ಕ್ರೈಮ್ ನ್ಯೂಸ್

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ  

 (ನ್ಯೂಸ್ ಕಡಬ) newskadaba.com   ಬೆಂಗಳೂರು, ಡಿ.14. ಕಳ್ಳನ ಮೇಲೆ ಮನೆ ಮಾಲೀಕನೋರ್ವ ಗುಂಡು ಹಾರಿಸಿದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.   ಆರೋಪಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ನಾಯಿಗಳು ಬೊಗಳುವ ಸದ್ದಿಗೆ ಎಚ್ಚರಗೊಂಡ ಮನೆ ಮಾಲೀಕ ಹೊರಗೆ ಬಂದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು […]

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸ್ಕೂಟರ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 14. ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿಯಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ನಿತ್ಯ ಪೂಜಾರಿ (48) ಎಂದು ಗುರುತಿಸಲಾಗಿದೆ. ಇವರು ಕೌಕ್ರಾಡಿ–ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಆಟೋ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಪರಿಣಾಮ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಸ್ಕೂಟರ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಶೌಚಾಲಯದ ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿತ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 14. ಶೌಚಾಲಯದ ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಅಡ್ಡೂರಿನಲ್ಲಿ ನಡೆದಿದೆ.   ಮೃತರನ್ನು ಅಡ್ಡೂರು ನಿವಾಸಿ ಆದಂ ಹಾಗೂ ಗಾಯಗೊಂಡವರನ್ನು ಇಮ್ತಿಯಾಝ್ ಮತ್ತು ಇಬ್ರಾಹೀಂ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ನಾಲ್ಕು ಮಂದಿ ಶೌಚಾಲಯಕ್ಕೆ ಗುಂಡಿ ಅಗೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬಂಟ್ವಾಳ: ಶೌಚಾಲಯದ ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿತ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಾವಿಗೆ ಬಿದ್ದ ವೃದ್ದೆ- ರಕ್ಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 14. ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆಯೊಬ್ಬರನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ ಘಟನೆ ಬಲ್ನಾಡಿನಲ್ಲಿ ಮಂಗಳವಾರದಂದು ನಡೆದಿದೆ.   ಬಾವಿಗೆ ಬಿದ್ದ ವೃದ್ದೆಯನ್ನು ಬಲ್ನಾಡು ನಿವಾಸಿ ಬಾಲಕ್ಕ ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ಊಟದ ಬಳಿಕ ನಾಪತ್ತೆಯಾಗಿದ್ದರು. ಮನೆ ಮಂದಿ ಹುಡುಕಾಡಿದಾಗ ಬಾವಿಯ ಹಗ್ಗ ಕೆಳಗೆ ಬಿದ್ದಿತ್ತು, ಇದನ್ನು ಗಮನಿಸಿ ಬಾವಿಗೆ ಇಣುಕಿದಾಗ ಬಾವಿಯೊಳಗೆ ಅವರು ಬಿದ್ದಿರುವುದು ತಿಳಿದುಬಂದಿದೆ. ತಕ್ಷಣವೇ ಮನೆಂಮದಿ ಅಗ್ನಿಶಾಮಕದಳದವರಿಗೆ ಕರೆ ಮಾಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಠಾಣಾಧಿಕಾರಿ ವಿ.ಸುಂದರ್

ಪುತ್ತೂರು: ಬಾವಿಗೆ ಬಿದ್ದ ವೃದ್ದೆ- ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಎಟಿಎಂ ಒಳನುಗ್ಗಿದ ಕಳ್ಳರು ಎಟಿಎಂ ಯಂತ್ರವನ್ನೇ ಕಂಟೇನರ್ ನಲ್ಲಿ ಹೊತ್ತೊಯ್ದ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿ. 10ರಂದು ಹರಳೂರು ರಸ್ತೆಯ ಬ್ಯಾಂಕ್ ಆಫ್ ಬರೋಡಾದ ಎಟಿಎಂ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದು, ಮರುದಿನ ಬೆಳಗ್ಗೆ ಬ್ಯಾಂಕ್ ಅಧಿಕಾರಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ. 13. ಇನ್ನೋವಾ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಇನ್ನೋವಾ ಕಾರಿನಲ್ಲಿದ್ದ ಕೃಷ್ಣಮೂರ್ತಿ(66), ಜಯಂತಿ(60) ಹಾಗೂ ಪ್ರಭಾಕರ್ ಎಂದು ಗುರುತಿಸಲಾಗಿದೆ. ಸಿಫ್ಟ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ವಾಹನ ದಟ್ಟಣೆ ಹೆಚ್ಚಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡು ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ  

 (ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.13  ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ನಿರಂತರ ಕರೆ ಮಾಡಿದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.  ಸಂಶಯಗೊಂಡು ಲಾಡ್ಜ್ ಸಿಬ್ಬಂದಿ 11 ಗಂಟೆ ವೇಳೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ..  

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಕೋಲಾರ, ಡಿ. 13. ಹಳ್ಳಬಿದ್ದ ರಸ್ತೆಗಳಲ್ಲಿ ಸಂಚರಿಸುವಾಗ ಗೂಡ್ಸ್ ಲಾರಿ ಪಲ್ಟಿಯಾದ ಘಟನೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.   ಕಾಟನ್ ತುಂಬಿದ್ದ ಲಾರಿಯು ಮಾಲೂರಿನಿಂದ ಬೆಂಗಳೂರಿಗೆ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

(ನ್ಯೂಸ್ ಕಡಬ) newskadaba.com ತಿರುವನಂತಪುರ, ಡಿ. 13.  ಜೊತೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಮಹಿಳೆಯು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, 31 ವರ್ಷದ ವ್ಯಕ್ತಿಯು ಮೃತಪಟ್ಟಿರುವ ಘಟನೆ ಕೇರಳದ ಪಟ್ಟಣಂತಿಟ್ಟ ಎಂಬಲ್ಲಿ ಸಂಭವಿಸಿದೆ. ಈ ಜೋಡಿಯು ತಾವು ಮೊದಲೇ ಕೈಗೊಂಡಿದ್ದ ನಿರ್ಧಾರದಂತೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಟೇಲ್ ಗೆ ತೆರಳಿದ್ದು, ಈ ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆ ಭಯದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮಹಿಳೆಯ ಚೀರಾಟವನ್ನು ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು               Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top