ಕ್ರೈಮ್ ನ್ಯೂಸ್

ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 05. ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕಣ್ಣೂರು ಮಾಡಾಯಿಯ ನಿಜಾಮ್ ಮತ್ತು ಮುಹಮ್ಮದ್ ತಾಹಾ ಎಂದು ಗುರುತಿಸಲಾಗಿದೆ. ನೀಲೇಶ್ವರ ಪಳ್ಳಿಕೆರೆ ಎಂಬಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ನೇತೃತ್ವದ ತಂಡವು ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿದ್ದವರ ಚಲನವಲನದ ಬಗ್ಗೆ ಗಮನಿಸಿದ ಪೊಲೀಸರು ತಪಾಸಣೆ ನಡೆಸಿದಾಗ ಎರಡು ಕಿಲೋ ಗಾಂಜಾ ಹಾಗೂ 25 ಗ್ರಾಂ ಎಂಡಿಎಂಎ ಮಾದಕ […]

ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆಯೋರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹಳೆಯಂಗಡಿ ಲೈಟ್ ಹೌಸ್ ನಿವಾಸಿ ನರ್ಸಿ(70) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ತಿಂಗಳುಗಳಿಂದ ಈಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದಾರೆ. ನರ್ಸಿ ಅವರು ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಮಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾವು ಕಡಿತದಿಂದ ಮೃತಪಟ್ಟ ಅಣ್ಣನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ತಮ್ಮನಿಗೂ ಹಾವು ಕಡಿತ- ಮೃತ್ಯು..!

(ನ್ಯೂಸ್ ಕಡಬ) newskadaba.com ಬಲರಾಮಪುರ, ಆ. 05. ಹಾವು ಕಡಿತದಿಂದ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ವ್ಯಕ್ತಿಯೂ ಹಾವು ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಉ.ಪ್ರದೇಶದ ಬಲರಾಮಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಅರವಿಂದ್ ಮಿಶ್ರಾ ಹಾಗೂ ಅವರ ಅಂತ್ಯಕ್ರಿಯೆಗೆ ಬಂದಿದ್ದ ತಮ್ಮ ಗೋವಿಂದ ಮಿಶ್ರಾ ಎಂದು ಗುರುತಿಸಲಾಗಿದೆ. ಗೋವಿಂದ ಮಿಶ್ರಾ ಅವರು ಲುಧಿಯಾನದಿಂದ ಭವಾನಿಪುರಕ್ಕೆ ಅಣ್ಣನ ಅಂತ್ಯ ಸಂಸ್ಕಾರಕ್ಕೆಂದು ಬಂದು, ವಿಧಿವಿಧಾನಗಳನ್ನೆಲ್ಲ ಮುಗಿಸಿ, ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿದಿದ್ದು, ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೇ ಅವರ ಜೊತೆಗೆ

ಹಾವು ಕಡಿತದಿಂದ ಮೃತಪಟ್ಟ ಅಣ್ಣನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ತಮ್ಮನಿಗೂ ಹಾವು ಕಡಿತ- ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೇಸ್ ಬುಕ್ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ➤ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ. ಲಕ್ಷ್ಮೀಕಾಂತ ಬೈಂದುರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಫೇಸ್ ಬುಕ್ ಖಾತೆಯಲ್ಲಿ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋಗಳು ಎಂದು ಬಿಂಬಿಸಿ, ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್ ಬುಕ್ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ➤ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 04. ಮನೆಯಲ್ಲೇ ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಈತ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಕ್ಷಣವೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಶೀಲಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ ವ್ಲಾಗರ್ ರಿಫಾ ಆತ್ಮಹತ್ಯೆ ಪ್ರಕರಣ ➤ ಪತಿ ಮೆಹನಾಝ್ ಬಂಧನ

(ನ್ಯೂಸ್ ಕಡಬ) newskadaba.com ಕೋಝಿಕ್ಕೋಡ್, ಆ. 04. ದುಬೈನಲ್ಲಿ ಆತ್ಮಹತೆಗೈದಿದ್ದಾಳೆಂದು ಹೇಳಲಾಗಿದ್ದ ವ್ಲಾಗರ್ ರಿಫಾ ಮೆಹ್ನು ಸಾವಿಗೆ ಸಂಬಂಧಿಸಿದಂತೆ ಅವರ ಪತಿ ಮೆಹನಾಝ್ ರನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿದೆ. ಇವರಿಬ್ಬರ ವಿವಾಹದ ವೇಳೆ ರಿಫಾ ಮೆಹ್ನು ಅಪ್ರಾಪ್ತೆಯಾಗಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆ ಪೋಕ್ಸೊ ಕಾಯ್ದೆಯಡಿ ಅವರ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಸರಗೋಡಿನಲ್ಲಿರುವ ಮೆಹನಾಝ್ ನನ್ನು ತಾಮರಶ್ಶೇರಿ ಡಿವೈಎಸ್ಪಿ ನೇತೃತ್ವದ ತನಿಖಾ ತಂಡವು ಕರೆದುಕೊಂಡು ಹೋಗಿದ್ದು, ಆತನನ್ನು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಾಹಿತಿ

ಕೇರಳ ವ್ಲಾಗರ್ ರಿಫಾ ಆತ್ಮಹತ್ಯೆ ಪ್ರಕರಣ ➤ ಪತಿ ಮೆಹನಾಝ್ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿಗೆ ಲಾರಿ ಢಿಕ್ಕಿ ➤ ವಿದ್ಯಾರ್ಥಿನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿನಿಯೋರ್ವಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಗಾಯಗೊಂಡ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ‌ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿನಿ ಗಾಯಗೊಂಡಿದ್ದು, ತಕ್ಷಣವೇ ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿಗೆ ಲಾರಿ ಢಿಕ್ಕಿ ➤ ವಿದ್ಯಾರ್ಥಿನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿರಳೆ, ತಿಗಣೆ ನಾಶಪಡಿಸಲು ಔಷಧ ಸಿಂಪಡಣೆ ➤ ಉಸಿರುಗಟ್ಟಿ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ಜಿರಳೆಯನ್ನು ನಾಶಪಡಿಸಲೆಂದು ಮನೆಯಲ್ಲಿ ಸಿಂಪಡಿಸಿದ್ದ ಔಷಧದಿಂದಾಗಿ ಆರು ವರ್ಷದ ಬಾಲಕಿ ಉಸಿರುಗಟ್ಟಿ ಮೃತಪಟ್ಟ ಘಟನೆ ವಸಂತನಗರದ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಮೃತ ಬಾಲಕಿಯನ್ನು ಅಹನಾ (6) ಎಂದು ಗುರುತಿಸಲಾಗಿದೆ. ಬಾಲಕಿಯ ಬಾಲಕಿಯ ತಂದೆ ವಿನೋದ್ ನಾಯರ್ ಹಾಗೂ ತಾಯಿಯೂ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲತಃ ಕೇರಳದವರಾದ ವಿನೋದ್ ನಾಯರ್ ಕುಟುಂಬವು ಸುಮಾರು 8 ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿತ್ತು. ಇವರು ವಾಸವಾಗಿದ್ದ ಕಟ್ಟಡದ 4 ಮನೆಗಳಲ್ಲಿ ಜಿರಳೆ ಕಾಟವಿದೆಯೆಂದು

ಜಿರಳೆ, ತಿಗಣೆ ನಾಶಪಡಿಸಲು ಔಷಧ ಸಿಂಪಡಣೆ ➤ ಉಸಿರುಗಟ್ಟಿ ಬಾಲಕಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 03. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಇಲ್ಲಿ‌ನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ಕಾರು ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿರಾಡಿ, ಆ. 03. ಕಾರು ಮತ್ತು ಬಸ್‌ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್‌ ಶರ್ಮಾ ಮತ್ತು ಓಂಕಾರ್‌ ಪ್ರಸಾದ್‌ ಎಂದು ಗುರುತಿಸಲಾಗಿದೆ. ಇವರು ಸಕಲೇಶಪುರದಿಂದ ರಾಮಕುಂಜಕ್ಕೆ ಕಾರಿನಲ್ಲಿ ಬರುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು,

ಶಿರಾಡಿ: ಕಾರು ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top