ಕ್ರೈಮ್ ನ್ಯೂಸ್

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11 ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಈತ ಕಳವು ಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿದ್ದ 4 ಲಕ್ಷ 35 ಸಾವಿರ ರೂ. ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ ಮುಂತಾದವುಗಳನ್ನು ವಶಕ್ಕೆ ಪಡೆಯಲಾಗಿದೆ. ನಂತರ […]

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಕೇರಳ, ಡಿ. 22. ಮನೆಯಲ್ಲಿ ಆಟವಾಡುತ್ತಾ ಎರಡು ವರ್ಷದ ಬಾಲಕ ಟಿ.ವಿಯ ರಿಮೋಟ್​ ಕಂಟ್ರೋಲರ್​ನ ಬ್ಯಾಟರಿ ನುಂಗಿದ ಘಟನೆ ಕೇರಳದಲ್ಲಿ ನಡೆದಿದೆ. ಬ್ಯಾಟರಿ ನುಂಗಿದನ್ನು ಗಮನಿಸಿದ ಪೋಷಕರು ತಕ್ಷಣವೇ ಅಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಬ್ಯಾಟರಿಯನ್ನು ಹೊರಕ್ಕೆ ತೆಗೆದಿದ್ದಾರೆ.

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ. ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಬರ್ಬರ ಕೊಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ. 21. ಕಾರಿನಲ್ಲೇ ಸಾಫ್ಟ್ ವೇರ್ ಉದ್ಯೋಗಿಯೋರ್ವರು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ವಿಜಯ್ ಕುಮಾರ್ (51) ಎಂದು ಗುರುತಿಸಲಾಗಿದೆ. ಇವರು ಐಟಿ ಎಂಜಿನಿಯರ್ ಆಗಿದ್ದರು. ಇವರು ಮಹಾಲಕ್ಷ್ಮಿ ಲೇಔಟ್ ನ ಕುರುಬರಹಳ್ಳಿ ಜಂಕ್ಷನ್ ನಲ್ಲಿ ಕಾರಿನ ನೈಟ್ರೋಜನ್ ಸಿಲಿಂಡರ್ ಲೀಕ್ ಮಾಡಿ, ಗ್ಲಾಸ್ ಕ್ಲೋಸ್  ಮಾಡಿಕೊಂಡು ತಲೆಗೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡಿರೋದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸಾವು ಬದುಕಿನ ನಡುವೆ

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಗ್ರಾ.ಪಂ ಪ್ರಭಾರ ಆಭಿವೃದ್ಧಿ ಅಧಿಕಾರಿ ನಾರಾಯಣ ಕೆ ಅವರಿಗೆ ವಾಟ್ಸಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 21. ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಯುವಕ-ಯುವತಿ ಮೃತಪಟ್ಟ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 21. ಹತ್ತಿ ಬಿಡಿಸುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೋ ವಾಹನ ಪಲ್ಟಿಯಾಗಿ 16 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಸಂಭವಿಸಿದೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ಕಟ್ಟಡದ 7 ನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಪಿಇಎಸ್ ಕಾಲೇಜು ಆವರಣದಲ್ಲಿ ಸಂಭವಿಸಿದೆ. ಮೃತ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮೂಲದ ಎಸ್.ಕೆ.ಜಿಯಾರುಲ್ (24) ಎಂದು ಗುರುತಿಸಲಾಗಿದೆ. ಮಗನ ಸಾವಿನ ಕುರಿತು ತಾಯಿ ನೀಡಿರುವ ದೂರಿನನ್ವಯ, ಕಟ್ಟಡ ನಿರ್ಮಾಣದ ಗುತ್ತಿಗೆ ಪಡೆದಿದ್ದ ಎವಿಎಸ್ ಕಂಪನಿಯ ಜವಾಹರ್, ಎಂಜಿನಿಯರ್ ನಂಬಿರಾಜನ್, ಉಸ್ತುವಾರಿ ಕುಮಾರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ    

(ನ್ಯೂಸ್ ಕಡಬ) newskadaba.com  ಬ್ರಹ್ಮಾವರ, ಡಿ.21. ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಈತ ಹೊಂಡಾ ಮ್ಯಾಟ್ರಿಕ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ಪರಿಶೀಲನೆ ನಡೆಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಆತನ ಜೊತೆಯಿದ್ದು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top