ಕ್ರೈಮ್ ನ್ಯೂಸ್

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಬಾಟಲಿ ಎಸೆದ ದುಷ್ಕರ್ಮಿಗಳು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಜೂ. 25. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಲೀಪ್ ಹೆಗ್ಡೆ ಎಂಬವರ ಮನೆ ಮೇಲೆ ಯಾರೋ ದುಷ್ಕರ್ಮಿಗಳು ಬಿಯರ್ ಬಾಟಲ್ ಎಸೆದಿರುವ ಘಟನೆ ಶುಕ್ರವಾರದಂದು ತಡರಾತ್ರಿ ನಡೆದಿದೆ. ರಾಜಕೀಯ ದುರುದ್ದೇಶಕ್ಕಾಗಿ ದುಷ್ಕರ್ಮಿಗಳು ಮನೆಯ ಮೇಲೆ ಬಿಯರ್ ಬಾಟಲ್ ಎಸೆದು ಬೆದರಿಕೆ ಹಾಕಲಾಗಿದೆ ಎಂದು ದಿಲೀಪ್ ಹೆಗ್ಡೆ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಬಾಟಲಿ ಎಸೆದ ದುಷ್ಕರ್ಮಿಗಳು ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೇತುವೆಯಿಂದ ಉರುಳಿಬಿದ್ದ ಲಾರಿ ➤ ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 25. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತೋಡಿಗೆ ಬಿದ್ದು ಓರ್ವ ಮೃತಪಟ್ಟ ಘಟನೆ ನೀಲೇಶ್ವರ ಪರಪಚ್ಚಾಲ್ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತಪಟ್ಟವರನ್ನು ಪಾಲಕ್ಕಾಡ್ ಮಣ್ಣಾರಕಾಡ್ ನ ಹಬೀಬ್ ಎಂದು ಗುರುತಿಸಲಾಗಿದೆ. ಚಾಲಕ ರಹೀಂ ಗಾಯಗೊಂಡಿದ್ದಾರೆ. ನೀಲೇಶ್ವರದ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯು ಪರಪಚ್ಚಾಲ್ ಎಂಬಲ್ಲಿ ಸೇತುವೆಯಿಂದ ತೋಡಿಗೆ ಬಿದ್ದಿದ್ದು, ಪರಿಣಾಮ ಅದರಲ್ಲಿದ್ದ ಇಬ್ಬರು ಲಾರಿಯಡಿಗೆ ಸಿಲುಕಿದ್ದರು. ತಕ್ಷಣವೇ ಸ್ಥಳೀಯ ನಿವಾಸಿಗಳು ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳು ಇಬ್ಬರನ್ನೂ ಮೇಲಕ್ಕೆತ್ತಿ ಆಸ್ಪತ್ರೆಗೆ

ಸೇತುವೆಯಿಂದ ಉರುಳಿಬಿದ್ದ ಲಾರಿ ➤ ಓರ್ವ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಮನೆ ಮೇಲೆ ಬಿದ್ದ ಬೃಹದಾಕಾರದ ಮರ..! ➤ ಮನೆ ಸಂಪೂರ್ಣ ನಾಶ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 25. ಬೃಹದಾಕಾರದ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಆನೆಕಲ್ಲು ನಿವಾಸಿ ಅಬ್ಬಾಸ್ ಎಂಬವರ ಮನೆಯ ಮೇಲೆ ಬೃಹದಾಕಾರದ ಗೋಳಿ ಮರವೊಂದು ಉರುಳಿಬಿದ್ದಿದೆ. ತಕ್ಷಣವೇ ಮನೆಮಂದಿ ಎಲ್ಲಾ ಹೊರಗಡೆ ಓಡಿ ಬಂದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ವಿಟ್ಲ: ಮನೆ ಮೇಲೆ ಬಿದ್ದ ಬೃಹದಾಕಾರದ ಮರ..! ➤ ಮನೆ ಸಂಪೂರ್ಣ ನಾಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 25. ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ. ಮರ ಕೆಳಕ್ಕೆ ಉರುಳುತ್ತಿರುವುದನ್ನು ಮನಗಂಡ ಕಾರು ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಬಂಟ್ವಾಳ: ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ➤ ದೈಹಿಕ ಶಿಕ್ಷಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಸಕಲೇಶಪುರ, ಜೂ. 25. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶಿಕ್ಷಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕಿರುವಾಲೆ ಸಮೀಪ ನಡೆದಿದೆ. ಮೃತ ಶಿಕ್ಷಕನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ತಾಲೂಕಿನ ಬಾಳುಪೇಟೆ ಗ್ರಾಮದ ಬಿ.ಸಿದ್ದಣ್ಣಯ್ಯ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಎಂದಿನಂತೆ ಇಂದು ಬೆಳಗ್ಗೆ ಶಾಲೆಗೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು

ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ➤ ದೈಹಿಕ ಶಿಕ್ಷಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾರಿ- ಬೈಕ್ ನಡುವೆ ಢಿಕ್ಕಿ ➤ ಐಟಿಐ ವಿದ್ಯಾರ್ಥಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 25. ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಗಂಗನಾಡು ಕ್ಯಾತ್ತೂರು ನಿವಾಸಿ ಸೃಜನ್ ನಾಗರಾಜ ಮರಾಠಿ(19) ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ದಿವಾಕರ ನಾಯ್ಕ (19) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೃಜನ್ ಗಂಗನಾಡಿಂದ ಹೊಸಂಗಡಿ ಅಜ್ಜಿ ಮನೆಗೆ ಬಂದಿದ್ದು, ಸಂಬಂಧಿ ದಿನಕರ ಜತೆ ಬೈಕಲ್ಲಿ ತೆರಳುತ್ತಿದ್ದ ವೇಳೆ ಲಾರಿಯು ಢಿಕ್ಕಿ

ಲಾರಿ- ಬೈಕ್ ನಡುವೆ ಢಿಕ್ಕಿ ➤ ಐಟಿಐ ವಿದ್ಯಾರ್ಥಿ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಮೂವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಸುಮಾರು ಏಳು ಮಂದಿಯ ತಂಡ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರದಂದು ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ. ಹಲ್ಲೆಗೊಳಗಾದ ಮೋಹನ್ ದಾಸ್ ರೈ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಪೋಲಿಸರಿಗೆ ದೂರು ನೀಡಿದ ಅವರು, ನಾನು ಜೂ.24ರಂದು ಕುಂತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಹೋಗಿ

ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಜಾನುವಾರು ಸಾಗಾಟ ➤ ವಾಹನ ಸಹಿತ ಓರ್ವ ಅಂದರ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 25. ಅಕ್ರಮ ಗೋ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಿಕಪ್ ಸಹಿತ ಓರ್ವನನ್ನು ವಶಕ್ಕೆ ಪಡೆದ ಘಟನೆ ಮಾಣಿಯಲ್ಲಿ ನಡೆದಿದೆ.   ಬಂಧಿತ ಆರೋಪಿಯನ್ನು ಇರಾಮೂಲೆ ನಿವಾಸಿ ಮಹಮ್ಮದ್ ಎಂದು ಗುರುತಿಸಲಾಗಿದೆ. ಹಮೀದ್, ಮತ್ತು ಪವನ್ ರಾಜ್ ಪರಾರಿಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಕಪ್ ವಾಹನ ಹಾಗೂ ದನಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆಯ ವೇಳೆ ದನಗಳನ್ನು ವದೆ ಮಾಡಿ ಮಾಂಸವನ್ನು ಕೇರಳಕ್ಕೆ ಸಾಗಾಟ ಮಾಡುವ ಉದ್ದೇಶದಿಂದ ಪವನ್‌

ಅಕ್ರಮ ಜಾನುವಾರು ಸಾಗಾಟ ➤ ವಾಹನ ಸಹಿತ ಓರ್ವ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಬ್ಯಾಂಕ್ ಖಾತೆಯಿಂದ ಹಣ ಪಡೆದು ಶಿಕ್ಷಕಿಗೆ ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 25. ಬ್ಯಾಂಕ್ ಅಕೌಂಟ್ ನಂಬರ್ ಪಡೆದು ವಂಚನೆ ಮಾಡಿರುವ ಕುರಿತು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಅನುರೂಪ್ ಎಂಬವರ ಪತ್ನಿ, ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದ ಶಿಕ್ಷಕಿಯಾಗಿರುವ ಸಜಿಲಾ ಎ. ಎಂಬವರು ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂ.11ರಂದು ಸಜಿಲಾ ರವರ ಮಗ ಪ್ರಣವ್‌ರವರ ಮೊಬೈಲ್ ಸಂಖ್ಯೆ 7899963048ಕ್ಕೆ QP-ATM SBIನಿಂದ ಎಟಿಎಂ ಕಾರ್ಡ್ ಬ್ಲಾಕ್ ಆಗಿರುವ ಬಗ್ಗೆ

ನೆಲ್ಯಾಡಿ: ಬ್ಯಾಂಕ್ ಖಾತೆಯಿಂದ ಹಣ ಪಡೆದು ಶಿಕ್ಷಕಿಗೆ ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಅಕ್ರಮ ಮದ್ಯ ಸಾಗಾಟ ಪ್ರಕರಣ ➤ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 25. ಸ್ಕೂಟರ್ ನಲ್ಲಿ ಅಕ್ರಮ ಮದ್ಯ ಸಾಗಾಟ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮೇ. 19ರಂದು ಪಂಜದಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಆಕ್ಟಿವಾ ಸ್ಕೂಟರ್‌ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ್ದು, ಈ ಸಂದರ್ಭ ಆರೋಪಿ ಸುಳ್ಯ ಪಂಬೆತ್ತಡಿ ಗ್ರಾಮದ ಪುಟ್ಟಣ್ಣ ಗೌಡ ಎಂಬವರು ಪರಾರಿಯಾಗಿದ್ದರು. ಈ ಕುರಿತು ಪೊಲೀಸರು ಆರೋಪಿ

ಪಂಜ: ಅಕ್ರಮ ಮದ್ಯ ಸಾಗಾಟ ಪ್ರಕರಣ ➤ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top