ಕ್ರೈಮ್ ನ್ಯೂಸ್

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಇಂದೋರ್‌, ಜ. 06. ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದೋರ್ ಎಂಬಲ್ಲಿ ವರದಿಯಾಗಿದೆ. ಈ ಕುರಿತು ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜಿಮ್‌ನಲ್ಲಿ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂಟಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಮನೆಯಲ್ಲಿದ್ದ ಒಂಟಿ ಮಹಿಳೆಯ ಕೈ ಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ನಗರದ ಕೆಎಸ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಲಕ್ಷ್ಮೀ ಎಂಬವರ ಮಗಳು ಡಾ.ವೈಷ್ಣವಿ ಸುರೇಶ್ ಅವರ ಕ್ಲಿನಿಕ್‌ ಗೆ ತೆರಳಿದ್ದ ವೇಳೆ ಬಂದ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಲಕ್ಷ್ಮೀ ಅವರನ್ನು ಕಟ್ಟಿಹಾಕಿ 3.5 ಲಕ್ಷ ನಗದು, ಮೊಬೈಲ್ ಸೇರಿದಂತೆ 7.5 ಲಕ್ಷ ಮೌಲ್ಯದ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ. ವೈದ್ಯೆ ವೈಷ್ಣವಿ ಕಳೆದ ಒಂದು ತಿಂಗಳಿನಿಂದ

ಒಂಟಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 06. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ನಡೆದಿರುವ ಘಟನೆ ವಿಟ್ಲ ಸಮೀಪದ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದ ಆಟೋದಲ್ಲಿದ್ದವರಿಗೆ ಗಾಯವಾಗಿದ್ದು, ಎರಡೂ ವಾಹನಗಳು ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಢಿಕ್ಕಿ ➤ ಐವರು ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಪು, ಜ. 06. ಕಾಪುವಿನಿಂದ ಎಂಟು ಮೈಲಿ ನಾಟಿಕಲ್ ದೂರದ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ವೊಂದು ಬಂಡೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಕಾಪುವಿನಲ್ಲಿ ವರದಿಯಾಗಿದೆ. ಘಟನೆಯ ವೇಳೆ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟ್ ಸಿಬ್ಬಂದಿ ರಕ್ಷಿಸಿದ್ದಾರೆ ಎನ್ನಲಾಗಿದೆ. ಬಾಡನಿಡಿಯೂರಿನ ಭಾಸ್ಕರ್ ಎಂ. ಪುತ್ರನ್ ಎಂಬವರ ಮಾಲಿಕತ್ವದ “ಸ್ವರ್ಣಗೈರಿ” ಬೋಟ್ ಮಲ್ಪೆ ಬಂದರ್ ನಿಂದ ಮೀನುಗಾರಿಕೆಗೆ ತೆರಳಿತ್ತು ಎಂದು ತಿಳಿದುಬಂದಿದೆ. ಬಂಡೆಗೆ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿ ಬೋಟ್ ನ ಒಳಗೆ

ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಢಿಕ್ಕಿ ➤ ಐವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ನಿವಾಸಿ ಕೇಶವ ನಾಯ್ಕ್ (56) ಎಂದು ಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕೇಶವರವರು ಹಲಸಿನ ಮರ ಏರಿ ಕಾಳು ಮೆಣಸು ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಚಿರತೆ ದಾಳಿಗೆ ದನವೊಂದು ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುದ್ಯಾರು ಗ್ರಾಮದಲ್ಲಿ ಸಂಭವಿಸಿದೆ. ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಎಂಬವರು ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದ ವೇಳೆ, ಚಿರತೆಯೊಂದು ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಚಿರತೆ ದಾಳಿಗೆ ದನ ಮೃತಪಟ್ಟಿದ್ದು, ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.  

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವಾಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com, ಮೈಸೂರು ಜ. 06. ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.   ಗುಜರಾತ್ ನಿಂದ ಐವತ್ತು ಮಂದಿಯನ್ನು ಹೊತ್ತುಕೊಂಡು ಬಂದಿದ್ದ ಬಸ್ ಚಾಮುಂಡಿ ಬೆಟ್ಟಕ್ಕೆಸಾಗುತ್ತಿದ್ದ ವೇಳೆ ಬಸ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ, ಕೂಡಲೇ ಬೆಂಕಿಯ ಸಂಪರ್ಕದ ವೈರ್ ಗಳನ್ನು ಕತ್ತರಿಸಿದ್ದಾರೆ. ಇದೀಗ ಚಾಲಕನ ಸಮಯಪ್ರಜ್ಞೆಯಿಂದಾಗಿ 50

ಪ್ರವಾಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ವಿದ್ಯಾರ್ಥಿನಿಯೋರ್ವಳು ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೋಡಿಯಡ್ಕ ನಿವಾಸಿ ಯುವಕನ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಆರೋಪಿ ಕೋಳಿ ಅಂಗಡಿ ಹೊಂದಿರುವ ಕೋಡಿಯಡ್ಕ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಹುಲ್, ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮತ್ತು ಆಕೆಗೆ ಬೆದರಿಕೆಯೊಡ್ಡಿರುವುದಾಗಿ ಪುತ್ತೂರು ನಿವಾಸಿ ಸದ್ಯ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಕಾಟನ್ ಪೇಟೆ ಠಾಣೆಯಲ್ಲಿ ಬಂಧಿತನಾಗಿದ್ದ ಆರೋಪಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಪೊಲೀಸರ ಹಲ್ಲೆಯಿಂದ ಲಾಕಪ್‌ನಲ್ಲಿಯೇ ಯುವಕ ಮೃತಪಟ್ಟಿದ್ದಾನೆಂದು ಕುಟುಂಬ ಮೂಲಗಳು ಆರೋಪಿಸಿದೆ.   ಹಳೆಯ ದರೋಡೆ ಸಂಚು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದ ಕಾರಣಕ್ಕೆ ನ್ಯಾಯಾಲಯದ ವಾರೆಂಟ್‌ ಹಿನ್ನೆಲೆ ಬಂಧಿತನಾಗಿದ್ದ ಭಕ್ಷಿ ಗಾರ್ಡನ್‌ ನಿವಾಸಿ ವಿನೋದ್‌ (23) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಈತನಿಗೆ ಬಂಧಿಸಲಾಗಿತ್ತು. ಈತ ಸೆಲ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top