ಕ್ರೈಮ್ ನ್ಯೂಸ್

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಡಬದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಕಾಲೇಜಿಗೆಂದು ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಇದೀಗ ಕಡಬದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿನಿ ಮನೆಗೆ ಬಾರದೆ ಕಾಣೆಯಾಗಿದ್ದಳು. ಈ ಕುರಿತಂತೆ ಆಕೆಯ ಚಿಕ್ಕಮ್ಮ ವಿಟ್ಲ ಠಾಣೆಗೆ ನೀಡಿದ ದೂರಿನನ್ವಯ ವಿಟ್ಲ ಪೋಲೀಸರ ತಂಡವು ವಿದ್ಯಾರ್ಥಿನಿಯನ್ನು ಕಡಬದಲ್ಲಿ ಪತ್ತೆ ಹಚ್ಚಿ ಸುರಕ್ಷಿತವಾಗಿ ಮನೆಯವರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಮೂಲತಃ ಕಡಬ ನಿವಾಸಿಯಾಗಿರುವ ಈಕೆ ವಿದ್ಯಾಭ್ಯಾಸಕ್ಕಾಗಿ ತನ್ನ ಚಿಕ್ಕಮನ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿರುವ ಈಕೆ […]

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಡಬದಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಭಜರಂಗದಳ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ..!!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಾನುವಾರದಂದು ಸಾಲೆತ್ತೂರಿನಲ್ಲಿ ನಡೆದಿದೆ.     ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12 ಜನರ ತಂಡವು ಚಂದ್ರಹಾಸ್ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ವಿಟ್ಲ: ಭಜರಂಗದಳ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ➤ ಆನೆದಂತ ಸಹಿತ 6 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 19. ಅರಣ್ಯ ಇಲಾಖೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು ವಲಯದಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಬಂಧಿಸಿದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ಮಹಾವೀರ ಆಸ್ಪತ್ರೆಗೆ ತಿರುಗುವ ಜಂಕ್ಷನ್ ಬಳಿ ನಡೆದಿದೆ.   ಬಂಧಿತ ಆರೋಪಿಗಳನ್ನು ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್‌ ಕುಮಾರ್ ಹಾಗೂ ರತೀಶ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ಆನೆ ದಂತ ಮತ್ತು ಒಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು

ಪುತ್ತೂರು ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ➤ ಆನೆದಂತ ಸಹಿತ 6 ಮಂದಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19. ಉಜಿರೆ ಪಿಯು ಕಾಲೇಜು ಹಿಂಭಾಗದಲ್ಲಿರುವ ಶಂಕರ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ.   ಶ್ರೀ ದುರ್ಗಾ ನಿಲಯ ಎಂದು ಹೆಸರಿರುವ ಮನೆಯ ಬಾವಿಯೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಆದರೆ ಈ ಮನೆಯವರು ಮೈಸೂರಿನಲ್ಲಿ ವಾಸವಾಗಿದ್ದ ಹಿನ್ನೆಲೆ ಮನೆಗೆ ಬೀಗ ಹಾಕಲಾಗಿತ್ತು. ವಾರದ ಹಿಂದೆ ಮನೆಯವರು ಬಂದಾಗ ಬಾವಿಯನ್ನು ಗಮನಿಸಿದ್ದು, ಆದರೆ ಇವರು ಮೃತದೇಹದ ತಲೆಯನ್ನು ತೆಂಗಿನಕಾಯಿ ಎಂದುಕೊಂಡು ವಾಪಾಸ್ ಆಗಿದ್ದರು ಎನ್ನಲಾಗಿದೆ.

ಬೆಳ್ತಂಗಡಿ: ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳಕ್ಕೆ ಬರುತ್ತಿದ್ದ ಯಾತ್ರಾರ್ಥಿಗಳ ಕಾರು ಅಪಘಾತ ➤ ತಂದೆ- ಮಗ ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19. ಕಾರು ಹಾಗೂ ಕ್ಯಾಂಟರ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಹಾಗೂ ಮಗ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಎಂದು ಗುರುತಿಸಲಾಗಿದೆ. ಇವರು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆಂದು 2 ಕಾರಿನಲ್ಲಿ 10 ಜನ ತೆರಳುತ್ತಿದ್ದ ವೇಳೆ, ಅದರಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ

ಧರ್ಮಸ್ಥಳಕ್ಕೆ ಬರುತ್ತಿದ್ದ ಯಾತ್ರಾರ್ಥಿಗಳ ಕಾರು ಅಪಘಾತ ➤ ತಂದೆ- ಮಗ ದುರಂತ ಅಂತ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿಯುಸಿ ರಿಸಲ್ಟ್ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 18. ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಈವರಗೆ ಒಟ್ಟು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಕಡ್ಲೆ ಗ್ರಾಮದ ಪ್ರಣಮ್ ಈಶ್ವರ್ ನಾಯ್ಕ(18), ಗದಗ ತಾಲೂಕಿನ ಹರ್ತಿ ಗ್ರಾಮದ ಪವಿತ್ರ ಲಿಂಗದಾಳ(18), ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಎಂ.ಜೆ.ಸ್ಪಂದನಾ(17) ಮತ್ತು ಕೊಡಗು ಜಿಲ್ಲೆಯ ಬಸವನಹಳ್ಳಿಯ ಸಂಧ್ಯಾ(18) ಎಂದು ಗುರುತಿಸಲಾಗಿದೆ. ಕುಮಟಾ ತಾಲೂಕಿನ ಎ.ವಿ ಬಾಳಿಗಾ

ಪಿಯುಸಿ ರಿಸಲ್ಟ್ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಶೈಲಜಾ ಅಮರನಾಥ್ ಮನೆಗೆ ಯುವಕರ ತಂಡ ದಾಳಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 18. ಕಾಂಗ್ರೆಸ್‌ ಐಟಿ ಸೆಲ್‌ ಕಾಯದರ್ಶಿ ನ್ಯಾಯವಾದಿ ಶೈಲಜಾ ಅಮರನಾಥರವರ ಬಪ್ಪಳಿಗೆಯ ಮನೆಗೆ ಯುವಕರ ತಂಡವೊಂದು ದಾಳಿ ನಡೆಸಿದ ಘಟನೆ ಶನಿವಾರದಂದು ಸಂಜೆ ನಡೆದಿದೆ. ಶೈಲಜಾ ರವರು ಸಾಮಾಜಿಕ ಜಾಲತಾಣವಾದ ಕ್ಲಬ್‌ ಹೌಸ್‌ ನಲ್ಲಿ ನಡೆದ ಚರ್ಚಾಕೂಟವೊಂದರಲ್ಲಿ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್‌, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಮುಖರು ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಇದರ

ಪುತ್ತೂರು: ಶೈಲಜಾ ಅಮರನಾಥ್ ಮನೆಗೆ ಯುವಕರ ತಂಡ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ- ಟಿಪ್ಪರ್ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 18. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಪೆರ್ನೆಯಲ್ಲಿ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಪುತ್ತೂರು ಹಾರಾಡಿಯಲ್ಲಿನ ಪ್ರಜ್ವಲ್ ಸ್ಟೋರ್ಸ್ ನ ಮಾಲಕ ನೆಕ್ಕಿಲಾಡಿ ನಿವಾಸಿ ಬಾಲಕೃಷ್ಣ ಭಟ್ ಅವರ ಪತ್ನಿ ಪೂರ್ಣಿಮಾ(47) ಎಂದು ಗುರುತಿಸಲಾಗಿದೆ. ದಂಪತಿಗಳು ಇಂದು ಬೆಳಗ್ಗೆ ಪೆರ್ನೆಯಲ್ಲಿರುವ ತಮ್ಮ ತೋಟಕ್ಕೆ ತೆರಳಿ, ಅಲ್ಲಿಂದ ಹಿಂತಿರುಗುತ್ತಿದ್ದ ವೇಳೆ ಟಿಪ್ಪರ್ ವೊಂದು ಟಿಪ್ಪರ್ ಡಿಕ್ಕಿಯಾಗಿದೆ. ಡಿಕ್ಕಿಯ

ದ್ವಿಚಕ್ರ ವಾಹನ- ಟಿಪ್ಪರ್ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ಕಾರಿನಲ್ಲಿ ಕರೆದುಕೊಂಡು ಹೋಗಿ ತಂಡದಿಂದ ವ್ಯಕ್ತಿಗೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 18. ವ್ಯಕ್ತಿಯೋರ್ವನನ್ನು ತಂಡವೊಂದು ಕಾರಿನಲ್ಲಿ ಕರೆದೊಯ್ದು ತೀವ್ರ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೊಕ್ಕಡ ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೂ.17 ಶುಕ್ರವಾರದಂದು ಸಂಜೆ ಬೋಳ ಪರಿಸರದ ಮೂರು ಮಂದಿ ತನ್ನನ್ನು ಕಾರಿನಲ್ಲಿ ಬರುವಂತೆ ಒತ್ತಾಯಿಸಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಮೊಬೈಲ್‌ ಫೋನ್ ಒಡೆದು ಹಾಕಿರುವುದಾಗಿ ಹಲ್ಲೆಗೊಳಗಾದ ಸಮೀರ್ ಆರೋಪಿಸಿದ್ದಾರೆ.

ಕೊಕ್ಕಡ: ಕಾರಿನಲ್ಲಿ ಕರೆದುಕೊಂಡು ಹೋಗಿ ತಂಡದಿಂದ ವ್ಯಕ್ತಿಗೆ ಹಲ್ಲೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.15. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿದ್ದ ದನವನ್ನು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ್ದ ಅಪರಿಚಿತ ಗುಂಪನ್ನು ಸುಬ್ರಹ್ಮಣ್ಯ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಆಗಮಿಸಿ ದನವನ್ನು ಕಳ್ಳತನಗೈಯುವ ವಿಫಲ ಯತ್ನದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ

ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top