ಕ್ರೈಮ್ ನ್ಯೂಸ್

ಕಾಡುಹಂದಿ ದಾಳಿ ➤‌ ತಂದೆ- ಮಗ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 24. ಕಾಡು ಹಂದಿಗಳ ದಾಳಿಯಿಂದಾಗಿ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಬೋವಿಕ್ಕಾನದಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೋವಿಕ್ಕಾನ ವ್ಯಾಪಾರಿ ಅಬ್ದುಲ್ಲ (57) ಹಾಗೂ ಪುತ್ರ ಫಝಲ್ ರಹಮಾನ್ (24) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಅಂಗಡಿ ಬಂದ್ ಮಾಡಿ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಮುದಲಪ್ಪಾರ ಎಂಬಲ್ಲಿ ಕಾಡು ಹಂದಿಗಳ ತಂಡವು ರಸ್ತೆಗೆ ಅಡ್ಡವಾಗಿ ಬಂದಿದ್ದು, ಇಬ್ಬರ ಮೇಲೆ ದಾಳಿ ನಡೆಸಿದೆನ್ನಲಾಗಿದೆ.

ಕಾಡುಹಂದಿ ದಾಳಿ ➤‌ ತಂದೆ- ಮಗ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 23. ಹಠಾತ್ತನೆ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ. ಇವರು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ರಿಕ್ಷಾ ಪಾರ್ಕಿಂಗ್ ಬಳಿ ಹಠಾತ್ ಕುಸಿದು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೈಕ್ ಅಪಘಾತ- ಸವಾರ ಮೃತ್ಯು..! ➤‌ ರಸ್ತೆ ಗುಂಡಿಗೆ ಮತ್ತೊಂದು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಸ್ತೆ ಗುಂಡಿಗೆ ಬೈಕ್ ಬಿದ್ದು ಸವಾರ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆಗಸ್ಟ್ 18 ರಂದು ಸುಂಕದಕಟ್ಟೆ ಬಳಿ ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸುಪ್ರೀತ್ (44) ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೈಕ್ ಅಪಘಾತ- ಸವಾರ ಮೃತ್ಯು..! ➤‌ ರಸ್ತೆ ಗುಂಡಿಗೆ ಮತ್ತೊಂದು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಂ ಮೂಲಕ ಮೆಸೇಜ್ ➤‌ ಯುವಕನಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 23. ವಿದ್ಯಾರ್ಥಿನಿಗೆ ಇನ್ ಸ್ಟಾಗ್ರಾಂ ನಲ್ಲಿ ಮೆಸೇಜ್ ಮಾಡಿದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಕರ್ವೇಲು ನಿವಾಸಿ ಸಮೀರ್ ಎಂಬಾತ ಖಾಸಗಿ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಇನ್ ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದು, ಇದನ್ನು ಆಕೆ ಹೆತ್ತವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಅವರು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಆತನನ್ನು ಠಾಣೆಗೆ ಕರೆಯಿಸಿದ ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಂ ಮೂಲಕ ಮೆಸೇಜ್ ➤‌ ಯುವಕನಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ➤‌ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಸಂಭವಿಸಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಕನಕಮಜಲಿನ ಕೋಡಿ ಎಂಬಲ್ಲಿ ತಿರುವಿನ ಬಳಿ ತಲುಪುತ್ತಿದ್ದಂತೆಯೇ ವಿರುದ್ದ ದಿಕ್ಕಿನಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ➤‌ ಕಾರು ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದ ಸಹ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಮೃತರನ್ನು ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ (50) ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಡಿವೈಡರ್ ಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಇಂದು ನಡೆದಿದೆ. ಕಡಬದಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಪಂಕ್ಚರ್ ಆಗಿ ಕೆಮ್ಮಾಯಿ ಕೃಷ್ಣನಗರದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಡಿವೈಡರ್ ಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 22. ಪತಿಯೋರ್ವ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆಯ ಸಮೀಪ ನಡೆದಿದೆ. ಕೊಲೆಯಾದ ಮಹಿಳೆಯನ್ನು ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಹಾಗೂ ಆಕೆಯ ಪತಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂಲತಃ ಸೊರಬ ನಿವಾಸಿಯಾಗಿರುವ ಪೂರ್ಣಿಮಾ ಆಚಾರ್ಯ ಅವರನ್ನು ಕಳೆದ ಹದಿನಾರು ವರ್ಷಗಳ‌ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯರಿಗೆ

ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ ➤‌ ಜಿಮ್ ಮಾಡುತ್ತಿದ್ದ ವೇಳೆ ಎದೆನೋವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ವರ್ಕ್ ಔಟ್ ಮಾಡುತ್ತಿದ್ದ ವೇಳೆ ಗೃದಯಾಘಾತವಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ. ಬೆಳಗ್ಗೆ ಜಿಮ್‌ಗೆ ತೆರಳಿ ವರ್ಕೌಟ್ ಮಾಡುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ನಾಗರಭಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ದಾರಿಮಧ್ಯೆಯೇ ಗುರುಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರಾಗಿರುವ ಗುರುಲಿಂಗಸ್ವಾಮಿ ಹೊಳೀಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ ➤‌ ಜಿಮ್ ಮಾಡುತ್ತಿದ್ದ ವೇಳೆ ಎದೆನೋವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ➤‌ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 20. ಬೈಕ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಪಡಂಗಡಿ ಪೆರ್ನಮಂಜೆ ತಿರುವಿನಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮಾರುತಿ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಳ್ತಂಗಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ➤‌ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top