ಕ್ರೈಮ್ ನ್ಯೂಸ್

ಮಹಡಿಯಿಂದ ಕೆಳಗೆಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂಬಳೆ, ಜೂ. 13. ಮಹಡಿಯಿಂದ ಬಿದ್ದು‌ ಯುವಕನೋರ್ವ ಮೃತಪಟ್ಟ ಘಟನೆ ಕಿಂಬಳೆ ಮಂಡೆಕಾಪು ಎಂಬಲ್ಲಿ ನಡೆದಿದೆ.   ಮೃತ ಯುವಕನನ್ನು ಮಂಗಲ್ಪಾಡಿ ಪಂಚಾಯತ್‌ನ ಹೇರೂರು ಕಂಗ್ವೆ ನಿವಾಸಿ, ಐತ್ತಪ್ಪ ಶೆಟ್ಟಿ ಅವರ ಪುತ್ರ ಸಂದೀಪ್‌ ಶೆಟ್ಟಿ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಸಂದೀಪ್, ಕೆಲಸದ ನಿಮಿತ್ತ ಮಂಡೆಕಾಪು ಎಂಬಲ್ಲಿ ಮನೆಯೊಂದರ ಛಾವಣಿಗೆ ಶೀಟ್‌ ಹಾಕಲು ಅಳತೆ ತೆಗೆಯುತ್ತಿದ್ದ ಸಂದರ್ಭ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  

ಮಹಡಿಯಿಂದ ಕೆಳಗೆಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈಕಂಬ: ಓವರ್ ಟೇಕ್ ಮಾಡುವ ಸಂದರ್ಭ ಬೈಕ್ ಸ್ಕಿಡ್ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈಕಂಬ, ಜೂ. 13. ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುರುಪುರ ಕೈಕಂಬ ಎಂಬಲ್ಲಿ‌ ನಡೆದಿದೆ.   ಮೃತ ಯುವಕನನ್ನು ಕೆರೆಕಾಡಿನ ಪ್ರವೀಣ್ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಈತ ಇನ್ನೊಂದು ಬೈಕ್ ನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಕಾರಿನಡಿಗೆ ಬಿದ್ದಿದ್ದಾರೆ. ಪರಿಣಾ. ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಳೆಯ ಕಾರಣದಿಂದ ಹೆದ್ದಾರಿ ಜಾರುತ್ತಿದ್ದು,

ಕೈಕಂಬ: ಓವರ್ ಟೇಕ್ ಮಾಡುವ ಸಂದರ್ಭ ಬೈಕ್ ಸ್ಕಿಡ್ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.  

ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ ➤‌ ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರೀತ ಮಳೆ ಸುರಿಯುತ್ತಿದ್ದು, ಈ ಮಳೆಗೆ ಅಪಾಯಕಾರಿಯಾಗಿರುವ ಮರ ಉರುಳಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಆಗಾಗ ರಸ್ತೆ

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ ➤‌ ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ನಾಗೇಶ್‌ ಶೆಟ್ಟಿ ಅವರ ಪತ್ನಿ ಪ್ರೀತಿ ಶೆಟ್ಟಿ ಎಂಬವರು ಜೂನ್ 8 ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆದ ಮದುವೆಗೆ ತೆರಳಿ ಮೂರು ಗಂಟೆಯ ಸುಮಾರಿಗೆ ಚಿನ್ನಾಭರಣವನ್ನು ಮನೆಯಲ್ಲಿಟ್ಟಿದ್ದಾರೆ. ನಂತರ ಮರುದಿನ ಮತ್ತೊಂದು ಮದುವೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಚಿನ್ನಾಭರಣ ಹುಡುಕಾಡಿದ್ದು,

ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ ➤ ಆರು ವಿದ್ಯಾರ್ಥಿಗಳ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿಯ ವಿರುದ್ಧ ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ವಿದ್ಯಾರ್ಥಿಗಳಾದ ಮರ್ಝೂಕ್, ಅಬೂಬಕ್ಕರ್ ಸಿದ್ದೀಕ್, ಮುಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ, ಸ್ವಸ್ತಿಕ್ ಹಾಗೂ ಗುರುಕಿರಣ್ ಎಂಬವರ ಮೇಲೆ ಎಫ್ಐಆರ್ ದಾಖಲಾಗಿದೆ. ತರಗತಿಯಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ ವಿಷಯಕ್ಕೆ ಸಂಬಂಧಿಸಿ ಶುಕ್ರವಾರದಂದು ಮಧ್ಯಾಹ್ನ ಊಟದ ವೇಳೆ ವಿದ್ಯಾರ್ಥಿಗಳ ಎರಡೂ ತಂಡದ ನಡುವೆ ಮಾತಿಗೆ ಮಾತು

ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ ➤ ಆರು ವಿದ್ಯಾರ್ಥಿಗಳ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಡಗು, ಜೂ. 11. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಲ್ಲಿನ ತಿತಿಮತಿ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪೊನ್ನಂಪೇಟೆ ತಾಲೂಕಿನ ಮಾರಿಯಮ್ಮ ಕಾಲೋನಿಯ ಚಾಮ (50) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಬೈಕಿನಲ್ಲಿ ಕೋಣನ ಕಟ್ಟೆಯಿಂದ ಮರಪಾಲ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ದಿಢೀರ್ ಆಗಿ ಆನೆಯೊಂದು ಎದುರಿಗೆ ಬಂದಿದ್ದು, ಈ ವೇಳೆ ಬೈಕ್ ನ ಹಿಂಬದಿ ಕೂತಿದ್ದ ಇಬ್ಬರು ಓಡಿದ್ದಾರೆ. ಆದರೆ ಚಾಮ

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ಚರ್ಚ್ ಹಾಗೂ ಶಾಲೆಯ ಬೀಗಮುರಿದು ಒಳನುಗ್ಗಿದ ಕಳ್ಳರು..!! ➤ ಚರ್ಚ್ ನ ಕಾಣಿಕೆಡಬ್ಬಿಯ ಹಣ ಕಳವು

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 11. ಚರ್ಚ್ ಹಾಗೂ ಶಾಲೆಯ ಬೀಗಮುರಿದು ಒಳನುಗ್ಗಿದ ಕಳ್ಳರು ಶಾಲಾ ಕೊಠಡಿಯೊಳಗಿನ ಕಪಾಟುಗಳನ್ನು ಒಡೆದು ಹುಡುಕಾಡಿ ಎಲ್ಲಾ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ ಘಟನೆ ಕೊಕ್ಕಡ ಸಮೀಪದ ಕೌಕ್ರಾಡಿ ಎಂಬಲ್ಲಿ ನಡೆದಿದೆ. ಕೌಕ್ರಾಡಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ 5 ಕೊಠಡಿಗಳ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಕೊಠಡಿಯೊಳಗಿದ್ದ ಕಪಾಟುಗಳನ್ನು ಹುಡುಕಾಡಿ ಎಲ್ಲಾ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು, ಆದರೆ ಯಾವುದೇ ವಸ್ತು ಕಳ್ಳತನವಾಗಿಲ್ಲ ಎಂದೆನ್ನಲಾಗಿದೆ. ಚರ್ಚ್ ನ ಮುಂಭಾಗದಲ್ಲಿದ್ದ ಮೇರಿಮಾತೆಯ ಗ್ರೆಟ್ಟೋ

ಕೊಕ್ಕಡ: ಚರ್ಚ್ ಹಾಗೂ ಶಾಲೆಯ ಬೀಗಮುರಿದು ಒಳನುಗ್ಗಿದ ಕಳ್ಳರು..!! ➤ ಚರ್ಚ್ ನ ಕಾಣಿಕೆಡಬ್ಬಿಯ ಹಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 11. ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಅರಂತೋಡು: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

80 ಅಡಿ ಆಳದ ಬೋರ್ ವೆಲ್ ಗೆ ಬಿದ್ದ ಬಾಲಕ..!! ➤ ಮುಂದುವರಿದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಜಾಂಜ್ ಗಿರ್, ಜೂ. 11. ಹನ್ನೊಂದು ವರ್ಷದ ಬಾಲಕನೋರ್ವ 80 ಅಡಿ ಆಳದ ಬೋರ್ ವೆಲ್ ಗೆ ಬಿದ್ದ ಘಟನೆ ಘತ್ತೀಸ್ ಗಡದ ಜಂಜ್ ಗಿರ್ ಚಂಪಾ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಬಾಲಕನನ್ನು ರಾಹುಲ್ ಸಾಹು ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಮಧ್ಯಾಹ್ನದ ವೇಳೆ ಆಟವಾಡುತ್ತಿದ್ದ ಸಂದರ್ಭ ತನ್ನ ಮನೆಯ ಹಿತ್ತಲಿನಲ್ಲಿರುವ ಬೋರ್ವೆಲ್ ಗೆ ಬಿದ್ದಿದ್ದಾನೆ. ತುಂಬಾ ಹೊತ್ತಾದರೂ ಬಾಲಕ ಮನೆಗೆ ಬಾರದೇ ಇರುವುದನ್ನು ಮನಗಂಡ ಮನೆಯವರು ಹುಡುಕಾಡಲು ಆರಂಭಿಸಿದ್ದು, ಈ ಸಂದರ್ಭ

80 ಅಡಿ ಆಳದ ಬೋರ್ ವೆಲ್ ಗೆ ಬಿದ್ದ ಬಾಲಕ..!! ➤ ಮುಂದುವರಿದ ರಕ್ಷಣಾ ಕಾರ್ಯಾಚರಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top