ಕ್ರೈಮ್ ನ್ಯೂಸ್

ಬೈಕ್- ಕಾರು ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು […]

ಬೈಕ್- ಕಾರು ಅಪಘಾತ: ಸವಾರ ಮೃತ್ಯು..! Read More »

ಕ್ರೈಮ್ ನ್ಯೂಸ್

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಾಗಾಟ: 5 ಟನ್‌ ಡ್ರಗ್ಸ್ ವಶ

(ನ್ಯೂಸ್ ಕಡಬ)newskadaba.com ನವದೆಹಲಿ, ನ.25. ಅಂಡಮಾನ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್‌ ಡ್ರಗ್ಸ್  ವಶಪಡಿಸಿಕೊಳ್ಳುವಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ಯಶಸ್ವಿಯಾಗಿದೆ. ಅಂಡಮಾನ್‌ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು ಐದು ಟನ್‌ಗಳಷ್ಟು ಡ್ರಗ್‌್ಸಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಕೋಸ್ಟ್‌ ಗಾರ್ಡ್‌ ಅಂಡಮಾನ್‌ ನೀರಿನಲ್ಲಿ ಮೀನುಗಾರಿಕೆ ದೋಣಿಯಿಂದ ಸುಮಾರು ಐದು ಟನ್‌ ಡ್ರಗ್ಸ್‌‍ ಗಳನ್ನು ವಶಪಡಿಸಿಕೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.  

ಅಕ್ರಮ ಸಾಗಾಟ: 5 ಟನ್‌ ಡ್ರಗ್ಸ್ ವಶ Read More »

ಕ್ರೈಮ್ ನ್ಯೂಸ್

ಸಂಭಾಲ್ ಹಿಂಸಾಚಾರ: ಮೃತರ ಸಂಖ್ಯೆ 4ಕ್ಕೆ ಏರಿಕೆ..!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25. ಸಂಭಾಲ್ ನ ಜಾಮಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹಿಂಸಾಚಾರದ ಹಿನ್ನೆಲೆ ಜಿಲ್ಲಾಡಳಿತ ಸಂಭಾಲ್ ನಲ್ಲಿ 24 ಗಂಟೆಗಳ ಕಾಲ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ ಮತ್ತು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ನ.30ರವರೆಗೆ ಸಂಭಾಲ್ ಗೆ ಹೊರಗಿನವರು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್ ಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.  

ಸಂಭಾಲ್ ಹಿಂಸಾಚಾರ: ಮೃತರ ಸಂಖ್ಯೆ 4ಕ್ಕೆ ಏರಿಕೆ..! Read More »

ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹಾಸನ, ನ.25. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ದಯಾನಂದ (46) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ದಯಾನಂದ್ ಅವರ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಯಾನಂದ್ ಅವರು ಬೇಲೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದು ಅಲ್ಲೇ ವಾಸವಿದ್ದರು. ಇನ್ನೂ ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ಅವರು ಇಂದು

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಬೀದರ್, ನ. 21. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವೊಂದು ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ವರವಟಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಹಾರಾಷ್ಟ್ರ ನಾಂದೇಡ್ ಜಿಲ್ಲೆಯ ನಿವಾಸಿ ಶೀವಾಜಿತ್ ರಹ್ಮತ್ ಗಾಯಕ್ವಾಡ್(45) ಎಂದು ಗುರುತಿಸಲಾಗಿದೆ. ಇವರು ರೈತರ ಜಮೀನಿನಿಂದ ಕಬ್ಬುಗಳು ಸಾಗಿಸುವ ಕೆಲಸದಲ್ಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.! Read More »

ಕ್ರೈಮ್ ನ್ಯೂಸ್

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಲಕ್ನೋ, ನ. 21. ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಬಸ್ಸಿನ ಗಾಜುಗಳನ್ನು

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top