ಕ್ರೈಮ್ ನ್ಯೂಸ್

ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಕಡಬ, ಜ.05. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಬುಧವಾರದಂದು ನಡೆದಿದೆ‌‌. ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ನಡುವೆ ನೆಕ್ಕರೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕಿನ ಮುಂಭಾಗದ ಚಕ್ರದ ಮೇಲೆ ಟಿಪ್ಪರ್ ಹರಿದಿದ್ದು, ಬೈಕ್ ನಜ್ಜುಗುಜ್ಜಾಗಿದೆ‌. […]

ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆಲಸಕ್ಕೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ- ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 05. ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪೆರಾಜೆ ನಿವಾಸಿ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಮದೆ ಗ್ರಾಮದಲ್ಲಿನ ತೋಟವೊಂದಕ್ಕೆ ಕೆಲಸದ ನಿಮಿತ್ತ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಕೆಲಸಕ್ಕೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ- ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಗಣಿ ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 05. ಮಗುವೊಂದು ಸಗಣಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಕುಂದಾಪುರದ ಮೊಳಹಳ್ಳಿ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಬಿಹಾರ ಮೂಲದ ರಾಮ್ ದೇಹನ್ ಸಿಂಗ್ ಇವರ ಪುತ್ರ ಅನುರಾಜ್ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ದಂಪತಿ ಕುಂದಾಪುರದ ಮೊಳಹಳ್ಳಿಯ ಕೈಲ್ಕೇರಿ ನಿವಾಸಿ ಚೈತ್ರ ಅಡಪ ಎಂಬವರ ಮನೆಯ ಪಕ್ಕದಲ್ಲಿ ವಾಸವಾಗಿದ್ದರು. ಈ ಅಡಪ ಅವರ ಬಳಿ ಸುಮಾರು 30 ದನಗಳಿದ್ದು, ಮೃತ ಮಗುವಿನ ತಾಯಿ ದಿನನಿತ್ಯ ದನದ

ಸಗಣಿ ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 05. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಪುಣಚ ನಿವಾಸಿ ಪ್ರದೀಪ್ ಕುಲಾಲ್ (25) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ಬುಧವಾರದಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಪುತ್ತೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಶುರೆನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಗೂಡ್ಸ್ ವಾಹನ – ಬೈಕ್ ನಡುವೆ ಢಿಕ್ಕಿ, ಸವಾರ ಗಂಭೀರ ➤ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಜ.05. ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಕಡಬದ ಕಾಲೇಜ್ ಕ್ರಾಸ್ ನಲ್ಲಿ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಗೂಡ್ಸ್ ವಾಹನವು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಕಾರ್ಯಕ್ರಮ ನಿಮಿತ್ತ ಅದೇ ದಾರಿಯಿಂದ ತೆರಳುತ್ತಿದ್ದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿಯವರು

ಕಡಬ: ಗೂಡ್ಸ್ ವಾಹನ – ಬೈಕ್ ನಡುವೆ ಢಿಕ್ಕಿ, ಸವಾರ ಗಂಭೀರ ➤ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಬಕಾರಿ ಇಲಾಖೆಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ ➤ ಹಾಸ್ಟೆಲ್ ನಲ್ಲಿ ಸಂಗ್ರಹಿಸಿಡಲಾಗಿದ್ದ 11 ಕೆ.ಜಿ ಗಾಂಜಾ ವಶಕ್ಕೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಸುಳ್ಯ ಹಾಗೂ ಪುತ್ತೂರು ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ತಾಲೂಕಿನ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಬೆನಕ್ ಹಾಸ್ಟೆಲ್ ನ ಕೊಠಡಿಯೊಂದನ್ನು ಬಾಡಿಗೆಗೆ ಪಡೆದ ಪಲ್ಲತ್ತೂರಿನ ಮೊಯ್ದಿನ್ ಕುಂಞಿ ಎಂಬವರು ತನ್ನ ಕುಟುಂಬದೊಂದಿಗೆ ವಾಸವಾಗಿದ್ದು, ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ

ಸುಳ್ಯ: ಅಬಕಾರಿ ಇಲಾಖೆಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ ➤ ಹಾಸ್ಟೆಲ್ ನಲ್ಲಿ ಸಂಗ್ರಹಿಸಿಡಲಾಗಿದ್ದ 11 ಕೆ.ಜಿ ಗಾಂಜಾ ವಶಕ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಡಿಸೋಜ ಎಂದು ಗುರುತಿಸಲಾಗಿದೆ. ಈತ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಶಾಲೆಗೆ ಸರಿಯಾಗಿ ಹೋಗುತ್ತಿರಲಿಲ್ಲ ಎನ್ನಲಾಗಿದೆ. ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತನನ್ನು ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು

ಅಪ್ರಾಪ್ತ ಬಾಲಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಚಿಲ್ಲರೆ ಹಣ ನೀಡಲು ತಡಮಾಡಿದ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್..! ➤ ಪ್ರಯಾಣಿಕನಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ಚಿಲ್ಲರೆ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ಪ್ರಯಾಣಿಕನೋರ್ವ ಕಂಡಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್ ಗೆ ಐವರ್ನಾಡು ಎಂಬಲ್ಲಿ ಪುರುಷೋತ್ತಮ ಎಂಬವರು ಹತ್ತಿ, ಟಿಕೆಟ್ ಶುಲ್ಕವಾಗಿ ನೂರು ರೂಪಾಯಿಯನ್ನು ಕಂಡಕ್ಟರ್ ಗೆ ನೀಡಿದ್ದರು. ಬಳಿಕ ಟಿಕೆಟ್ ಹಿಂದೆ 90 ರೂ. ಎಂದು ಬರೆದು ನಂತರ ಹಿಂತಿರುಗಿಸುವುದಾಗಿ ತಿಳಿಸಿದ್ದರು. ಬಸ್ ಬೆಳ್ಳಾರೆ

ಸುಳ್ಯ: ಚಿಲ್ಲರೆ ಹಣ ನೀಡಲು ತಡಮಾಡಿದ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್..! ➤ ಪ್ರಯಾಣಿಕನಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಆಟೋರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಪುತ್ತೂರು ಪೇಟೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಎಪಿಎಂಸಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯಾವುದೇ ರೀತಿಯ ವಾಮಚಾರದ ಪ್ರಯೋಗಗಳು ಮನೆಗೆ ತಗುಲಬಾರದು ಎಂದರೆ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಮಾನ್ಯವಾಗಿ ಎಷ್ಟೋ ಜನರಿಗೆ ಅನುಭವ ಆಗಿರುತ್ತದೆ, ಮನೆಯಲ್ಲಿ ವಿನಾಕಾರಣ ಜಗಳಗಳು ಅಶಾಂತಿಯ ವಾತಾವರಣ ಉಂಟಾಗುತ್ತದೆ, ಮನೆಯ ಸದಸ್ಯರಿಗೆ ಪದೇಪದೇ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತಿರುತ್ತದೆ, ವೈದ್ಯರ ಬಳಿ ತೋರಿಸಿದರೂ ಕೂಡ

ಯಾವುದೇ ರೀತಿಯ ವಾಮಚಾರದ ಪ್ರಯೋಗಗಳು ಮನೆಗೆ ತಗುಲಬಾರದು ಎಂದರೆ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top