ಕ್ರೈಮ್ ನ್ಯೂಸ್

crime, arrest, suspected

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.01. ಶಾಲಾ ವಾರ್ಷಿಕೋತ್ಸವಕ್ಕೆಂದು ತೆರಳಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರಗೈದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಶಾಲಾ ವಾರ್ಷಿಕೋತ್ಸವ ವೀಕ್ಷಿಸಿ ಬಾಲಕಿಯನ್ನು ತನ್ನ ಬೈಕಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ಆರೋಪಿ ನವೀನ್ ಎಂಬಾತ ಅತ್ಯಾಚಾರಗೈದಿರುವುದಾಗಿ ಆರೋಪಿಸಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಶಿರಾಡಿ: ಒಂಟಿಸಲಗ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಗುಂಡ್ಯ, ಡಿ. 31. ಗುಂಡ್ಯ ಹೊಳೆ ಬದಿಗೆ ತೆರಳಿದವರ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರದಂದು ಶಿರಾಡಿ ಎಂಬಲ್ಲಿ ಸಂಭವಿಸಿದೆ. ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ( 45) ಮತ್ತು ಅವರ ಪುತ್ರ ಶರಣ್ (18) ಶನಿವಾರದಂದು ಗುಂಡ್ಯ ಹೊಳೆ ಬದಿಗೆ ತೆರಳಿದ್ದರು. ಈ ವೇಳೆ ಕಾಡಿನಿಂದ ಹೊಳೆಯತ್ತ ಆಗಮಿಸಿದ್ದ ಒಂಟಿ ಸಲಗವೊಂದು ಶರಣ್ ಮೇಲೆ ದಾಳಿ ಮಾಡಿದ್ದು,

ಶಿರಾಡಿ: ಒಂಟಿಸಲಗ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಹುಣಸಗಿ, ಡಿ. 31. ಬ್ರಿಜ್‍ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಣಸಗಿ ಸಮೀಪದ ರಾಜನ್ ಕೊಳ್ಳೂರ್ ಬಳಿ ವರದಿಯಾಗಿದೆ. ಮೃತರನ್ನು ಕಾಮನಟಗಿ ಗ್ರಾಮದ ಮಲ್ಲಿಕಾರ್ಜುನ ಚೆನ್ನಪ್ಪ ಮಡಿವಾಳ (35) ಹಾಗೂ ಬಲಶೆಟ್ಟಿಹಾಳ್ ಗ್ರಾಮದ ಪರಶುರಾಮ ಅಂಬರೀಶ ಚಲವಾದಿ (32) ಎಂದು ಗುರುತಿಸಲಾಗಿದೆ. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ  

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಡಿ. 31. ನೀರು ತುಂಬಿದ ಕಲ್ಲು ಕ್ವಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಛತ್ತೀಸ್ ಘಡದಲ್ಲಿ ಸಂಭವಿಸಿದೆ. ಘಟನೆಯಿಂದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 15 ವರ್ಷದ ಬಾಲಕಿಯೋರ್ವಳು ನೀರಿನಿಂದ ಈಜಿ ಬಂದು ದಡ ಸೇರಿದ್ದಾಳೆ ಎಂದು ತಿಳಿದುಬಂದಿದೆ.    

ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ 

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೋರ್ವ ಕೆ.ಎಸ್.ಆರ್.ಟಿ.ಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ ಹಲ್ಲೆ ನಡೆಸಿರುವ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಟೊಂಕಾ ಬಳಿ ಸಂಭವಿಸಿದೆ. ಹಲ್ಲೆಗೊಳಗಾದವರನ್ನು ಬಸ್ ಚಾಲಕ ಕೃಷ್ಣ ನಾಯ್ಕ ಹಾಗೂ ನಿರ್ವಾಹಕ ಮರಿಯಪ್ಪ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಬೈಕ್ ಸವಾರನ ಕುರಿತು ಮಾಹಿತಿ ತಿಳಿದುಬಂದಿಲ್ಲ. ಕುಮಟಾದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಕಾಸರಗೋಡು ಬಳಿ ಪ್ರಯಾಣಿಕರು

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 31. ಹಿಂದಿ ಕಿರುತೆರೆ ನಟಿ, ಮಾಡೆಲ್‌ ತುನಿಷಾ ಶರ್ಮಾ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಟ ಮತ್ತು ಪ್ರಕರಣದ ಪ್ರಮುಖ ಆರೋಪಿ ಆಕೆಯ ಪ್ರಿಯಕರ ಶೀಜಾನ್‌ ಖಾನ್‌ ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಡಿ. 24ರಂದು ತುನಿಷಾ ಶರ್ಮಾ ಅವರು ತಮ್ಮ ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ, ಸಹ ನಟ ಶೀಜಾನ್‌ ಮೊಹಮ್ಮದ್‌ ಖಾನ್‌ ನನ್ನು ಪೊಲೀಸರು ಬಂಧಿಸಿದ್ದರು.

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಚಿನ್ನ ಸಾಗಾಟ ➤ 532 ಗ್ರಾಂ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಾಲ್ಡೀವ್ಸ್ ನಿಂದ ಬಂದಿಳಿದ ಪ್ರಯಾಣಿಕನನ್ನು ತೀವ್ರವಾಗಿ ತಪಾಸಣೆ ನಡೆಸಿದ ಅಧಿಕಾರಿಗಳು, ಗುದನಾಳದಲ್ಲಿ 3 ಅಂಡಾಕಾರದ ಪ್ಯಾಕೆಟ್‌ ಗಳಲ್ಲಿ ಘನ ಗಮ್‌ ನೊಂದಿಗೆ ಬೆರೆಸಿದ ಪೇಸ್ಟ್ ರೂಪದಲ್ಲಿ ಪ್ಯಾಕ್ ಮಾಡಿಟ್ಟಿದ್ದ ಸುಮಾರು 532.21 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 28,73,934 ರೂ. ಎಂದು ಅಧಿಕಾರಿಗಳು

ಅಕ್ರಮ ಚಿನ್ನ ಸಾಗಾಟ ➤ 532 ಗ್ರಾಂ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.  

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 31. ಮೂಗಿನ ಸಮಸ್ಯೆ ಅಂತ ಆಸ್ಪತ್ರೆಗೆ ದಾಖಲಾದ ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ವರದಿಯಾಗಿದೆ. ಮೃತ ಯುವತಿಯನ್ನು ರಾಯಚೂರು ನಗರದ ರಾಜೇಶ್ವರಿ (18)  ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆ ಅಂತ ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ.  

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆ್ಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top