ಕ್ರೈಮ್ ನ್ಯೂಸ್

ನರ್ಮದಾ ನದಿಗೆ ಬಿದ್ದ ಬಸ್ ➤ 12 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 18. ಸೇತುವೆಯ ಮೇಲಿಂದ ನರ್ಮದಾ ನದಿಗೆ ಮಹಾರಾಷ್ಟ್ರದ ಬಸ್ ವೊಂದು ಉರುಳಿ ಬಿದ್ದು 12 ಪ್ರಯಾಣಿಕರು ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಧರ್ ಜಿಲ್ಲೆಯಲ್ಲಿ ಇಂದು ಬೆಳಂಬೆಳಗ್ಗೆ ನಡೆದಿದೆ. ಇಂದೋರ್’ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಖಲ್ಘಾಟ್ ಸಂಜಯ್ ಸೇತುವೆಯಿಂದ ನರ್ಮದಾ ನದಿಗೆ ಉರುಳಿ ಬಿದ್ದಿದೆ. ಪರಿಣಾಮ 12 ಮಂದಿ ಮೃತಪಟ್ಟಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ನರ್ಮದಾ ನದಿಗೆ ಬಿದ್ದ ಬಸ್ ➤ 12 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 18. ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು ನೀಡಿದ ದೂರಿನಂತೆ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಯನ್ನು ಸೋಮವಾರದಂದು ನಡೆಸಲಾಯಿತು. ಪಿ.ಡೀಕಯ್ಯರವರು ಜು. 8 ರಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದರು ಎಂದು ವರದಿ ಬಂದಿದ್ದವು. ಇದೀಗ ಅವರ ನಿಧನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು ಪೊಲೀಸರಿಗೆ ದೂರು

ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆ ➤ ಮಾಜಿ ಯೋಧ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 18. ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿ ಆರೋಪಿ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಖಾಸಗಿ ಕಂಪನಿಯ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ವಿದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಜು. 16ರಂದು ಕೆಲಸ ಮುಗಿಸಿ ತನ್ನ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ತನ್ನ ಬೈಕ್‌ನಲ್ಲಿ ಹಿಂಬಾಲಿಸಿ, ತಿಂಗಳಾಡಿ ದರ್ಬೆ ಎಂಬಲ್ಲಿ ಅಡ್ಡಗಟ್ಟಿ ಆಕೆಯೊಂದಿಗೆ ಮಾತನಾಡಲು ಯತ್ನಿಸಿ ಅಸಭ್ಯವಾಗಿ

ಪುತ್ತೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆ ➤ ಮಾಜಿ ಯೋಧ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನ ➤ ಆರೋಪಿ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಅಪ್ರಾಪ್ತೆಗೆ ಫೋನ್ ಮಾಡುವಂತೆ ಪೀಡಿಸುತ್ತಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಗರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಈತನ ಅಂಗಡಿಗೆ ಅಪ್ರಾಪ್ತ ವಿದ್ಯಾರ್ಥಿನಿ ತರಕಾರಿ ತರಲೆಂದು ಹೋದಾಗ ಮಾಡುವಂತೆ ಪೀಡಿಸುತ್ತಿದ್ದನು ಎಂದೆನ್ನಲಾಗಿದೆ. ಅಲ್ಲದೇ ಜು. 08ರಂದು

ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನ ➤ ಆರೋಪಿ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ…! ➤ ಕಾರು ಜಖಂ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 13. ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಬೀಸಿದ ಭಾರೀ ಗಾಳಿ ಬೀಸಿದ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಪರಿಣಾಮ ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ…! ➤ ಕಾರು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಹಾಡಹಗಲೇ ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 13. ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗಳಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಓರ್ವನ ಇನ್ನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಮರಕ್ಕಿಣಿ ಎಂಬಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಅಮಲು ಪದಾರ್ಥ ಸೇವಿಸಿದ ವ್ಯಕ್ತಿಯು ಈ ಕೃತ್ಯ ಎಸಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಡ್ಯನಡ್ಕ ಸಮೀಪದ ಸಾರಡ್ಕ ಎಂಬಲ್ಲಿ ಪೋಲೀಸ್ ಚೆಕ್ ಪೋಸ್ಟ್ ಇದ್ದರೂ ವ್ಯಕ್ತಿಯ ಮೇಲೆ ಈ ದಾಳಿ ನಡೆದಿರುವುದು ಸಾರ್ವಜನಿಕ ವಲಯದಲ್ಲಿ

ವಿಟ್ಲ: ಹಾಡಹಗಲೇ ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 12. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು ನಡೆದಿದೆ.   ಮೃತರನ್ನು ಮೆಸ್ಕಾಂ ಕುಂಬ್ರ ಶಾಖೆಯ ಪವರ್ ಮ್ಯಾನ್ ಬಸವರಾಜ್ (26) ಎಂದು ಗುರುತಿಸಲಾಗಿದೆ. ಬಸವರಾಜ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಕೆಲವು ಸಮಯಗಳಿಂದ ಕುಂಬ್ರ ಮೆಸ್ಕಾಂನಲ್ಲಿ ನಿರ್ವಹಿಸುತ್ತಿದ್ದರೆನ್ನಲಾಗಿದೆ.

ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ

(ನ್ಯೂಸ್ ಕಡಬ) newskadaba.com ಕೋಟ, ಜು. 12. ತಾಯಿಯು ಊಟ ಬಡಿಸದೇ, ನೀನೇ ಹೋಗಿ ಬಡಿಸಿಕೋ ಎಂದು ಹೇಳಿದ್ದಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ಸಕೊಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ಈತನ ತಾಯಿ ಲಕ್ಷ್ಮೀ ಅವರು, ಜೀವನೋಪಾಯ ಕ್ಕಾಗಿ ಕಾರ್ಕಡದ ತನ್ನ ಮನೆಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ ನಡೆಸುತ್ತಿದ್ದಾರೆ. ವಿಪರೀತ

ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ವಿವಿಧೆಡೆ ಜನರೇಟರ್ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 11. ಇಲ್ಲಿನ ನಗರ ಠಾಣಾ ವ್ಯಾಪ್ತಿಯ ದರ್ಬೆಯ ಹಿತ ಆಸ್ಪತ್ರೆ‌ ಹಾಗೂ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಶ್ರೀ ಸಾಯಿ ಲಾಡ್ಜ್ ಇಲ್ಲಿನ ಜನರೇಟರ್ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪಿ.ಎಸ್.ಐ ನೇತೃತ್ವದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಇಟ್ಟಿ ಪನ್ನಿಕರ್ ಬಿನ್ ಮ್ಯಾಥ್ಯು ಪನ್ನಿಕರ್ ಎಂದು ಗುರುತಿಸಲಾಗಿದೆ. ಬಂಧಿತನನ್ನು ಕಳವುಗೈದ ಬ್ಯಾಟರಿ ಸಹಿತ

ಪುತ್ತೂರಿನ ವಿವಿಧೆಡೆ ಜನರೇಟರ್ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯದ ಹಲವೆಡೆ ಮತ್ತೆ ಭೂಕಂಪನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 11. ಕೊಡಗಿನ ಗಡಿಯಲ್ಲಿ ಇಂದು ಸಂಜೆ 4 ಗಂಟೆಯ ಹೊತ್ತಿಗೆ ಮತ್ತೆ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ. ಪೆರಾಜೆ, ಅರಂತೋಡು, ಮರ್ಕಂಜ, ಪೆರಾಜೆ, ಚೆಂಬು, ತೊಡಿಕಾನ, ಉಬರಡ್ಕ ಮತ್ತಿತರ ಪ್ರದೇಶಗಳಲ್ಲಿ ಕಂಪನ ಆಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಲವವೆಡೆ ಲಘು ಕಂಪನ ಅನುಭವವಾಗಿದ್ದು, ಅನೇಕ ಕಡೆ ದೊಡ್ಡ ಶಬ್ದದ ಅರಿವಾಗಿದೆ ಎನ್ನಲಾಗಿದೆ. ನಿನ್ನೆ ಕೂಡಾ ಇದೇ ಭಾಗದಲ್ಲಿ 1.8 ತೀವ್ರತೆಯ ಲಘು ಕಂಪನವಾಗಿತ್ತು ಎಂದು ತಿಳಿದು ಬಂದಿದೆ.

ಸುಳ್ಯದ ಹಲವೆಡೆ ಮತ್ತೆ ಭೂಕಂಪನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top