ಕ್ರೈಮ್ ನ್ಯೂಸ್

ಸುಳ್ಯ: ಪಿಕಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 04. ಪಿಕಪ್ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ನಡೆದಿದೆ. ಸುಳ್ಯದಿಂದ ಅರಂತೋಡು ಕಡೆಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಮಡಿಕೇರಿಯಿಂದ ಬದಿಯಡ್ಕ ತೆರಳುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದು ಸವಾರ ಗಾಯಗೊಂಡಿದ್ದು, ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.    

ಸುಳ್ಯ: ಪಿಕಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 04. ಪುತ್ತೂರು ಪೋಲಿಸ್ ಠಾಣಾ ಮುಂಭಾಗ ನಡೆದುಕೊಂದು ಹೋಗುತ್ತಿದ್ದ ವ್ಯಕ್ರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ಧವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ

ಪುತ್ತೂರು: ದ್ವಿಚಕ್ರ ವಾಹನ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ನಿಯಂತ್ರ ತಪ್ಪಿ ರಸ್ತೆಗುರುಳಿದ ಟಯರ್ ಸಾಗಾಟದ ಲಾರಿ ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಶಿರಾಡಿ, ಡಿ. 04. ಮಂಗಳೂರಿನಿಂದ ಬೆಂಗಳೂರಿಗೆ ಟೈಯರ್ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.    

ಶಿರಾಡಿ: ನಿಯಂತ್ರ ತಪ್ಪಿ ರಸ್ತೆಗುರುಳಿದ ಟಯರ್ ಸಾಗಾಟದ ಲಾರಿ ➤ ಕೆಲಕಾಲ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಸ್ನಾನಕ್ಕೆಂದು ನದಿಗಿಳಿದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04. ಕಳೆದ ಮೂರು ದಿನಗಳ ಹಿಂದೆ ಇಲ್ಲಿನ ಬೊಳ್ಳಾರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲೆಂದು ಇಳಿದ ಯುವಕನೋರ್ವ ನೀರಿನಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದು, ಇದೀಗ ಅಗ್ನಿಶಾಮಕ ದಳ ಸಿಬ್ಬಂದಿಗಳ ನಿರಂತರ ಹುಡುಕಾಟದಿಂದ ಯುವಕನ ಮೃತದೇಹವು ಪೆರ್ನೆ ಸಮೀಪ ಬಿಳಿಯೂರು ಎಂಬಲ್ಲಿ ನದಿ ದಡದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸ್ವರ್ಣ ಭೂಮಿ ಬೋರ್ ವೆಲ್ ಕಾರ್ಮಿಕ ಸುಕ್ಮೋ ರಾಮ್ ಗೋವಡೆ ಎನ್ನಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೊಳ್ಳಾರು ಎಂಬಲ್ಲಿ ನದಿ

ಉಪ್ಪಿನಂಗಡಿ: ಸ್ನಾನಕ್ಕೆಂದು ನದಿಗಿಳಿದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 04. ಟೆಂಪೊ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪದ ಪೇಲ್ತಡ್ಕ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೋ ಗೆ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆಯಾಗುವಾಗ ಗಂಡು ಮತ್ತು ಹೆಣ್ಣಿನ ಜಾತಕವನ್ನು ನೋಡುವುದರ ಹಿಂದೆ ಇದೆ ಒಂದು ಬಲವಾದ ಕಾರಣ. ಯಾಕೆ ಅಂದರೆ ಈ ಗಂಡು ಮತ್ತು ಹೆಣ್ಣಿನ ರಾಶಿ ಹೊಂದದೆ ಹೋದಾಗ ಜೀವನದಲ್ಲಿ

ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುಳ್ಯ: ನಿಯಂತ್ರಣ ತಪ್ಪಿ ಮೀನು ಮಾರಾಟದ ದ್ವಿಚಕ್ರ ವಾಹನ ಸ್ಕಿಡ್ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ದ್ವಿಚಕ್ರ ವಾಹನದಲ್ಲಿ ಮೀನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವರು ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆದ ಪರಿಣಾಮ ಗಾಯಗೊಂಡ ಘಟನೆ ಗೊಂಟಡ್ಕ ತಿರುವಿನಲ್ಲಿ ಶುಕ್ರವಾರದಂದು ಸಂಜೆ ನಡೆದಿದೆ. ಗಾಯಗೊಂಡವರನ್ನು ಬೆಟ್ಟಂಪಾಡಿ ನಿವಾಸಿ ಜಬ್ಬಾರ್ ಎಂದು ಗುರುತಿಸಲಾಗಿದೆ. ಇವರು ಇಂದು ಸಂಜೆ ದುಗ್ಗಲಡ್ಕದಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಗೊಂಟಡ್ಕ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಇವರು ಕಳೆದ ಒಂದು ತಿಂಗಳಿನಿಂದ ಸುಳ್ಯ ಭಾಗದಲ್ಲಿ ಮೀನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.

ಸುಳ್ಯ: ನಿಯಂತ್ರಣ ತಪ್ಪಿ ಮೀನು ಮಾರಾಟದ ದ್ವಿಚಕ್ರ ವಾಹನ ಸ್ಕಿಡ್ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಬೈಕ್- ಕಾರು ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮೂಡಂಬೈಲು ನಿವಾಸಿ ಮಿಥುನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಮಿಥುನ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.      

ವಿಟ್ಲ: ಬೈಕ್- ಕಾರು ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೋಮು ಪ್ರಚೋದನಕಾರಿ ಭಾಷಣ ➤ ಎಸ್ಡಿಪಿಐ ಹಾಗೂ ಸಿಎಫ್ಐ ಮುಖಂಡರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03. ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ನೀಡಿರುವ ದೂರಿನನ್ವಯ ಎಸ್ಡಿಪಿಐ ಹಾಗೂ ಸಿಎಫ್ಐ ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ಭಾವನೆಯನ್ನು ಕೆರಳಿಸಿ ವಿದ್ಯಾರ್ಥಿಗಳ ನಡುವೆ ಗಲಭೆಗೆ ಉತ್ತೇಜನ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಾಶ ಮಾಡಿ ಧರ್ಮದ ಆಧಾರದಲ್ಲಿ ಶಾಲಾ ಕಾಲೇಜುಗಳಲ್ಲಿ ಗಲಭೆ ನಡೆಸಲು ಪ್ರಚೋದನೆ ನಡೆಸುವಂತೆ ಭಾಷಣ ಮಾಡಿರುವುದು ಅಲ್ಲದೇ, ಹಿಂದೂ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳಲ್ಲಿ ಮಾತನಾಡಿರುವುದಾಗಿ ಮತ್ತು ಕಾಲೇಜಿನ

ಪುತ್ತೂರು: ಕೋಮು ಪ್ರಚೋದನಕಾರಿ ಭಾಷಣ ➤ ಎಸ್ಡಿಪಿಐ ಹಾಗೂ ಸಿಎಫ್ಐ ಮುಖಂಡರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆಯುಧಗಳನ್ನು ಝಳಪಿಸುತ್ತಾ ಗೋವುಗಳ ಕಳ್ಳತನ ➤ ಆರೋಪಿಗಳ ಪತ್ತೆಹಚ್ಚಿ ಸೂಕ್ತ ಕ್ರಮಕ್ಕೆ ವಿಹಿಂಪ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಗೋಕಳ್ಳರ ಅಟ್ಟಹಾಸ ಮುಂದುವರಿಯುತ್ತಲೇ ಇದ್ದು, ಶುಕ್ರವಾರದಂದು ನಸುಕಿನ ಜಾವ ನಾಲ್ಕು ಗಂಟೆ ವೇಳೆಗೆ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಆಯುಧಗಳನ್ನು ಝಳಪಿಸುತ್ತಾ 3 ದನಗಳನ್ನು ಕದ್ದೊಯ್ದ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ಒಂದರಲ್ಲಿ ಬಂದ ಗೋಕಳ್ಳರು ಆಯುಧಗಳನ್ನು ಝಲಪಿಸುತ್ತಾ ಗೋವುಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ವಿಹಿಂಪ ಬಜರಂಗದಳ ಕಾವೂರು ಪ್ರಖಂಡವು ತೀವ್ರವಾಗಿ ಖಂಡಿಸಿದ್ದು, ಘಟನೆಯ ಹಿಂದೆ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿರುವ ಶಂಕೆ ಹಿನ್ನೆಲೆ ಪೊಲೀಸ್

ಮಂಗಳೂರು: ಆಯುಧಗಳನ್ನು ಝಳಪಿಸುತ್ತಾ ಗೋವುಗಳ ಕಳ್ಳತನ ➤ ಆರೋಪಿಗಳ ಪತ್ತೆಹಚ್ಚಿ ಸೂಕ್ತ ಕ್ರಮಕ್ಕೆ ವಿಹಿಂಪ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top