ಕ್ರೈಮ್ ನ್ಯೂಸ್

ಕೊರೋನಾ ಸೋಂಕಿನ ಭೀತಿ ➤ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 21. ಅನಾರೋಗ್ಯ ಪೀಡಿತ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಭಯಪಟ್ಟು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೋನಾ ಸೋಂಕು ದೃಡಪಟ್ಟಿಲ್ಲವಾದರೂ ಸೋಂಕು ತಗಲುವ ಭೀತಿಯಿಂದ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ […]

ಕೊರೋನಾ ಸೋಂಕಿನ ಭೀತಿ ➤ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಾಲಕನ ಮೇಲೆ ಬೀದಿನಾಯಿಗಳ ದಾಳಿ ➤ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 21. ಇಲ್ಲಿನ ಪರಿಸರದಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿಮೀರಿದ್ದು, ಬಾಲಕನೋರ್ವನ ಮೇಲೆ ನಾಯಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಇಲ್ಲಿನ ಕೆಂಪುಮಜಲ್ ಎಂಬಲ್ಲಿ ನಡೆದಿದೆ. ಕೆಂಪಿಮಜಲ್ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಬಾಲಕರ ಮೇಲೆ ಎರಗಿದ ನಾಯಿಗಳು ದಾಳಿ ನಡೆಸಿವೆ. ಈ ಸಂದರ್ಭ ಓರ್ವ ತಪ್ಪಿಸಿಕೊಂಡು ಓಡಿಹೋಗಿದ್ದು, ಇನ್ನೋರ್ವ ಬಾಲಕನಿಗೆ ಪರಚಿದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಬಾಲಕನನ್ನು ರಕ್ಷಿಸಿದ್ದಾರೆ. ಇಲ್ಲಿ ಬೀದಿನಾಯಿಗಳ ಉಪಟಳ ಮಿತಿಮೀರಿದ್ದು, ಪಾದಚಾರಿಗಳು ಹಾಗೂ ದ್ವಿಚಕ್ರ

ಉಪ್ಪಿನಂಗಡಿ: ಬಾಲಕನ ಮೇಲೆ ಬೀದಿನಾಯಿಗಳ ದಾಳಿ ➤ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ.! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ. 21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ನಡೆದಿದೆ. ಕಾರಿನಲ್ಲಿ ಮದುಮಗ ಸೇರಿದಂತೆ ಐವರು ಪ್ರಯಾಣಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯ ತೀವ್ರತೆಗೆ ತಕ್ಷಣವೇ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.    

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ.! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಅಡ್ಡಿಪಡಿಸಿದ ಪ್ರಕರಣ ➤ ಕಾರು ಚಾಲಕನ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್‌ಗೆ ಅಡ್ಡಲಾಗಿ ಸುಮಾರು 30 ಕಿಲೋ ಮೀಟರ್ ತನಕ ಸೈಡ್ ಕೊಡದೇ ಸತಾಯಿಸಿದ ಘಟನೆಗೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಕಾರು ಚಾಲಕನನ್ನು ಬಂಧಿಸಿದ್ದಾರೆ‌. ಬಂಧಿತನನ್ನು ಅತ್ತಾವರದ ಮೋನಿಷ್ ರೆಹಮಾನ್ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಭಟ್ಕಳಕ್ಕೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಸೈಡ್ ಬಿಡದೇ ಸತಾಯಿಸಿದ್ದಲ್ಲದೇ ಪಾರ್ಕಿಂಗ್ ಲೈಟ್ ಹಾಕಿ ಮುಂದಿನಿಂದ ವೇಗವಾಗಿ ಸಂಚರಿಸುತ್ತಾ ಪದೇ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಅಡ್ಡಿಪಡಿಸಿದ ಪ್ರಕರಣ ➤ ಕಾರು ಚಾಲಕನ ಬಂಧನ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೃತಪಟ್ಟಿದ್ದಾನೆಂದು ಮನೆಗೆ ಕಳುಹಿಸಿದ ವ್ಯಕ್ತಿ ದಾರಿಮಧ್ಯೆ ಉಸಿರಾಡಿದ…! ➤ ಇತ್ತ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ. ಕೂಲಿಕಾಮಿರ್ಕ ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ

ಮಂಗಳೂರು: ಮೃತಪಟ್ಟಿದ್ದಾನೆಂದು ಮನೆಗೆ ಕಳುಹಿಸಿದ ವ್ಯಕ್ತಿ ದಾರಿಮಧ್ಯೆ ಉಸಿರಾಡಿದ…! ➤ ಇತ್ತ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನಕಮಜಲು ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರನ್ನು ಮಂಗಳೂರಿನಿಂದ ಮೈಸೂರಿಗೆ ಒಯ್ಯುತ್ತಿದ್ದ ಟೋಯಿಂಗ್ ವಾಹನವು ಕೋಡಿ ತಿರುವಿಗೆ ತಲುಪುತ್ತಿದ್ದಂತೆಯೇ ವಾಹನದ ಬ್ರೇಕ್ ವೈಫಲ್ಯಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೈಕ್ ಅಪಘಾತ- ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಸ್ತೆಯಲ್ಲಿ ಬಿದ್ದಿದ್ದ ಪಾನ್ ಕಾರ್ಡ್ ಆಧಾರದಲ್ಲಿ ಚೇತನ್ ಕೆ.ಎಂ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.  

ಬೈಕ್ ಅಪಘಾತ- ಸವಾರ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಓಮ್ನಿ ನಡುವೆ ಅಪಘಾತ ➤ ಹಿರಿಯ ಯಕ್ಷಗಾನ ಕಲಾವಿದ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜ. 20. ಒಮ್ನಿ ಹಾಗೂ ಬೈಕ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಿರಿಯ ಯಕ್ಷಗಾನ ಕಲಾವಿದ ಓರ್ವರು ಮೃತಪಟ್ಟ ಘಟನೆ ಮೂಡಬಿದಿರೆಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು ಎಂದು ಗುರುತಿಸಲಾಗಿದೆ. ಇವರು ಕುಂದಾಪುರದಲ್ಲಿ ಯಕ್ಷಗಾನ ಮುಗಿಸಿ ಬೈಕ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಒಮ್ನಿಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಪ್ಪತ್ತಾರು ವರ್ಷಗಳ ಅನುಭವಿ ಕಲಾವಿದರಾಗಿದ್ದ ಇವರು ಸ್ತ್ರೀ, ಪುರುಷ, ಹಾಸ್ಯ, ಪುಂಡು ಹೀಗೆ

ಬೈಕ್- ಓಮ್ನಿ ನಡುವೆ ಅಪಘಾತ ➤ ಹಿರಿಯ ಯಕ್ಷಗಾನ ಕಲಾವಿದ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಒಣಗಲು ಹಾಕಿದ್ದ ಅಡಿಕೆ ಕಳ್ಳತನ ➤ ಅಡಿಕೆ ಸಹಿತ ಇಬ್ಬರು ಖಾಕಿ ಬಲೆಗೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 20. ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಧಿತರನ್ನು ಪುತ್ತೂರು ಚಿಕ್ಕಮುಡ್ನೂರು ಬಡವು ನಿವಾಸಿ ವಿನಯ್ ಕುಮಾರ್ ಹಾಗೂ ಕೆಮ್ಮಾಯಿ ನಿವಾಸಿ ಮಹಮ್ಮದ್ ಜುನೈದ್ ಎಂದು ಗುರುತಿಸಲಾಗಿದೆ. ಇವರು ಬಂಟ್ವಾಳ ತಾಲೂಕಿನ ನಿವಾಸಿ ವಸಂತ ದೇವಾಡಿಗ ಎಂಬವರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದೊಯ್ದಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರೆಸಿದ ಪೊಲೀಸರು ಉಪ್ಪಿನಂಗಡಿ ನೆಕ್ಕಿಲಾಡಿ ಬಳಿ

ಉಪ್ಪಿನಂಗಡಿ: ಒಣಗಲು ಹಾಕಿದ್ದ ಅಡಿಕೆ ಕಳ್ಳತನ ➤ ಅಡಿಕೆ ಸಹಿತ ಇಬ್ಬರು ಖಾಕಿ ಬಲೆಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಟ್ಟಣ ಪಂಚಾಯತ್ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ- ರಕ್ಷಣೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 20. ಇಲ್ಲಿನ ಪಟ್ಟಣ ಪಂಚಾಯತ್ ಸಿಬ್ಬಂದಿಯೋರ್ವರು ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಆತನನ್ನು ತಡೆದು ರಕ್ಷಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದಾತನನ್ನು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿರುವ ರಾಜೇಶ್ ಎಂದು ಗುರುತಿಸಲಾಗಿದೆ. ವಿಟ್ಲ ಮಂಗಳಪದವು ಎಂಬಲ್ಲಿನ ವ್ಯಕ್ತಯೋರ್ವರ ಮನೆ ಮಂಜೂರಾತಿ ವಿಚಾರದಲ್ಲಿ ಪ.ಪಂ ಸದಸ್ಯರೋರ್ವರು ರಾಜೇಶ್ ಅವರ ಹೆಸರಿನಲ್ಲಿ ಲಂಚ ಕೇಳಿರುವುದಾಗಿ ಆರೋಪ ವ್ಯಕ್ತವಾಗಿತ್ತು. ಇದರಿಂದ ನೊಂದ ರಾಜೇಶ್ ವಾಟ್ಸಾಪ್

ಪಟ್ಟಣ ಪಂಚಾಯತ್ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ- ರಕ್ಷಣೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top