ಕ್ರೈಮ್ ನ್ಯೂಸ್

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ➤‌ ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಅ.21. ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿಗೆ ಕಾರಿನಲ್ಲಿ ಬಂದ ಆರೋಪಿಗಳಾದ ರಫೀಕ್‌ ಹಾಗೂ ರಮಿಯಾಸುದ್ದೀನ್ ಎಂಬವರು ಬೆಡ್ ಶೀಟ್ ಮಾರಾಟದ ನೆಪದಲ್ಲಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದು, ಮಹಿಳೆ ವಿರೋಧಿಸಿದಾಗ ಮೈ, ಕೈ ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹೊಡೆದಾಗ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ನೀಡಿದ ದೂರಿನಂತೆ […]

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ➤‌ ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಮಾಹಿತಿದಾರನಿಗೆ ದುಷ್ಕರ್ಮಿಯಿಂದ ಚೂರಿ ಇರಿತ!

ಮಂಗಳೂರು: ಗಾಂಜಾ ವ್ಯಸನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ಹಾಡಹಗಲೇ ಕರಾಟೆ ಮಾಸ್ಟರ್‌ ಅನ್ನು ಮಾರಕಾಸ್ತ್ರದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಳ್ಳಾಲ ಉಳಿಯ ನಿವಾಸಿ ಹರೀಶ್ ಗಾಣಿಗ (42) ಇರಿತಕ್ಕೊಳಗಾದವರು. ವಿಶಾಲ್ ಯಾನೆ ವಿಕಾಸ್ ಪ್ರಕರಣದ ಆರೋಪಿ.    

ಮಂಗಳೂರು: ಗಾಂಜಾ ದಂಧೆ ಮಾಹಿತಿದಾರನಿಗೆ ದುಷ್ಕರ್ಮಿಯಿಂದ ಚೂರಿ ಇರಿತ! Read More »

ಕ್ರೈಮ್ ನ್ಯೂಸ್

ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ ➤‌ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 13. ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36) ಎಂದು ಗುರುತಿಸಲಾಗಿದೆ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಾ ಸಾರ್ವಜನಿಕರನ್ನುದ್ದೇಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ ಬಂದ

ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ ➤‌ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಠಾಣಾ ಎದುರಿನಲ್ಲೇ ಕಳ್ಳರ ಕೈಚಳಕ ➤‌ ಮೂರು ಅಂಗಡಿಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 13. ಇಲ್ಲಿನ ಪೊಲೀಸ್ ಠಾಣಾ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಅ.13ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಇಲ್ಲಿನ ಲಕ್ಷ್ಮೀ ಸ್ಟೋರ್ ಎಂಬ ಅಂಗಡಿಯ ಷಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 40 ಸಾವಿರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ದೋಚಿದ್ದಾರೆ. ಹಾಗೂ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸೆಲ್ ಸೈಟ್ ಮೊಬೈಲ್ ಶಾಪ್ ಗೆ ನುಗ್ಗಿದ ಕಳ್ಳರು 5 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಅಲ್ಲದೇ ಬ್ಯಾಂಕ್ ರಸ್ತೆಯಲ್ಲಿರುವ

ಉಪ್ಪಿನಂಗಡಿ ಠಾಣಾ ಎದುರಿನಲ್ಲೇ ಕಳ್ಳರ ಕೈಚಳಕ ➤‌ ಮೂರು ಅಂಗಡಿಗೆ ನುಗ್ಗಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಹೊತ್ತಿ ಉರಿದ ಮನೆ ➤‌ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಅ. 13. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ನಷ್ಟ ಸಂಭವಿಸಿದ ಘಟನೆ ಪರ್ಕಳ ಈಶ್ವರನಗರದ ವಿವೇಕಾನಂದ ನಗರದಲ್ಲಿ ನಡೆದಿದೆ. ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲಾಗಿದ್ದು, ಗೃಹೋಪಯೋಗಿ ಉಪಕರಣಗಳಾದ ಟಿವಿ, ಫ್ರಿಜ್, ಸೋಫಾ, ಬೆಡ್ ಸೇರಿದಂತೆ 1 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇರದೇ ಇದ್ದುದರಿಂದ ವಿಷಯ ತಿಳಿದ ನೆರೆಹೊರೆಯವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸ್ಥಳೀಯ ಸಿಎಂಸಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಹೊತ್ತಿ ಉರಿದ ಮನೆ ➤‌ ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮನೆಬಿಟ್ಟು ತೆರಳಿದ ಬಾಲಕಿಯರನ್ನು ಹುಡುಕುತ್ತಿದ್ದ ವೇಳೆ ದಾರಿಯಲ್ಲಿ ಸಿಕ್ಕ ಅಮಾಯಕರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 11. ಇಬ್ಬರು ಬಾಲಕಿಯರು ಮನೆ ಬಿಟ್ಟು ತೆರಳಿದ್ದು, ಅವರನ್ನು ಹುಡುಕಿಕೊಂಡು ಬಂದ ಯುವಕರ ತಂಡವೊಂದು ದಾರಿಯಲ್ಲಿ ಸಿಕ್ಕಿದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿ ಆಟೋ ಚಾಲಕರೊಬ್ಬರ ಪುತ್ರಿ, ಆಕೆಯ ಸ್ನೇಹಿತೆ ಮತ್ತೋರ್ವ ಬಾಲಕಿಯ ಜೊತೆ ಮನೆಯಲ್ಲಿ ಹೇಳದೇ ಮನೆಬಿಟ್ಟು ತೆರಳಿದ್ದರು.‌ ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಸುಳಿವು ಸಿಗದೇ ಇದ್ದ ಹಿನ್ನೆಲೆ, ಕೆಲ ಸ್ವಯಂ ಘೋಷಿತ

ವಿಟ್ಲ: ಮನೆಬಿಟ್ಟು ತೆರಳಿದ ಬಾಲಕಿಯರನ್ನು ಹುಡುಕುತ್ತಿದ್ದ ವೇಳೆ ದಾರಿಯಲ್ಲಿ ಸಿಕ್ಕ ಅಮಾಯಕರಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲ್ಯಾಪ್ ಟಾಪ್ ಮಾರಾಟದಲ್ಲಿ ವಂಚನೆ ➤‌ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11. ಕಡಿಮೆ ದರದಲ್ಲಿ ಲ್ಯಾಪ್‌ಟಾಪ್‌ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 5.73 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಉದ್ಯಮಿಯೋರ್ವರು ಕಂಪ್ಯೂಟರ್‌ ಹಾಗೂ ಲ್ಯಾಪ್‌ಟಾಪ್‌ ಮೊದಲಾದ ಬಿಡಿಭಾಗಗಳನ್ನು ಮಾರಾಟ ಮಾಡುತ್ತಿದ್ದು, ಅವರಿಗೆ ಜೈಪುರ ವೈಶಾಲಿ ನಗರದ ಮಿರಾಕಲ್‌ ಟೆಕ್ನಾಲಜೀಸ್‌ನ ಮನೋಜ್‌ ಚೌರಾಸಿಯಾ ಎಂಬಾತ ಕರೆ ಮಾಡಿ ಕಡಿಮೆ ದರದಲ್ಲಿ ಲ್ಯಾಪ್‌ಟಾಪ್‌ ನೀಡುವುದಾಗಿ ತಿಳಿಸಿದ್ದ. ಅದರಂತೆ ಆಗಸ್ಟ್‌ ತಿಂಗಳಿನಲ್ಲಿ ಆತನಿಂದ ಎರಡು ಲ್ಯಾಪ್‌ಟಾಪ್‌ ಗಳನ್ನು

ಮಂಗಳೂರು: ಲ್ಯಾಪ್ ಟಾಪ್ ಮಾರಾಟದಲ್ಲಿ ವಂಚನೆ ➤‌ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಟ್ಟಣ: ರೈಲು ಹಳಿ ದಾಟುತ್ತಿದ್ದ ವೇಳೆ ಎಂಜಿನ್ ಢಿಕ್ಕಿ ➤‌ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ನೆಟ್ಟಣ, ಅ. 10. ಇಲ್ಲಿನ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನೆಟ್ಟಣದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ

ನೆಟ್ಟಣ: ರೈಲು ಹಳಿ ದಾಟುತ್ತಿದ್ದ ವೇಳೆ ಎಂಜಿನ್ ಢಿಕ್ಕಿ ➤‌ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 10. ಇಲ್ಲಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ

ಮಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕೆರೆಗೆ ಬಿದ್ದು ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ನಾರಾವಿ, ಅ 09. ಯುವತಿಯೊರ್ವರು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಮೃತಪಟ್ಟ ದಾರುಣ ಘಟನೆ ನಾರಾವಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ. ಸದಸ್ಯ ರಾಜವರ್ಮ ಜೈನ್ ಅವರ ಪುತ್ರಿ ಸುರಕ್ಷಾ ಜೈನ್ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವೇಣೂರು ಪೋಲಿಸ್ ಠಾಣಾ ಉಪನಿರೀಕ್ಷಕಿ ಸೌಮ್ಯ ಜೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ: ಕೆರೆಗೆ ಬಿದ್ದು ಯುವತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top