ಕ್ರೈಮ್ ನ್ಯೂಸ್

ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಸಂತೆಬೆನ್ನೂರು, ಡಿ. 21. ಗೂಡ್ಸ್ ವಾಹನಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂತೇಬೆನ್ನೂರು ಸಮೀಪದ ಕಾಕನೂರು ವಿನಾಯಕ ಪ್ರೌಢಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ದಾವಣಗೆರೆ ತಾಲ್ಲೂಕಿನ ಗೋಪನಾಳು ಗ್ರಾಮದ ನಿವಾಸಿ ಪರಮೇಶ್ (33) ಎಂದು ಗುರುತಿಸಲಾಗಿದೆ. ಇವರು ಪಾಂಡೋಮಟ್ಟಿ ಗ್ರಾಮಕ್ಕೆ ಸಂಬಂಧಿಕರ ಶವ ಸಂಸ್ಕಾರಕ್ಕೆಂದು ತೆರಳುವಾಗ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ಬಾಲಕನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಅಯ್ಯಪ್ಪ ವೃತಧಾರಿ ವಿದ್ಯಾರ್ಥಿಯೋರ್ವನಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ನಗರದ ಶಾಲೆಯ ಬಳಿ ನಡೆದಿದೆ. ನಗರದ ಶಾಲೆಯೊಂದರ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿದ್ದು, ಶಿಕ್ಷಕರು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೆ ಮಂಗಳವಾರದಂದು ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು 9ನೇ ತರಗತಿ ವಿದ್ಯಾರ್ಥಿಗಳು 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ

ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ಬಾಲಕನ ಮೇಲೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಕೊಳೆತ ಅಪರಿಚಿತ ಮೃತದೇಹವೊಂದು ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ವರದಿಯಾಗಿದೆ. ಎಂದಿನಂತೆ ಸೊಪ್ಪು ತರಲು ಗುಡ್ಡಕ್ಕೆ ತೆರಳಿದ ಸ್ಥಳೀಯರಿಗೆ ಮೊದಲು ಮೊಬೈಲ್ ಹಾಗೂ ಟ್ರಾವೆಲ್ ಬ್ಯಾಗ್ ಕಾಣಿಸಿದ್ದು, ಅಕ್ಕಪಕ್ಕ ಪರಿಶೀಲನೆ ನಡೆಸಿದಾಗ ಪಕ್ಕದಲ್ಲಿ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಅಪರಿಚಿತ ಮೃತದೇಹ ನೆಲದಲ್ಲಿ ಬಿದ್ದುಕೊಂಡಿತ್ತು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 21. ಓಮ್ನಿ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಗಾಯಾಳುವನ್ನು ಕೊಯಿಲ ನಿವಾಸಿ ನಝೀರ್ ಎಂಬವರ ಪುತ್ರ ಉಬ್ಬಿ ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿಯಿಂದ ಕೆಮ್ಮಾರದ ಕಡೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಲಾಯಿಲ ಗ್ರಾಮದ ಕೊಯ್ಯರು ಕ್ರಾಸ್ ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ (25)  ಹಾಗೂ ಗಾಯಾಳುವನ್ನು ಶೈಲೇಶ್ ಎಂದು ಗುರುತಿಸಲಾಗಿದೆ. ಮೃತ ಯುವಕ ಉಜಿರೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಕೋರಮಂಗಲ ಜೋಡಿ ಕೊಲೆ ಪ್ರಕರಣ ಭೇಧಿಸಿದ ಪೊಲೀಸರು ಪ್ರಮುಖ ಆರೋಪಿ ಉದ್ಯಮಿಯ ಮಾಜಿ ಕಾರು ಚಾಲಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೊಪಿಯನ್ನು ಜಗದೀಶ್ (24), ಅಭಿಷೇಕ್ (22) ಮತ್ತು ಆತನ ಸಹೋದರ ಕಿರಣ್ (19) ಎಂದು ಗುರುತಿಸಲಾಗಿದೆ. ಉದ್ಯಮಿ ರಾಜಗೋಪಾಲ್ ರೆಡ್ಡಿ ಅವರ ಮಾಜಿ ಚಾಲಕನಾಗಿದ್ದ ಜಗದೀಶ್ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ ರೂ. 5

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್…! ➤ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ತೀವ್ರ ಗಾಯಗೊಂಡ ಘಟನೆ ಕೆದಂವಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪರ್ಪುಂಜ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಇವರು ಕೆದಂಬಾಡಿ ಶಾಲೆಯ ಸ್ಮಾರ್ಟ್ ಕ್ಲಾಸ್ ಕೋಣೆಯ ವಯರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಕೆಳಗಡೆ ಬಿದ್ದು ತಲೆಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. CIRCUIT,

ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್…! ➤ ಯುವಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು.

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                      

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 21. ಬೈಕ್ ಮತ್ತು ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಬಾಬುಜಿ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಮರಾಜನಗರ: ಬಿ.ಆರ್.ಟಿ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 21. 5 ವರ್ಷ ಪ್ರಾಯದ ಹುಲಿ ಕಾದಾಟದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದ ಬಿ ಆರ್ ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಕಗ್ಗಲಿಗುಂಡಿ ಎಂಬಲ್ಲಿ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಬಂದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎನ್ನಲಾಗಿದೆ. ಕಗ್ಗಲಿಗುಂಡಿ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದೆ. ಸ್ಥಳದಲ್ಲಿ ಹುಲಿಗಳ ಹೆಜ್ಜೆ ಗುರುತು ಹೆಚ್ಚು ಪತ್ತೆಯಾಗಿದೆ.

ಚಾಮರಾಜನಗರ: ಬಿ.ಆರ್.ಟಿ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top