ಕ್ರೈಮ್ ನ್ಯೂಸ್

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 13.  ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ […]

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂಸಾಚಾರ ಪ್ರಕರಣ: ಇಬ್ಬರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ

(ನ್ಯೂಸ್ ಕಡಬ) newskadaba.com ಇಂಫಾಲ್, ನ. 13. ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಲ್ಲಿನ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಶವ ಪತ್ತೆಯಾಗಿದೆ. ಜೊತೆಗೆ 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ನ. 12ರಂದು ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಂದು ದಿನದ ಹಿಂದೆ, ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಎನ್‌ಕೌಂಟರ್ ನಲ್ಲಿ

ಹಿಂಸಾಚಾರ ಪ್ರಕರಣ: ಇಬ್ಬರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 13. ಮೈಸೂರು ಮೂಲದ ಖ್ಯಾತ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅವರು ಅಮೆರಿಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಶರತ್‌ ಜೋಯಿಸ್‌ ಅವರು ಯೋಗಾಭ್ಯಾಸ ಮತ್ತು ಯೋಗಪಾಠಕ್ಕೆ ತಮ್ಮ ಬದುಕನ್ನು ಮೀಸಲಾಗಿಟ್ಟಿದ್ದರು. ಖ್ಯಾತ ಪಾಪ್‌ ಗಾಯಕಿ ಮಡೋನಾ ಸೇರಿದಂತೆ ಹಲವರಿಗೆ ಯೋಗ ಕಲಿಸಿದ ಖ್ಯಾತಿಯೂ ಅವರಿಗಿದೆ. ಅವರು ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗರಾಗಿದ್ದಾರೆ. ಅಮೆರಿಕದಲ್ಲಿ ನೆಲೆಸಿದ್ದ ಅವರು ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದರು.

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 13. ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಸಿಬ್ಬಂದಿ ನಿರ್ಲಕ್ಷದಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.  

ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 13. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲು ಮಾಡಿದೆ. ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ನ.11ರಂದು ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್ಐಎ ದಾಳಿ ನಡೆಸಿದೆ. ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ

ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೀದರ್, ನ. 12. ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ. ಮೃತಪಟ್ಟವರು ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಎಂದು ಗುರುತಿಸಲಾಗಿದೆ. ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top