ಕ್ರೈಮ್ ನ್ಯೂಸ್

ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನ ಆಸ್ತಿ ಮುಟ್ಟುಗೋಲು ಹಾಕಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ. ಆರೋಪಿಯನ್ನು ಬಾತೀಶ್ ಎಂದು ಗುರುತಿಸಲಾಗಿದೆ. ಈತ ಅಕ್ರಮವಾಗಿ ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜುಲೈ 3 ರಂದು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 95 ಕೆಜಿ ದನದ ಮಾಂಸ, ತೂಕದ ತಕ್ಕಡಿ, ಕತ್ತಿಗಳು, ಮರದ ದಿಮ್ಮಿ ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದರು. ಆರೋಪಿಯು ಎ ಕೆ […]

ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾಲು ಜಾರಿ ಬಿದ್ದಿರುವ ಅತ್ತೆಗೆ ಚಿಕಿತ್ಸೆ ಕೊಡಿಸದೇ ಮನೆಯ ಶೌಚಗೃಹದಲ್ಲಿ ಕೂಡಿಹಾಕಿ ಸರಿಯಾಗಿ ಊಟ ನೀಡದೇ ಶಿಕ್ಷೆ ನೀಡುತ್ತಿದ್ದ ಮಾಹಿತಿ ತಿಳಿದ ಹಿರಿಯ ನಾಗರಿಕ ಸಮಿತಿಯು, ಗಿರಿಜಾ(70) ಅವರನ್ನು ಶೌಚಗೃಹದಿಂದ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿಂದ ವರದಿಯಾಗಿದೆ. ಮನೆಯ ಜಗಲಿಯಲ್ಲಿ ಕಾಲು ಜಾರಿ ಬಿದ್ದು ಗಾಯವಾಗಿದ್ದ ನನಗೆ ಮಗ ಮತ್ತು ಸೊಸೆ ಚಿಕಿತ್ಸೆ ಕೊಡಿಸದೇ, ನೋವಿನಿಂದ ನಡೆಯಲು

ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ➤ ಲಾರಿ‌ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 07. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅಟೋ ಚಾಲಕರು ತಡೆಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ಉಪ್ಪಿನಂಗಡಿ ಕಣಿಯೂರು ಎಂಬಲ್ಲಿ ನಡೆದಿದೆ.   ಬೆಳಾಲು ಕಡೆಯಿಂದ ಉಪ್ಪಿನಂಗಡಿ ಮಾರ್ಗವಾಗಿ ಚಲಿಸುತ್ತಿದ್ದ ಲಾರಿ ಚಾಲಕ ಕಣಿಯೂರು ಎಂಬಲ್ಲಿ ರಿಕ್ಷಾ ಚಾಲಕರಿಗೆ ಸೈಡ್ ಬಿಡದೆ ರಿಕ್ಷಾ ಚಾಲಕರೊಂದಿಗೆ ವಾಗ್ವಾದಕ್ಕಿಳಿದಿದ್ದು, ಈ ವೇಳೆ ಅನುಮಾನಗೊಂಡ ಚಾಲಕರು ಲಾರಿಯನ್ನು ತಡೆ ಹಿಡಿದು, ಬಳಿಕ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದಾಗ ಚಾಲಕ ತನ್ನಲ್ಲಿ

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ➤ ಲಾರಿ‌ ಚಾಲಕ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ ➤ ಮೂವರು ಮೃತ್ಯು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾರ್ಮಿಕರು ಉಳಿದುಕೊಂಡ ಶೆಡ್ ನ ಮೇಲೆ ಗುಡ್ಡ ಕುಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಪಾಲಕ್ಕಾಡು ನಿವಾಸಿ ಬಿಜು (46) ಸಂತೋಷ್ ಆಲಪ್ಪುರ ಹಾಗೂ ಕೊಟ್ಟಾಯಂ ನಿವಾಸಿ ಬಾಬು (46) ಎಂದು ಗುರುತಿಸಲಾಗಿದೆ. ಗಾಯಾಳು ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ ➤ ಮೂವರು ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಣುಬಿಗಿದು ಯುವಕ ಆತ್ಮಹತ್ಯೆ ➤ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ ಯುವಕ

(ನ್ಯೂಸ್ ಕಡಬ) newskadaba.com ಮಾಣಿ, ಜು. 06. ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಸಂಜೆ ಕೊಡಾಜೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಝೀರ್ ಎಂದು ಗುರುತಿಸಲಾಗಿದೆ. ನಝೀರ್ ಇಂದು ಸಂಜೆ ಕೊಡಜೆಯ ಪ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ಬುಡೋಳಿ ನಿವಾಸಿಗಳಾದ ಇವರು ಇತ್ತೀಚೆಗೆ ಕೊಡಾಜೆಯಲ್ಲಿ ವಾಸಿಸುತ್ತಿದ್ದರು. ಉಪ್ಪಳದಲ್ಲಿ ಕೆಲಸದಲ್ಲಿದ್ದ ಈತ ಎರಡು ದಿನಗಳ‌ ಹಿಂದೆಯಷ್ಟೇ ಮನೆಗೆ ಬಂದಿದ್ದು, ಇಂದು‌ ಮನೆಯಲ್ಲಿ ಎಲ್ಲರೂ ಇದ್ದ

ನೇಣುಬಿಗಿದು ಯುವಕ ಆತ್ಮಹತ್ಯೆ ➤ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ ಯುವಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 06. ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಸಾಲ ಉತ್ಪನ್ನಗಳನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ನಡೆದಿದೆ. ಬಂಧಿತ ಆರೋಪಿಯನ್ನು ಮುಂಡಿತ್ತಡ್ಕ ಯೂಸುಫ್ ಶರೀಫ್ ಎಂದು ಗುರುತಿಸಲಾಗಿದೆ. ಪೆರ್ಲದಲ್ಲಿ ವಾಹನ ತಪಾಸಣಾ ನಿರತರಾಗಿದ್ದ ಪೊಲೀಸರು ಈತ ಚಲಾಯಿಸಿಕೊಂಡು ಬರುತ್ತಿದ್ದ ಕಾರನ್ನು ಪರಿಶೀಲಿಸಿದಾಗ 3,500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

ಅಕ್ರಮವಾಗಿ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳ ಸಾಗಾಟ ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಉಳ್ಳಾಲದಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 06. ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹವು ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರದಂದು ಪತ್ತೆಯಾಗಿದೆ. ಮೃತ ಯುವಕನನ್ನು ಅಶ್ವಿತ್(19) ಎಂದು ಗುರುತಿಸಲಾಗಿದೆ. ಈತ ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿನ ತೊಟ್ಟಿಲು ತೂಗುವ ಸಮಾರಂಭದಲ್ಲಿ ಪಾಲ್ಗೊಂಡು, ಬಳಿಕ ಹರ್ಷ ಎಂಬಾತನೊಂದಿಗೆ ಸಮೀಪದ ನೇತ್ರಾವತಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಅಶ್ವಿತ್

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಉಳ್ಳಾಲದಲ್ಲಿ ಪತ್ತೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಗುಂಡ್ಯ, ಜು. 06. ಕಾರು ಮತ್ತು ಬಸ್ಸು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಚಾಲಕ ಹಾಗೂ ಮಗುವಿಗೆ ಗಾಯಗಳಾದ ಘಟನೆ ರಾ ಹೆ. 75ರ ಗುಂಡ್ಯ ಸಮೀಪದ ಬರ್ಚಿನ ಹಳ್ಳ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಇಕ್ಬಾಲ್ ಹಾಗೂ ನಿಹಾಲ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿಗೆ ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐದು ಪ್ರಯಾಣಿಕರಿದ್ದು ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

ಗುಂಡ್ಯ: ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಸಿರೋಡ್: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 06. ಶಾಂತಿಅಂಗಡಿ ನಿವಾಸಿ ಮಹಮ್ಮದ್ ಆಸೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫಾಲ್ ಹಾಗೂ ಮಹಮ್ಮದ್ ನೌಶೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಆಸಿಫ್ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಸೋಮವಾರ ಮಧ್ಯರಾತ್ರಿ 1 ಗಂಟೆಯ ವೇಳೆಗೆ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಚೂರಿಯಿಂದ ಇರಿದು‌ ಆಸಿಪೊ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.

ಬಿಸಿರೋಡ್: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಕಾಳುಮೆಣಸು ಕಳ್ಳತನ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 05. ಕಳ್ಳರು ಇಲ್ಲಿನ ಮನೆಯೊಂದರಿಂದ ಕದ್ದಿದ್ದ 10 ಗೋಣಿ ಕಾಳುಮೆಣಸನ್ನು ಸಾಗಿಸುತ್ತಿದ್ದ ವೇಳೆ ಬೆಳ್ಳಾರೆ ಠಾಣಾ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಳಂಜಿ ಮನೆ ನಿವಾಸಿ ಮಂಜು, ಕೊಡಿಯಭೈಲು ಮನೆ ನಿವಾಸಿ ಪ್ರವೀಣ, ಜಾಲ್ಸೂರು ಗ್ರಾಮದ ಬರ್ಪೆಡ್ಕ ನಿವಾಸಿ ಪವನ್ ಕುಮಾರ್ ಹಾಗು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಬ್ದುಲ್ ಬಾಶೀತ್ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ಒಟ್ಟು ಐವರು ಭಾಗಿಯಾಗಿದ್ದು ಇನ್ನೊಬ್ಬ

ಬೆಳ್ಳಾರೆ: ಕಾಳುಮೆಣಸು ಕಳ್ಳತನ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top