ಕ್ರೈಮ್ ನ್ಯೂಸ್

➤ಮಂಗಳೂರು : ತೋಟದ ಕೆಲಸಗಾರನ ಭೀಕರ ಹತ್ಯೆ!

(ನ್ಯೂಸ್ ಕಡಬ) newskadaba.com ಮಂಗಳೂರು , ಡಿ. 20 ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಎ.ಸಿ.ಕುರಿಯನ್ ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಕೊಲೆಯಾದ ದಲಿತ. ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಪೂಜಾರಿ, ಮಹೇಶ್ ಪೂಜಾರಿ ಕೊಲೆ ಮಾಡಿರುವ ಆರೋಪಿಗಳು. ಶ್ರೀಧರ ಮೇಲೆ ಕೆಲ ದಿನಗಳ ಹಿಂದೆ  ನಾಲ್ವರು ಮಾರಣಾಂತಿಕ […]

➤ಮಂಗಳೂರು : ತೋಟದ ಕೆಲಸಗಾರನ ಭೀಕರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

(ನ್ಯೂಸ್ ಕಡಬ) newskadaba.com   ನೆಲಮಂಗಲ, ಡಿ.20   ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನೆಲಮಂಗಲ ಸಮೀಪದ ಮಾದಾ ವರದ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ದಾವಣಗೆರೆಯ ಹರ್ಷ ( 25 ) ಎಂದು ಗುರುತಿಸಲಾಗಿದೆ. ಗುಂಡಿ ತಪ್ಪಿಸಲು ಹೋಗಿ ಅಯತಪ್ಪಿ ರಸ್ತೆಯ ಮಧ್ಯದಲ್ಲಿ ಬಿದ್ದಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಗದಗ : ವಿದ್ಯಾರ್ಥಿಯನ್ನು ಮೊದಲ ಮಹಡಿಯಿಂದ ಎಸೆದು ಕೊಲೆಗೈದ ಪಾಪಿ ಶಿಕ್ಷಕ!

(ನ್ಯೂಸ್ ಕಡಬ) newskadaba.com ಗದಗ  ಡಿ. 20  ಗದಗ: ಶಾಲಾ ಶಿಕ್ಷಕನೋರ್ವ 4ನೇ ತರಗತಿ ವಿದ್ಯಾರ್ಥಿಯನ್ನು ಥಳಿಸಿ, ಬಳಿಕ ಶಾಲೆಯ ಮೊದಲನೇ ಮಹಡಿಯಿಂದ ಎಸೆದು ಕೊಲೆ ಮಾಡಿರುವ ಘಟನೆ ಗದಗ  ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 10 ವರ್ಷದ ಬಾಲಕ ಮೃತಪಟ್ಟಿದ್ದು, ಶಾಲೆಯಲ್ಲಿ ಪಾಠ ಮಾಡಲು ನಿಯೋಜನೆ ಮಾಡಿದ್ದ ಅತಿಥಿ ಶಿಕ್ಷಕನೊಬ್ಬ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಘಟನೆ ನಡೆದಿದ್ದು, ಮೃತ ಬಾಲಕನನ್ನು ಭರತ್

➤ಗದಗ : ವಿದ್ಯಾರ್ಥಿಯನ್ನು ಮೊದಲ ಮಹಡಿಯಿಂದ ಎಸೆದು ಕೊಲೆಗೈದ ಪಾಪಿ ಶಿಕ್ಷಕ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್ , ಡಿ 20 :  ಮಾರುಕಟ್ಟೆಯೊಂದರಲ್ಲಿ ಸ್ಫೋಟ ಸಂಭವಿಸಿ ಸುಮಾರು 13 ಮಂದಿ ಗಾಯಗೊಂಡಿರುವ ಘಟನೆ  ಬಲೂಚಿಸ್ತಾನ್ ಪ್ರಾಂತ್ಯದ ಖುಸ್ದಾರ್ ಜಿಲ್ಲೆಯಲ್ಲಿ ವರದಿಯಾಗಿದೆ. ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಸೈಕಲ್ ಗೆ ಸ್ಪೋಟಕಗಳನ್ನು ಅಳವಡಿಸಲಾಗಿದ್ದು, ರಿಮೋಟ್  ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಅ ಪ್ರದೇಶದ ಸುತ್ತ ಮುತ್ತ ಕಡಿಮೆ ಜನರಿದ್ದರಿಂದ ಹಾಗೂ ಅಂಗಡಿಗಳು ಮುಚ್ಚಲ್ಪಟ್ಟಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹಾಗೂ

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20   ಬಿಹಾರದ ಯುವಕನನ್ನು ಅಪಹರಿಸಿ ರೂ.2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರನ್ನು ಬಂಧಿಸಿದ ಘಟನೆ ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಡಿಪ್ಲೋಮಾ ವಿದ್ಯಾರ್ಥಿ ಎ.ಪ್ರಭಾತ್ (21), ಕುಣಿಗಲ್ ನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ರಂಗನಾಥ್ (19), ಕೃಷಿಕ ಕುಶಾಲ್ (19) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೃತ್ಯ ನಡೆದ ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.  

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                  

(ನ್ಯೂಸ್ ಕಡಬ) newskadaba.com     ಚೀನಾದಲ್ಲಿ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಹೇರಲಾಗಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೇಶದಾದ್ಯಂತ ಒಟ್ಟು 2,722 ಹೊಸ ಪ್ರಕರಣ ವರದಿಯಾಗಿದೆ. ಇದುವರೆಗೆ 3,83,175 ಹೊಸ ಪ್ರಕರಣಗಳು ವರದಿಯಾಗಿದ್ದು, 5,237 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 20. ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಯಶೋಧಾ (70), ಸುಮನ್ (41) ಹಾಗೂ ನರೇಶ್ ಗುಪ್ತಾ(36) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ  ಶಂಕೆ ವ್ಯಕ್ತವಾಗಿದೆ. ಇವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಮನೆಯೊಂದರಲ್ಲಿ ವಾಸವಾಗಿದ್ದು, ಮೃತ ಯಶೋದಾರಿಗೆ ಮೂವರು ಮಕ್ಕಳಿದ್ದರು. ಈ ಪೈಕಿ ಒಬ್ಬ ಮಗಳಿಗೆ ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದರೆ, ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ

(ನ್ಯೂಸ್ ಕಡಬ) newskadaba.com ಶೋಪಿಯಾನ್, ಡಿ. 20. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಯು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಘಟನೆ ವರದಿಯಾಗಿದೆ.   ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನಾಪಡೆಯು ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆಯು ಎನ್ಕೌಂಟರ್ ದಾಳಿ ನಡೆಸಿದೆ. ಹತ್ಯೆಯಾದ

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top