ಕ್ರೈಮ್ ನ್ಯೂಸ್

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 29. ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರ ತುಂಡಾದ ಪರಿಣಾಮ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕದಿಂದ ಗುರುವಾರದಂದು ನಡೆದಿದೆ. ಮೃತರನ್ನು ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56) ಎಂದು ಗುರುತಿಸಲಾಗಿದೆ. ಇವರು ಇಂದಹ ಬೆಳಗ್ಗೆ ತನ್ನ ಅಡಿಕೆ ತೋಟದಲ್ಲಿ ಅಡಿಕೆ ತೆಗೆಯಲೆಂದು ಮರ ಹತ್ತಿದ್ದ ವೇಳೆ, ಅಡಿಕೆ ಮರ ಅರ್ಧದಿಂದ ತುಂಡಾದ ಪರಿಣಾಮ ಮರ ಸಮೇತ ಚಂದ್ರಶೇಖರ ಗೌಡರವರು ನೆಲಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. […]

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು : ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 29.  ವಿದ್ಯಾರ್ಥಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪವನ್ (19)  ಎಂದು ಗುರುತಿಸಲಾಗಿದೆ. ಈತ ಎಎಸ್ ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಬಂದ ಬಳಿಕ ಈತ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿನ ಬಳಿ ಬಂದಿದ್ದಾನೆ. ನಂತರ ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ

ಬೆಂಗಳೂರು : ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಕಾರ್ಪೋರೇಟರ್ ವಾಗೀಶ್ ಹೃದಯಾಘಾತದಿಂದ ನಿಧನ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 29.  ಮಾಜಿ ಕಾರ್ಪೋರೇಟರ್ ವಾಗೀಶ್​​​ ಮನೆಯಲ್ಲಿರುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.   ವಾಗೀಶ್ ಮಾರುತಿ ಮಂದಿರ ವಾರ್ಡ್​​ನ ಮಾಜಿ ಕಾರ್ಪೋರೇಟರ್​ ಆಗಿದ್ದರು. 2015ರಲ್ಲಿ ಮಾರುತಿ ಮಂದಿರದಿಂದ ಪಾಲಿಕೆಗೆ ಆಯ್ಕೆಯಾಗಿದ್ದರು. ವಾಗೀಶ್ ಕುಟುಂಬ ಶೋಕಸಾಗರದಲ್ಲಿ ಮುಳಗಿದ್ದಾರೆ. ವಾಗೀಶ್ರವರ ಬೆಂಬಲಿಗರ ಹಾಗೂ ಕಾರ್ಯಕರ್ತರ ಆಕ್ರಂದನ ಮುಗಿಲು ಮುಟ್ಟಿದೆ ಎನ್ನಲಾಗಿದೆ.

ಮಾಜಿ ಕಾರ್ಪೋರೇಟರ್ ವಾಗೀಶ್ ಹೃದಯಾಘಾತದಿಂದ ನಿಧನ.. Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ಪ್ರವಾಸದ ಬಸ್ ಗೆ ಸರಕಾರಿ ಬಸ್ ಢಿಕ್ಕಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸಾಗರ, ಡಿ. 29.  ಶಾಲಾ ಪ್ರವಾಸದ ಬಸ್ ಮತ್ತು ಸರಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ ಗುರುವಾರದಂದು ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಆನಂದಪುರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸಾಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಶಾಲಾ ಪ್ರವಾಸದ ಬಸ್ ಗೆ ಸರಕಾರಿ ಬಸ್ ಢಿಕ್ಕಿ ➤ ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಣಿ ಅಪಘಾತ ➤ 6 ಮಂದಿ ಭಕ್ತರು ಮೃತ್ಯು..!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 29.  ದೇವರ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಸರಣಿ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಮೃತಪಟ್ಟು, ಐವರು ಗಾಯಗೊಂಡಿರುವ ದಾರುಣ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅವರಲ್ಲಿ ನಾಲ್ವರು ಸ್ಥಿತಿ ಗಂಭೀರವಾಗಿದೆ. ಕಾರ್ತಿಕೈ ದೀಪಂ ಹಬ್ಬದ ನಿಮಿತ್ತ ಟಾಟಾ ಏಸ್ ವಾಹನದಲ್ಲಿ ಪೊಝಿಚಲೂರ್ ಜ್ಞಾನಾಂಬಿಕ ನಗರದ 10 ಮಂದಿ ತಿರುವಣ್ಣಾಮಲೈ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ತೆರಳಿದ್ದರು. ದರ್ಶನ ಮುಗಿಸಿ

ಸರಣಿ ಅಪಘಾತ ➤ 6 ಮಂದಿ ಭಕ್ತರು ಮೃತ್ಯು..! Read More »

ಕ್ರೈಮ್ ನ್ಯೂಸ್

ಕಾರು ಸ್ಫೋಟ ಪ್ರಕರಣ ➤ ಮತ್ತಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 29. ಅ. 23ರಂದು ಕೊಯಮತ್ತೂರಿನ ಕೊಟ್ಟೈ ಸಮಿಪ ಕಾರಿನ ಒಳಗೆ ಸಿಲಿಂಡರ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಶೇಖ್‌ ಹಿದಾಯತುಲ್ಲಾ ಮತ್ತು ಸನೋಫ‌ರ್‌ ಅಲಿ ಎಂದು ಗುರುತಿಸಲಾಗಿದೆ. ಇದೀಗ ಇವರಿಬ್ಬರ ಸಹಿತ ಪ್ರಕರಣದಲ್ಲಿ ಇದುವರೆಗೂ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ. 2022ರ ಫೆಬ್ರವರಿಯಲ್ಲಿ ತಮಿಳುನಾಡಿನ ಈರೋಡ್‌ ಜಿಲ್ಲೆಯ ಸತ್ಯಮಂಗಲಂ ಕಾಡಿನ ಅಸನೂರ್‌ ಮತ್ತು ಕದಂಬೂರ್‌ ಪ್ರದೇಶದಲ್ಲಿ ಭಯೋತ್ಪಾದನೆ

ಕಾರು ಸ್ಫೋಟ ಪ್ರಕರಣ ➤ ಮತ್ತಿಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನಿರುಪಾಲು ➤ ಪತ್ನಿಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 29. ಮೀನು ಹಿಡಿಯಲು ಹೋಗಿ ನದಿ ನೀರಿನಲ್ಲಿ ಮುಳುಗಿದ್ದ ಜನಾರ್ದನ ಗೌಡ ಎಂಬವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಜನಾರ್ಧನರು ಬಂದಾರು ಗ್ರಾಮದ ಬೋಲೋಡಿ ನಿವಾಸಿ ಚಂದಪ್ಪ ಪೂಜಾರಿ ಎಂಬವರ ಪುತ್ರ ಮಹೇಶ್ ಎಂಬಾತನೊಂದಿಗೆ ಡಿ. 26ರ ಸಂಜೆ ಮುಗೇರಡ್ಕ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಬಂದಿದ್ದು, ಈ ಸಂದರ್ಭ ಅವರು ನೀರು ಪಾಲಾಗಿದ್ದರು. ಆದರೆ ಅವರ

ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನಿರುಪಾಲು ➤ ಪತ್ನಿಯಿಂದ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ ರಿಕ್ಷಾ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com  ವಿಟ್ಲ, ಡಿ.29.  ರಿಕ್ಷಾ ಮತ್ತು ಕಾರಿನ ನಡುವೆ ಅಪಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡಿರುವ ಘಟನೆ  ವಿಟ್ಲದ ಕೊಡಾಜೆ ಮಸೀದಿ ಬಳಿ ವರದಿಯಾಗಿದೆ. ಗಾಯಗೊಂಡ ಆಟೋ ರಿಕ್ಷಾ ಚಾಲಕನ್ನು ಕೂಸಪ್ಪ ಎಂದು ಗುರುತಿಸಲಾಗಿದೆ. ಈ ರಿಕ್ಷಾ ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ವಿಟ್ಲ : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ ರಿಕ್ಷಾ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಓವರ್ ಟೇಕ್ ಮಾಡುವ ಭರದಲ್ಲಿ ಬೊಲೆರೋ‌ ವಾಹನ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ, ಆಟೋದಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42), ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿ ಸುಹೈಲ್ (30) ಹಾಗೂ ಕೊಟ್ಟಿಗೆಹಾರ ನಿವಾಸಿ ಚೇತನ್ (27) ಎಂದು ಗುರತಿಸಲಾಗಿದೆ. ಈ ಪೈಕಿ ಸುಹೈಲ್ ತಲೆಯ ಭಾಗಕ್ಕೆ ಹೆಚ್ಚು ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top