ಕ್ರೈಮ್ ನ್ಯೂಸ್

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಮೊಟ್ಟಮೊದಲ ಬಾರಿಗೆ ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮೇಲೆ ಈ ರೀತಿಯ ಬೃಹತ್ ದಾಳಿ ನಡೆಸಿದೆ. ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿಮಿಟೆಡ್‌ನ ಕೂಡ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಜವಳಿ […]

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                  

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 15. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಶಿಕ್ಷಕ ಚಿನ್ಮಯ ಆನಂದ ಮೂರ್ತಿ ಎಂಬಾತ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದು, ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು, ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಲಾರಿ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ , ಡಿ.15 . ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ  ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಗ್ಗನಹಳ್ಳಿಯ ಬೆಜ್ಜರಹಳ್ಳಿ ಬಳಿ ನಡೆದಿದೆ. ಮೃತರನ್ನು ಮಲ್ಲೇಶಯ್ಯ(52) ಎಂದು ಗುರುತಿಸಲಾಗಿದೆ. ಇವರು ಸುಗ್ಗನಹಳ್ಳಿ ಗ್ರಾಮದ ನಿವಾಸಿ ಸುಗ್ಗನಹಳ್ಳಿಯಿಂದ ಬೆಜ್ಜರಹಳ್ಳಿ ಕಟ್ಟೆಗೆ ಹೋಗುತ್ತಿದ್ದ  ವೇಳೆ ವೇಗವಾಗಿ ಬಂದ ಲಾರಿ ಬೈಕ್ ಸವಾರನಿಗೆ ಢಿಕ್ಕಿ ಹೊಡೆದಿದೆ. ಹೀಗಾಗಿ ಬೈಕ್ ಸವಾರ ಸ್ಥಳದಲ್ಲೇ ಮೃಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಬೈಕ್ ಗೆ ಲಾರಿ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು          

(ನ್ಯೂಸ್ ಕಡಬ) newskadaba.com  ಮುಂಬೈ, ಡಿ. 15.  ಬಸ್ಸೊಂದು ವೃದ್ಧನಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೂವೈ ಎಂಬಲ್ಲಿ ಸಂಭವಿಸಿದ್ದು, ಯಾವುದೇ ಅಪಾಯವಾಗಿಲ್ಲ ಎಂದೆನ್ನಲಾಗಿದೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದು, ಬಸ್ ಅವರ ಮೇಲೆ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.    

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ , ಡಿ 15 : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ. ಮೃತಪಟ್ಟವರನ್ನು ಜಕ್ಕಹಳ್ಳಿ ಗ್ರಾಮದ ಚಂದ್ರು(32) ,ಲಕ್ಕೂರು ಗ್ರಾಮದ ಅನಿಲ್ (26) ಎಂದು ಗುರುತಿಸಲಾಗಿದೆ. ಬೈಕಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಮೈಸೂರಿನ  ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಬೈಕ್ ಸವಾರರು ಅತೀ ವೇಗದಿಂದ ಬಂದ ಪರಿಣಾಮ ಮುಖಾಮುಖಿ ಢಿಕ್ಕಿ

ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ ➤ 5 ವಿದ್ಯಾರ್ಥಿಗಳು ಗಂಭೀರ

(ನ್ಯೂಸ್‌ ಕಡಬ) newskadaba.comಶಿವಮೊಗ್ಗ, ಡಿ. 15. ಪ್ರವಾಸಕ್ಕೆಂದು ಬಂದ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸಾಗರ ತಾಲೂಕಿನ ಹಿನ್ನೀರಿನ ವಕ್ಕೊಡಿ ತಿರುವಿನಲ್ಲಿ ನಡೆದಿದೆ. ಪ್ರವಾಸಕ್ಕೆಂದು ಹೈಸ್ಕೂಲ್ ಮಕ್ಕಳ ಶಾಲಾ ತಂಡವೊಂದು ಹಾಸನದಿಂದ ಶಿವಮೊಗ್ಗಕ್ಕೆ ಬಂದಿದ್ದು, ಏಕಾಏಕಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಒಟ್ಟು 5 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು,  ಅವರನ್ನು ಹತ್ತಿರದ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ ➤ 5 ವಿದ್ಯಾರ್ಥಿಗಳು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾ ಅಪಘಾತ ➤ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಡಿ. 15. ಟಿಪ್ಪರ್ ಲಾರಿಯೊಂದು ರಿಕ್ಷಾಕ್ಕೆ ಡಿಕ್ಕಿ‌ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವೃದ್ದೆ ಗಂಭೀರ ಗಾಯಗೊಂಡು ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ  ಬಿ.ಸಿ‌ರೋಡು ಸಮೀಪದ ಮೊಡಂಕಾಪು‌ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಅವ್ವಮ್ಮ ಎಂದು ಗುರುತಿಸಲಾಗಿದೆ. ಇವರು ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೈಕಂಬ ಕಡೆಯಿಂದ ಮೊಡಂಕಾಪು ಕಡೆಗೆ ಕರೆದೊಯ್ಯುತ್ತಿದ್ದ ವೇಳೆ ಮೊಡಂಕಾಪು ಕಡೆಯಿಂದ ಬಂದ ಟಿಪ್ಪರ್ ಲಾರಿ, ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು, ಪಕ್ಕದ ವಿದ್ಯುತ್

ಬಂಟ್ವಾಳ: ಆಟೋ ರಿಕ್ಷಾ ಅಪಘಾತ ➤ ಮಹಿಳೆ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

“ಬಾಲಕಿಗೆ ಆಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ” ➤ ಗೌತಮ್ ಗಂಭೀರ್ ಒತ್ತಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 15. ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ. ಬಾಲಕಿಯು ತನ್ನ ಸಹೋದರಿಯೊಂದಿಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಾಲಕನೊಬ್ಬ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ ಅವರು, ಈ ರೀತಿ ಕೃತ್ಯ ಎಸಗುವವರಿಗೆ ಭಯ ಹುಟ್ಟು ಹಾಕಬೇಕಾದ ಅಗತ್ಯವಿದೆ. ಇಂತಹ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದಲ್ಲಿ ಮಾತ್ರ ಭಯ ಹುಟ್ಟಿಸಲು ಸಾಧ್ಯ

“ಬಾಲಕಿಗೆ ಆಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ” ➤ ಗೌತಮ್ ಗಂಭೀರ್ ಒತ್ತಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ವಂಚನೆ ➤ ಮಗಳ ವಿರುದ್ದ ದೂರು ದಾಖಲಿಸಿದ ತಾಯಿ  

 (ನ್ಯೂಸ್ ಕಡಬ) newskadaba.com  ಮಂಗಳೂರು, ಡಿ. 15. ನಕಲಿ ದಾಖಲೆ ಸೃಷ್ಟಿಸಿ ತಾಯಿಗೆ, ಮಗಳು ಮತ್ತು ಆಕೆಯ ಸ್ನೇಹಿತೆ ಸೇರಿ 1.25 ಕೋಟಿ ರೂಪಾಯಿ ವಂಚಿಸಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಈ ಕುರಿತು ತಾಯಿ ರೀಟಾ ಪೇರಿಸ್‌ ದೂರು ನೀಡಿದ್ದು ಅವರ ಪುತ್ರಿ ನಿಕಿತಾ ಪೇರಿಸ್‌ ಮತ್ತು ಗೋಡ್ವಿನ್‌ ಫೆರ್ನಾಂಡಿಸ್‌ ಆರೋಪಿಗಳಾಗಿದ್ದಾರೆ. ದೂರಿನ ಪ್ರಕಾರ ರೀಟಾ ಪೇರಿಸ್‌ ಮತ್ತು ಅವರ ಪುತ್ರ ಅಮಿತ್‌ ಪೇರಿಸ್‌ ವಿದೇಶದಲ್ಲಿ ನೆಲೆಸಿದ್ದು, ರೀಟಾ ಪೇರಿಸ್‌ ಅವರ ಪುತ್ರಿ ನಿಕಿತಾ ಪೇರಿಸ್‌ ಮುದರಂಗಡಿಯ

ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ವಂಚನೆ ➤ ಮಗಳ ವಿರುದ್ದ ದೂರು ದಾಖಲಿಸಿದ ತಾಯಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು

(ನ್ಯೂಸ್‌ ಕಡಬ) newskadaba.com ತುಮಕೂರು , ಡಿ. 15 ತುಮಕೂರು ಕಳ್ಳಂಬೆಳ್ಳಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರು ಅಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನಪ್ಪಿದ್ದಾರೆ. ಇನ್ನು ಮೃತರೆಲ್ಲರೂ ಬೆಂಗಳೂರಿನವರು ಎಂದು ತಿಳಿದು ಬಂದಿದ್ದು, ಕಾರಿನ ಚಾಲಕ ಸೇರಿ ಐವರು ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಸ್ನೇಹಿತನ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ರು. ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಡ್ಜ್ ಮೇಲಿಂದ ಕೆಳಗೆ ಬಿದ್ದು ಈ

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top