ಕ್ರೈಮ್ ನ್ಯೂಸ್

ಪುತ್ತೂರು: ತೆಂಗಿನ ಸಿಪ್ಪೆಯ ರಾಶಿಗೆ ತಗುಲಿದ ಬೆಂಕಿ ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 29. ತೆಂಗಿನಕಾಯಿ ಸಿಪ್ಪೆ ಮತ್ತು ಕಟ್ಡಿಗೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಕೆಮ್ಮಾಯಿಯಲ್ಲಿ ವರದಿಯಾಗಿದೆ. ಕೆಮ್ಮಾಯಿ ನಿವಾಸಿ ಇಬ್ರಾಹಿಂ ಎಂಬವರು ಮನೆಯ ಪಕ್ಕದಲ್ಲಿ ರಾಶಿ ಹಾಕಿದ್ದ ತೆಂಗಿನಕಾಯಿ ಸಿಪ್ಪೆ ಮತ್ತು ಕಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ತೂರು: ತೆಂಗಿನ ಸಿಪ್ಪೆಯ ರಾಶಿಗೆ ತಗುಲಿದ ಬೆಂಕಿ ➤ ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಡುಪ್ರಾಣಿ ಬೇಟೆ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಶಿರೂರು, ಜೂ. 29. ಕಾಡುಪ್ರಾಣಿಯನ್ನು ಶಿಕಾರಿ ನಡೆಸಿ ಕೊಂದ ಬೇಟೆಗಾರರನ್ನು ಪೊಲೀಸರು ಬಂಧಿಸಿದ ಘಟನೆ ಶಿರೂರಿನಲ್ಲಿ ನಡೆದಿದೆ. ಬಂಧಿತ ಆರೋಪಗಳನ್ನು ಬ್ರಹ್ಮಾವರದ ಚೇರ್ಕಾಡಿ ಗ್ರಾಮದ ಪೇತ್ರಿ ನಿವಾಸಿಗಳಾದ ರಾಘವೇಂದ್ರ, ಪ್ರಶಾಂತ್, ಅರುಣ್, ಚೇತನ್ ಹಾಗೂ ದೀಕ್ಷಿತ್ ಎಂದು ಗುರುತಿಸಲಾಗಿದೆ. ಶಿರೂರು ಪರಿಸರದಲ್ಲಿ ಶಿಕಾರಿ ನಡೆಸಿದ ತಂಡವೊಂದು ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಶಿರೂರು ಮೂರುಕೈಯಿಂದ ಸಾಯ್ದರಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು, ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಬೇಟೆಯಾಡಿರುವುದು

ಕಾಡುಪ್ರಾಣಿ ಬೇಟೆ ➤ ಆರೋಪಿಗಳು ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆಗೆ ನುಗ್ಗಿ ನವಜಾತ ಶಿಶುವನ್ನು ಎಳೆದೊಯ್ದು ಕಚ್ಚಿ ಕೊಂದ ಬೀದಿನಾಯಿ..!!

(ನ್ಯೂಸ್ ಕಡಬ) newskadaba.com ಪಾಣಿಪತ್, ಜೂ. 29. ಬೀದಿ ನಾಯಿಯೊಂದು ನವಜಾತ ಶಿಶುವನ್ನು ಎಳೆದೊಯ್ದು ಕಚ್ಚಿದ ಪರಿಣಾಮ ಶಿಶು ಮೃತಪಟ್ಟ ಘಟನೆ ಪಾಣಿಪತ್ ನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಎರಡು ದಿನಗಳ ಗಂಡು ಶಿಶುವೊಂದು ಆಸ್ಪತ್ರೆಯಲ್ಲಿ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ವೇಳೆ, ಒಳನುಗ್ಗಿದ ಬೀದಿ ನಾಯಿಯೊಂದು ಮಗುವನ್ನು ಹೊರಗಡೆ ಎಳೆದೊಯ್ದು ಕಚ್ಚಿ ಗಾಯಗೊಳಿಸಿದೆ. ಈ ಘಟನೆ ಯಾರ ಗಮನಕ್ಕೂ ಬಾರದೇ ತಡವಾಗಿ ಬೆಳಕಿಗೆ ಬಂದಿದೆ. ಆದರೆ ಅದಾಗಲೇ ಮಗು ಮೃತಪಟ್ಟಿತ್ತು. ಸಿಸಿಟಿವಿ ಪರಿಶೀಲಿಸಿದಾಗ ತಡರಾತ್ರಿ ಎರಡು ಗಂಟೆಯ

ಆಸ್ಪತ್ರೆಗೆ ನುಗ್ಗಿ ನವಜಾತ ಶಿಶುವನ್ನು ಎಳೆದೊಯ್ದು ಕಚ್ಚಿ ಕೊಂದ ಬೀದಿನಾಯಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಮಗುವನ್ನು ಜೊತೆಗೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ- ಮೃತ್ಯು..! ➤ ಅದೃಷ್ಟವಶಾತ್ ಬದುಕುಳಿದ ಮಗು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 29. ಮಗುವನ್ನು ಜೊತೆಗೆ ಕಟ್ಟಿಕೊಂಡು ತಾಯಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತಳೂರು ದಯಾನಂದ ಎಂಬವರ ಪತ್ನಿ ಗೀತಾ ಎಂದು ಗುರುತಿಸಲಾಗಿದೆ. ಇವರು ಎನ್.ಎಮ್.ಸಿ ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಮಗು ಅದೃಷ್ಟವಶಾತ್ ಕೆರೆಯೊಳಗಿದ್ದ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸ್ಥಳೀಯರ ಸಹಾಯದಿಂದ ರಕ್ಷಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ: ಮಗುವನ್ನು ಜೊತೆಗೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ- ಮೃತ್ಯು..! ➤ ಅದೃಷ್ಟವಶಾತ್ ಬದುಕುಳಿದ ಮಗು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇಣುಬಿಗಿದ ಸ್ಥಿತಿಯಲ್ಲಿ ಎಎಸ್ಐ ಮೃತದೇಹ ಪತ್ತೆ..!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 29. ಇಲ್ಲಿನ ಸ್ಪೆಷಲ್ ಬ್ರಾಂಚ್ ಎಎಸ್ಐ ಓರ್ವರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಅಝೀಝ್ ಎಂದು ಗುರುತಿಸಲಾಗಿದೆ. ಇವರ ಮೃತದೇಹವು ವೆಳ್ಳರಿಕುಂಡುವಿನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಮುಂದುವರಿಸಿದ್ದಾರೆ.

ನೇಣುಬಿಗಿದ ಸ್ಥಿತಿಯಲ್ಲಿ ಎಎಸ್ಐ ಮೃತದೇಹ ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಪಾತ್ರೆಗಳ ಕಳವು ಪ್ರಕರಣ ➤ ಓರ್ವ ಅಂದರ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 29. ಒಂಟಿ ಮಹಿಳೆ ವಾಸವಿದ್ದ ಮನೆಯ ಹೊರಗಡೆ ತೊಳೆದಿಟ್ಟಿದ್ದ ಪಾತ್ರೆಗಳನ್ನು ಕಳ್ಳತನಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಅಗರಂಗಡಿ ನಿವಾಸಿ ಪ್ರವೀಣ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಈತನ ಸಹೋದರ ಸತೀಶ್ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಜೂ. 25ರಂದು ಮನೆಯ ಹೊರಗಡೆ ಇದ್ದ ಸುಮಾರು 3500ರೂ. ಮೌಲ್ಯದ ಪಾತ್ರೆಗಳನ್ನು ಕಳ್ಳತನಗೈದಿದ್ದರು. ಈ ಕುರಿತು ಅಗರಂಗಡಿ ನಿವಾಸಿ ಪದ್ಮನಾಭ ನಾಯಕ್ ಅವರು ನೀಡಿದ ದೂರಿನಂತೆ

ಬಂಟ್ವಾಳ: ಪಾತ್ರೆಗಳ ಕಳವು ಪ್ರಕರಣ ➤ ಓರ್ವ ಅಂದರ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆ..!! ➤ ಕೊಲೆ ಅಥವಾ ಅಪಘಾತ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 29. ಇಲ್ಲಿನ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾದ ಘಟನೆ ಇಂದು ಬೆಳಕಿಗೆ ಬಂದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಕುರಿತು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ಯಾರನ್ನಾದರೂ ಹತ್ಯೆ ಮಾಡಲಾಗಿದೆಯೇ ಅಥವಾ ಅಪಘಾತದ ಗಾಯಾಳುಗಳು ಇಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸೃಷ್ಠಿಯಾಗಿವೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ

ವಿಟ್ಲ: ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆ..!! ➤ ಕೊಲೆ ಅಥವಾ ಅಪಘಾತ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭೂಕಂಪನದ ಆತಂಕದ ಬೆನ್ನಲ್ಲೇ ಮನೆ ಮೇಲೆ ಉರುಳಿಬಿದ್ದ ಬಂಡೆಕಲ್ಲು..! ➤ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 28. ಕೊಡಗಿನ ವಿವಿಧೆಡೆ ಉಂಟಾದ ಭೂಕಂಪನದ ಭೀತಿಯ ನಡುವೆಯೇ ಕರಿಕೆ ಗ್ರಾ.ಪಂ ವ್ಯಾಪ್ತಿಯ ಕುಂಡತ್ತಿಕಾನ ಗ್ರಾಮದಲ್ಲಿ ಬಂಡೆಯೊಂದು ಮನೆಯ ಮೇಲೆ ಉರುಳಿರುವ ಘಟನೆ ವರದಿಯಾಗಿದೆ ಜೂ. 26ರ ಮಧ್ಯರಾತ್ರಿ ಜೋರಾಗಿ ಮಳೆ ಸುರಿದ ಪರಿಣಾಮ ವಾರ್ಡ್ ನಂ.3ರ ನಿವಾಸಿ ಜಾನಕಿ ಎಂಬವರ ಮನೆಯ ಶೀಟ್ ನ ಮೇಲೆ ಬಂಡೆಕಲ್ಲೊಂದು ಉರುಳಿ ಬಿದ್ದ ಪರಿಣಾಮ ಮನೆಯ ಮೇಲ್ಛಾಣಿ ಮತ್ತು ಅಡುಗೆ ಕೋಣೆ ಸಂಪೂರ್ಣ ಹಾನಿಗೀಡಾಗಿದ್ದು, ವಸ್ತುಗಳೆಲ್ಲವೂ ಧ್ವಂಸಗೊಂಡಿದೆ. ಅದೃಷ್ಟವಶಾತ್ ಪಕ್ಕದ ಕೋಣೆಯಲ್ಲೇ

ಭೂಕಂಪನದ ಆತಂಕದ ಬೆನ್ನಲ್ಲೇ ಮನೆ ಮೇಲೆ ಉರುಳಿಬಿದ್ದ ಬಂಡೆಕಲ್ಲು..! ➤ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗನಿಂದಲೇ ತಂದೆಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ತುಮಕೂರು, ಜೂ. 28. ಕ್ಷುಲ್ಲಕ ಕಾರಣಕ್ಕೆ ಮಗನೋರ್ವ ತಂದೆಯನ್ನೆ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಆಸಿಫ್ (56) ಎಂದು ಗುರುತಿಸಲಾಗಿದೆ. ಮಗ ಇಮ್ರಾನ್ ಬಂಧಿತ ಆರೋಪಿಯಾಗಿದ್ದಾನೆ. ತಂದೆ- ಮಗನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಘಟನೆಯ ಕುರಿತು ಜಯನಗರ ಪೊಲೀಸ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಗನಿಂದಲೇ ತಂದೆಯ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್ ಗಳ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಮಹಿಳೆಯ ಕೈ ಮೇಲೆ ಹರಿದ ಲಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಹಿಳೆಯ ಕೈ ಮೇಲೆ ಲಾರಿ ಹರಿದ ಘಟನೆ ಕೆಪಿಟಿ ಜಂಕ್ಷನ್ ನಲ್ಲಿ ನಡೆದಿದೆ. ಗಾಯಾಳು ಮಹಿಳೆಯನ್ನು ಮರಿಯಮ್ಮ(47) ಎಂದು ಗುರುತಿಸಲಾಗಿದೆ. ಹನೀಫ್ ಎಂಬವರು ಕೆಪಿಟಿಯ ಪೆಟ್ರೋಲ್ ಪಂಪ್ ನಲ್ಲಿ ಬೈಕ್ ಪೆಟ್ರೋಲ್ ಹಾಕಿಸಿ ವಿಟ್ಲ ಕಡೆಗೆ ಹೋಗಲು ಹೆದ್ದಾರಿ ಪ್ರವೆಶಿಸಿದ್ದರು. ಅವಾಗ ವಿರುದ್ದ ದಿಕ್ಕಿನಿಂದ ಬಂದ ಬೈಕೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕಿನ ಹಿಂಬದಿ ಕುಳಿತಿದ್ದ ಮರಿಯಮ್ಮ ಎಂಬವರು

ಮಂಗಳೂರು: ಬೈಕ್ ಗಳ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಮಹಿಳೆಯ ಕೈ ಮೇಲೆ ಹರಿದ ಲಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top