ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ಆರೋಪಿ ವೈದ್ಯ ಅರೆಸ್ಟ್..!!

  (ನ್ಯೂಸ್ ಕಡಬ) newskadaba.com ವಿಟ್ಲ, ಜು. 11. ವೈದ್ಯನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಪ್ರಕರಣದಡಿ ವೈದ್ಯನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂದು ಗುರುತಿಸಲಾಗಿದೆ. 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. […]

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ಆರೋಪಿ ವೈದ್ಯ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಜು. 11. ಕಾಂಗ್ರೆಸ್ ಮುಖಂಡರೋರ್ವರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ಗಿರೀಶ್ ಕಂಬನೂರ್ (42) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಆದರೆ, ಹಳೆ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಗಿರೀಶ ರವರು ಶಹಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಿದ್ದ ವೇಳೆ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಪತಿ ಮನೆಯಲ್ಲಿ ಕಿರುಕುಳ- ಪತ್ನಿ ನಿಗೂಢ ಸಾವು ➤ ಕೊಲೆ ಶಂಕೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು.11. ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆ ಉಳ್ಳಾಲದ ಮುಕ್ಕಚ್ಚೇರಿ ಎಂಬಲ್ಲಿ ಭಾನುವಾರದಂದು ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಳನ್ನು ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹ ಮಾಡಿಕೊಡಲಾಗಿದ್ದು, ದಂಪತಿಗೆ 8 ತಿಂಗಳ ಗಂಡು ಮಗುವಿದೆ. ವಿವಾಹವಾದದ ಆರಂಭದಲ್ಲೇ ದಂಪತಿ ನಡುವೆ ಕುಟುಂಬ ಕಲಹ ನಡೆಯಿತ್ತಿದ್ದು, ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿಗಳ ಕಲಹವನ್ನು ಇತ್ಯರ್ಥಗೊಳಿಸುತ್ತಿದ್ದರು

ಉಳ್ಳಾಲ: ಪತಿ ಮನೆಯಲ್ಲಿ ಕಿರುಕುಳ- ಪತ್ನಿ ನಿಗೂಢ ಸಾವು ➤ ಕೊಲೆ ಶಂಕೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಮಾರುತಿ 800 ಕಾರು ➤‌ ಕಾರು ಪತ್ತೆಯಾದರೂ ಕಾರಿನಲ್ಲಿದ್ದವರ ಸುತ್ತ ಕಾಡುತ್ತಿದೆ ಅನುಮಾನದ ಹುತ್ತ..

(ನ್ಯೂಸ್ ಕಡಬ) newskadaba.com ಕಡಬ, ಜು.10. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ವಿಟ್ಲದ ಕುಂಡಡ್ಕ ನಿವಾಸಿ ಧನುಷ್ (26) ಹಾಗೂ ಮಂಜೇಶ್ವರ ನಿವಾಸಿ ಧನುಷ್(21) ಎಂಬವರು ಗುತ್ತಿಗಾರಿನಲ್ಲಿ ಮರದ ಕೆಲಸ ಮಾಡುತ್ತಿದ್ದು, ಶನಿವಾರ ತಡರಾತ್ರಿ ವಿಟ್ಲದಿಂದ ಗುತ್ತಿಗಾರಿಗೆ ತೆರಳುತ್ತಿದ್ದ ವೇಳೆ ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು

ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಮಾರುತಿ 800 ಕಾರು ➤‌ ಕಾರು ಪತ್ತೆಯಾದರೂ ಕಾರಿನಲ್ಲಿದ್ದವರ ಸುತ್ತ ಕಾಡುತ್ತಿದೆ ಅನುಮಾನದ ಹುತ್ತ.. Read More »

ಕರಾವಳಿ, ಕ್ರೈಮ್ ನ್ಯೂಸ್

ಬೈತಡ್ಕ: ಸಾರ್ವಜನಿಕರ ಸಹಾಯದಿಂದ ಹೊಳೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದ ಅಧಿಕಾರಿಗಳು ➤ ಕಾರಿನಲ್ಲಿದ್ದ ಇಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಜು.10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದ್ದು ಇದೀಗ ನೀರುಪಾಲಾದವರ ಗುರುತು ಪತ್ತೆಯಾಗಿದೆ. ನೀರುಪಾಲಾದ ಯುವಕರನ್ನು ವಿಟ್ಲದ ಕುಂಡಡ್ಕ ನಿವಾಸಿ ಧನುಷ್ (26) ಹಾಗೂ ಮಂಜೇಶ್ವರ ನಿವಾಸಿ ಧನುಷ್(21) ಎಂದು ಗುರುತಿಸಲಾಗಿದೆ. ಇವರು ಶನಿವಾರ ತಡರಾತ್ರಿ ಮಾರುತಿ 800 ಕಾರಿನಲ್ಲಿ ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ವೇಳೆ ಬೈತಡ್ಕ ಗೌರಿಹೊಳೆಗೆ ಬಿದ್ದಿದ್ದು, ಈ ದೃಶ್ಯವು ಬೈತಡ್ಕ

ಬೈತಡ್ಕ: ಸಾರ್ವಜನಿಕರ ಸಹಾಯದಿಂದ ಹೊಳೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದ ಅಧಿಕಾರಿಗಳು ➤ ಕಾರಿನಲ್ಲಿದ್ದ ಇಬ್ಬರು ನೀರುಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ದಾಳಿ ➤ ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 09. ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೇರಳ ಮೂಲದ ಶಾನೂಫ್ ಅಬ್ದುಲ್ ಗಫೂರ್ (21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್ (22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮುಹಮ್ಮದ್ ರಿಶಿನ್(22), ರಿಜಿನ್ ರಿಯಾಝ್(22)

ಮಂಗಳೂರು: ಸಿಸಿಬಿ ದಾಳಿ ➤ ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಂತೂರು: ಆಟೋ ರಿಕ್ಷಾ – ಟಾಟಾ ಏಸ್ ನಡುವೆ ಅಪಘಾತ ➤ ಕಡಬದ ರಿಕ್ಷಾ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.08. ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ಅಪರಾಹ್ನ ನಡೆದಿದೆ. ಗಾಯಾಳು ಚಾಲಕನನ್ನು ಮರ್ಧಾಳ ಸಮೀಪದ ಸುಳ್ಯ ಮೇಪತ್ತಪಾಲು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ

ಕುಂತೂರು: ಆಟೋ ರಿಕ್ಷಾ – ಟಾಟಾ ಏಸ್ ನಡುವೆ ಅಪಘಾತ ➤ ಕಡಬದ ರಿಕ್ಷಾ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಓಮ್ನಿ ಮೇಲೆ ಪಲ್ಟಿಯಾದ ಸರಕು ಸಾಗಾಟದ ಲಾರಿ..! ➤ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 08. ಸರಕು ಸಾಗಾಟದ ಲಾರಿಯೊಂದು ಓಮ್ನಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓಮ್ನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮ್ನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಓಮ್ನಿ ಮೇಲೆ ಪಲ್ಟಿಯಾದ ಸರಕು ಸಾಗಾಟದ ಲಾರಿ..! ➤ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಲೇಡ್ ನಿಂದ ಕತ್ತು ಹಾಗೂ ಕೈ ಕೊಯ್ದುಕೊಂಡು ಠಾಣೆಯ ಎದುರೇ ವಿಕೃತಿ ಮೆರೆದ ಯುವಕ…!

(ನ್ಯೂಸ್ ಕಡಬ) newskadaba.com ಕುಣಿಗಲ್, ಜು. 08. ಕುಟುಂಬ ಕಲಹದಿಂದ ಬೇಸತ್ತ ಯುವಕನೋರ್ವ ಕುಣಿಗಲ್ ಪೊಲೀಸ್ ಠಾಣೆ ಎದುರೇ ಬ್ಲೇಡ್ ನಿಂದ ಕತ್ತು ಹಾಗೂ ಕೈ ಕೊಯ್ದುಕೊಂಡು ಹುಚ್ಚಾಟ ಮೆರೆದ ಘಟನೆ ಶುಕ್ರವಾರದಂದು ನಡೆದಿದೆ. ಹುಚ್ಚಾಟ ಮೆರೆದ ಯುವಕನನ್ನು ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಬಿಳಿದೇವಾಲಯ ಗ್ರಾಮದ ನಿವಾಸಿ ಅಬ್ರಾಜ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದಾಗಿ ಅಬ್ರಾಜ್ ನ ವಿರುದ್ದ ಪತ್ನಿ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಿದ್ದು, ಈ ವೇಳೆ ಅಲ್ಲಿಗೆ ಬಂದ ಅಬ್ರಾಜ್

ಬ್ಲೇಡ್ ನಿಂದ ಕತ್ತು ಹಾಗೂ ಕೈ ಕೊಯ್ದುಕೊಂಡು ಠಾಣೆಯ ಎದುರೇ ವಿಕೃತಿ ಮೆರೆದ ಯುವಕ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಾಪು‌, ಜು. 08. ಟ್ಯಾಂಕರ್ ವೊಂದರಿಂದ ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಎಂಬಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗಿದ್ದು, ಸ್ಥಳೀಯರು ಭಯಭೀತಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ‌ ದೌಡಾಯಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಘಟನಾ ಸ್ಥಳಕ್ಕೆ ಕಾಪು‌ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ ➤ ಸಾರ್ವಜನಿಕರಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top