದ ಮನೆಯ ಹೊರಗೆ ಮತ್ತು ಒಳಗೆ ಇದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳು ಕೆಲವೇ ನಿಮಿಷಗಳ ಅಂತರದಲ್ಲಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿದೆ. ಮನೆಯಲ್ಲಿ ಮೂವರು ವಾಸವಾಗಿದ್ದು ಅದೃಷ್ಟವಶಾತ್‌ ಕೂದಲೆಳೆ […]

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಯುವ ದೇಹದಾರ್ಢ್ಯಪಟುವೊಬ್ಬರ ಮೃತದೇಹವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಬಳಿಯ ಹೀರಂಡಹಳ್ಳಿ ಬಳಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಾನೂ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ             

(ನ್ಯೂಸ್ ಕಡಬ) newskadaba.com  ವಿಜಯನಗರ, ಜ.11. ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಅಸ್ವಸ್ಥರಾದ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ಮೃತರನ್ನು ನಗರದ ರಾಣಿಪೇಟೆಯ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ನೀರು ಕಲುಷಿತಗೊಂಡಿದೆ ಅಂತ ಸ್ಥಳೀಯರು ಹೇಳಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆಂದು ತಿಳಿದು ಬಂದಿದೆ.  ಕಲುಷಿತ ನೀರು ಸೇವಿಸಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!!

(ನ್ಯೂಸ್ ಕಡಬ) newskadaba.com ಜಮ್ಮು-ಕಾಶ್ಮೀರ ದಾವಣಗೆರೆ, ಜ. 11.  ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಿಮದಿಂದ ಆವೃತವಾದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾರತೀಯ ಸೇನೆಯ ಜೆಸಿಒ ಮತ್ತು ಇತರ ಇಬ್ಬರು ರ್ಯಾಂಕ್ ದರ್ಜೆಯ ಸೈನಿಕರು ಮಚ್ಚಿಲ್ ಸೆಕ್ಟರ್‌ನಲ್ಲಿ ಬುಧವಾರ ನಸುಕಿನ ಜಾವ ಗಸ್ತು ತಿರುಗುತ್ತಿದ್ದಾಗ ಕಮರಿಗೆ ಆಕಸ್ಮಿಕವಾಗಿ ಬಿದ್ದು ಈ ದುರ್ಘಟನೆ

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!           

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜ.11. ಯುವಕನೊರ್ವನ ಮೃತದೇಹ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿದ ಪಾಪಿಗಳು..!!

(ನ್ಯೂಸ್ ಕಡಬ) newskadaba.com ಮಂಡ್ಯ, ಜ.10. ಒಬ್ಬಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ಹಾಸಿಗೆಯಲ್ಲಿ ಮಲಗಿಸಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯ ಗ್ರಾಮದ ಬಳಿ ವರದಿಯಾಗಿದೆ. ಮೃತರನ್ನು ಪ್ರೇಮ(42) ಎಂದು ಗುರುತಿಸಲಾಗಿದೆ. ಮೃತ ಪ್ರೇಮರ ದೇಹವು ಸಂಪೂರ್ಣ ಸುಟ್ಟು ಹೋಗಿದ್ದು ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ನಿಧನದ ಬಳಿಕ ಒಂಟಿಯಾಗಿದ್ದ ಪ್ರೇಮ ಅವರ ಓರ್ವ ಪುತ್ರನೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ.

ಒಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿದ ಪಾಪಿಗಳು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..! 

(ನ್ಯೂಸ್ ಕಡಬ)newskadaba.com  ಜಮ್ಮು ಕಾಶ್ಮೀರ, ಜ.09. ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಏಳು ಮಂದಿ ಮೃತಪಟ್ಟು,  14 ಮಂದಿ ಗಾಯಗೊಂಡಿದ್ದರು. ಈ ದಾಳಿ ನಡೆದ ಸ್ಥಳೀಯ ಸ್ವಯಂ ಸೇವಕರನ್ನೊಳಗೊಂಡ ಹಳ್ಳಿಯ ರಕ್ಷಣಾ ಗಾರ್ಡ್ ನ್ನು ಆಡಳಿತ ಬಲಗೊಳಿಸಿತ್ತು. ಸಂಭಾವ್ಯ  ಒಳನುಸುಳುವಿಕೆ ಮಾರ್ಗಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು ಎಂದು ಅಧಿಕಾರಿಗಳು

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ನಿಧನ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10.  ಹಿರಿಯ ಸಾಹಿತಿ , ಲೇಖಕಿ ಡಾ.ಸಾರಾ ಅಬೂಬಕ್ಕರ್ ಅವರು ಮಂಗಳವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ವರದಿಯಾಗಿದೆ. ಇವರಿಗೆ (87) ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗದವರನ್ನು ಆಗಲಿದ್ದಾರೆ. ಮುಲತಃ ಕಾಸರಗೋಡಿನ ಚಂದ್ರಗಿರಿ ತೀರವರಾದ ಸಾರಾ ಅಬೂಬಕ್ಕರ್ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಪ್ರಸಿದ್ದ ಹೊಂದಿದ ಸಾರಾ ಅಬೂಬಕ್ಕರ್ ಅನೇಕ ಕೃತಿಗಳನ್ನು ರಚಿಸಿದ್ದು,

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ನಿಧನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top